LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Tumakuru

ದಲಿತ ಮಹಿಳೆ ಹತ್ಯೆಗೈದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು: 14 ವರ್ಷಗಳ ಹಿಂದೆ ದಲಿತ ಮಹಿಳೆಯೊಬ್ಬರನ್ನು ಹತ್ಯೆಗೈದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 21 ಮಂದಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

2010ರ ಜೂನ್ 28ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಡಾಬಾ ಹೊನ್ನಮ್ಮ ಎಂಬ ದಲಿತ ಮಹಿಳೆ ಕೊಲೆಯಾಗಿತ್ತು. 14 ವರ್ಷಗಳ ಬಳಿಕ ಇದೀಗ ಒಂದೇ ಗ್ರಾಮದ ಬರೋಬ್ಬರಿ 21 ಮಂದಿಗೆ ತುಮಕೂರು 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ತುಮಕೂರಿನ 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ದೋಷಿ ಎಂದು ಕೋರ್ಟ್ ಆದೇಶಿಸಿತ್ತು. ಇದೀಗ ಕೋರ್ಟ್ 21 ಮಂದಿಗೂ ಜೀವಾವಧಿ ಶಿಕ್ಷೆ ವಿಧಿಸಿದ್ದು, ಒಟ್ಟು 2,83,200 ರೂ. ದಂಡ ವಿಧಿಸಿದೆ. ಅಂದರೆ ತಲಾ ಒಬ್ಬರಿಗೆ 13,500 ದಂಡ ವಿಧಿಸಿದೆ.

ರಂಗನಾಥ, ಮಂಜುಳಾ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ, ಸತ್ಯಪ್ಪ, ಸತೀಶ, ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಶಿಕ್ಷೆಗೊಳಗಾದ ಅಪರಾಧಿಗಳಾಗಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2019ರ ಜೂನ್ 20ರಂದು ಹೊನ್ನಮ್ಮ ಎಂಬ ದಲಿತ ಮಹಿಳೆಯ ಕೊಲೆ ನಡೆದಿತ್ತು. ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಈ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ಹೊನ್ನಮ್ಮ ದೂರು ನೀಡಿದ್ದರು.

ಇದರಿಂದ ಗ್ರಾಮಸ್ಥರು ಹಾಗೂ ಹೊನ್ನಮ್ಮ ಮಧ್ಯೆ ದ್ವೇಷ ಉಂಟಾಗಿ ಜಗಳ ನಡೆಯುತ್ತಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಆರೋಪಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು. ಮೃತಪಟ್ಟ ಹೊನ್ಮಮ್ಮ ಎರಡು ಬಾರಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಅಲ್ಲದೆ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಬಿಜೆಪಿ ಘಟಕದ ಪದಾಧಿಕಾರಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು