LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ದುಲೀಪ್ ಟ್ರೋಪಿ: ಭಾರತ ತಂಡದ ಬಹುತೇಕ ಆಟಗಾರರು ಭಾಗಿ

ಬೆಂಗಳೂರು: ದೇಶಿ ಕ್ರಿಕೆಟ್‍ನ ಆರಂಭಿಕ ಪಂದ್ಯಾವಳಿಯಾದ ದುಲೀಪ್ ಟ್ರೋಫಿ ಟೂರ್ನಿಯ ಮೊದಲ ಹಂತದ ಪಂದ್ಯಗಳನ್ನು ಅನಂತಪುರದಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಇದ ರಲ್ಲಿ ಟೀಮ್ ಇಂಡಿಯಾದ ಬಹುತೇಕ ಟೆಸ್ಟ್ ಆಟಗಾರರು ಆಡುವುದು ವಿಶೇಷ.ಆದರೆ ಯಾರ್ಕರ್ ಸ್ಪೆಷಲಿಸ್ಟ್ ಜಸ್‍ಪ್ರೀತ್ ಬುಮ್ರಾ, ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಗಾಯಾಳಾಗಿರುವ ವೇಗಿ ಮೊಹಮ್ಮದ್ ಶಮಿ ಅವರಿಗೆ ರಿಯಾಯಿತಿ ನೀಡಲಾಗಿದೆ.

ಹಾಗೆಯೇ ಸೀನಿಯರ್ ಕ್ರಿಕೆಟಿಗರಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಕೂಡ ವಿನಾಯಿತಿ ಪಡೆಯುವ ಸಾಧ್ಯತೆ ಇದೆ. ಪಂದ್ಯಾವಳಿಯಲ್ಲಿ ಆಡುವ ಅಥವಾ ಆಡದಿರುವ ಆಯ್ಕೆಯನ್ನು ಇವರಿಗೇ ಬಿಡಲಾಗಿದೆ. ಭಾರತ ತಂಡದ ಆಟಗಾರರು ಪೂರ್ತಿ ಸರಣಿಯಲ್ಲಿ ಅಲ್ಲದೇ ಹೋದರೂ ಕೆಲವು ಪಂದ್ಯಗಳಲ್ಲಾದರೂ ಆಡಬೇಕು ಎಂದು ಬಿಸಿಸಿಐ ಈಗಾಗಲೇ ಸೂಚಿಸಿದೆ.

ಚಿನ್ನಸ್ವಾಮಿಯಲ್ಲಿ ಪಂದ್ಯ:ದುಲೀಪ್ ಟ್ರೋಫಿ ಪಂದ್ಯಾವಳಿಯ ಮೊದಲ ಸುತ್ತಿನ 2 ಹಂತದ ಪಂದ್ಯಗಳನ್ನು ಆಂಧ್ರಪ್ರದೇಶದ ಅನಂತಪುರದಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿತ್ತು. ಆದರೀಗ ಒಂದು ಹಂತದ ಪಂದ್ಯವನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ’ಗೆ ಸ್ಥಳಾಂತರಿಸಲಾಗಿದೆ. ಪ್ರಯಾಣ, ಸಾಗಾಣಿಕೆ ಹಾಗೂ ಕೆಲವು ಉನ್ನತ ದರ್ಜೆಯ ಕ್ರಿಕೆಟಿಗರಿಗೆ ಎದುರಾಗುವ ವಸತಿ ಸಮಸ್ಯೆಯಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಬಿಸಿಸಿಐ ಮೂಲ ತಿಳಿಸಿದೆ. ಅನಂತಪುರ ಬೆಂಗಳೂರಿನಿಂದ ಸುಮಾರು 230 ಕಿ.ಮೀ. ದೂರದಲ್ಲಿದ್ದು, ಇಲ್ಲಿಗೆ ವಿಮಾನ ಸಂಚಾರ ಇಲ್ಲ.

ದುಲೀಪ್ ಟ್ರೋಫಿ ಪಂದ್ಯಾವಳಿ ಸೆ. 5ರಂದು ಮೊದಲ್ಗೊಳ್ಳಲಿದೆ. ಅನಂತರ ಪ್ರವಾಸಿ ಬಾಂಗ್ಲಾದೇಶ ವಿರುದ್ಧ ಭಾರತ ತಂಡ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಮೊದಲ ಟೆಸ್ಟ್ ಚೆನ್ನೈಯಲ್ಲಿ (ಸೆ. 19-23) ಮತ್ತು ದ್ವಿತೀಯ ಟೆಸ್ಟ್ ಕಾನ್ಪುರದಲ್ಲಿ ನಡೆಯಲಿದೆ (ಸೆ. 27-ಅ. 1).

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು