LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ತಿಂಗಳಿಗೆ 2,500 ರೂ.: ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್

ನವದೆಹಲಿ: ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಆರ್ಥಿಕ ನೆರವು ನೀಡುವ 'ಪ್ಯಾರಿ ದೀದಿ ಯೋಜನೆ'ಯನ್ನು ಜಾರಿಗೆ ತರುವುದಾಗಿ ಕಾಂಗ್ರೆಸ್ ಸೋಮವಾರ ಘೋಷಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಳವಡಿಸಿಕೊಂಡ ಮಾದರಿಯಲ್ಲೇ ಈ ಯೋಜನೆ ದೆಹಲಿಯಲ್ಲಿ ಜಾರಿಯಾಗಲಿದೆ ಎಂದಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಯೋಜನೆಯನ್ನು ಘೋಷಿಸಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಮೊದಲ ಸಚಿವ ಸಂಪುಟದ ಸಭೆಯಲ್ಲೇ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.

'ಇಂದು ನಾನು ಪ್ಯಾರಿ ದೀದಿ ಯೋಜನೆಗೆ ಚಾಲನೆ ನೀಡಲು ಇಲ್ಲಿಗೆ ಬಂದಿದ್ದೇನೆ. ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವ ವಿಶ್ವಾಸವಿದೆ ಮತ್ತು ಹೊಸ ಸಚಿವ ಸಂಪುಟದ ಮೊದಲ ದಿನದಲ್ಲಿಯೇ ನಾವು ರಾಜಧಾನಿಯಲ್ಲಿರುವ ಪ್ರತಿ ಮಹಿಳೆಗೆ ತಿಂಗಳಿಗೆ 2,500 ರೂ. ಆರ್ಥಿಕ ನೆರವನ್ನು ನೀಡುವ ಯೋಜನೆಯನ್ನು ನಾವು ಜಾರಿಗೆ ತರುತ್ತೇವೆ' ಎಂದು ಹೇಳಿದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿಯಲ್ಲಿ ಚುನಾವಣೆ ನಡೆಯಲಿದೆ.

ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದ್ರ ಯಾದವ್, ಪಕ್ಷದ ದೆಹಲಿ ಉಸ್ತುವಾರಿ ಖಾಜಿ ನಿಜಾಮುದ್ದೀನ್ ಮತ್ತು ಇತರ ಹಿರಿಯ ನಾಯಕರು ಘೋಷಣೆಯ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಎಎಪಿ ಮತ್ತು ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದರೂ, ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿವೆ. ಚುನಾವಣೆಯಲ್ಲಿ ಸತತ ನಾಲ್ಕನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿರುವ ಎಎಪಿ, ಹಲವು ವಿಶೇಷ ಯೋಜನೆಗಳನ್ನು ಈಗಾಗಲೇ ಘೋಷಿಸಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಕೂಡ ಇದೀಗ ಹಲವು ಘೋಷಣೆಗಳನ್ನು ಮಾಡುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು