LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರಿಗೆ 8,500 ರೂ. ಗ್ಯಾರಂಟಿ ಯೋಜನೆ

ನವದೆಹಲಿ: ಈ ಬಾರಿ ದೆಹಲಿ ಚುನಾವಣೆಯಲ್ಲಿ ಭರವಸೆಗಳ ಮಹಾಪೂರವೇ ಹರಿದುಬರುತ್ತಿದೆ. ಆಮ್ ಆದ್ಮಿ ಪಕ್ಷ ಮೊದಲು ಮಹಿಳಾ ಸಮ್ಮಾನ್ ಯೋಜನೆಯನ್ನು ಘೋಷಿಸಿತು. ನಂತರ ಬಿಜೆಪಿ ಕೂಡ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಆದರೆ ಈಗ ಕಾಂಗ್ರೆಸ್ ಕೂಡ ದೊಡ್ಡ ಘೋಷಣೆಗಳನ್ನು ಮಾಡಲು ಪ್ರಾರಂಭಿಸಿದೆ. ಇಂದು ಕಾಂಗ್ರೆಸ್ ಪಕ್ಷವು ದೆಹಲಿಯ ವಿದ್ಯಾವಂತ ನಿರುದ್ಯೋಗಿ ಯುವಕರಿಗೆ 8500 ರೂ.ಗಳನ್ನು ನೀಡುವುದಾಗಿ ಘೋಷಿಸಿದೆ. ಇದಕ್ಕೂ ಮುಂಚೆಯೇ, ಕಾಂಗ್ರೆಸ್ ಪಕ್ಷವು ದೆಹಲಿಯ ಜನರಿಗೆ ಅನೇಕ ಚುನಾವಣಾ ಭರವಸೆಗಳನ್ನು ನೀಡಿದೆ.

ಯುವಕರು ತರಬೇತಿ ಪಡೆದ ಕ್ಷೇತ್ರಗಳಲ್ಲಿ ಅವರನ್ನು ನಿಯೋಜಿಸಲು ನಾವು ಪ್ರಯತ್ನಿಸುತ್ತೇವೆ. ಇದರಿಂದ ಅವರು ತಮ್ಮ ಕೌಶಲ್ಯಗಳನ್ನು ಸುಧಾರಿಸಿಕೊಳ್ಳಬಹುದು. ಜನವರಿ 6ರಂದು ಕಾಂಗ್ರೆಸ್ 'ಪ್ಯಾರಿ ದೀದಿ ಯೋಜನೆ'ಯನ್ನು ಘೋಷಿಸಿತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರೂ.ಗಳ ಆರ್ಥಿಕ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿತು.

ಜನವರಿ 8ರಂದು ಪಕ್ಷವು 'ಜೀವನ ರಕ್ಷಾ ಯೋಜನೆ'ಯನ್ನು ಘೋಷಿಸಿತು. ಇದರಲ್ಲಿ 25 ಲಕ್ಷ ರೂ.ಗಳವರೆಗೆ ಉಚಿತ ಆರೋಗ್ಯ ವಿಮೆಯ ಭರವಸೆ ನೀಡಿತು. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ದೆಹಲಿ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇದುವರೆಗೆ 49 ಅಭ್ಯರ್ಥಿಗಳನ್ನು ಘೋಷಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು