LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಅರ್ಚಕರು, ಗ್ರಂಥಿಗಳಿಗೆ ತಿಂಗಳಿಗೆ ₹ 18,000: ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ತಮ್ಮ ಪಕ್ಷವು 'ಪೂಜಾರಿ- ಗ್ರಂಥಿ ಸಮ್ಮಾನ್ ಯೋಜನೆ'ಯನ್ನು ಪ್ರಾರಂಭಿಸಲಿದೆ. ದೇವಾಲಯದ ಅರ್ಚಕರು ಮತ್ತು ಗುರುದ್ವಾರಗಳ ಗ್ರಂಥಿಗಳಿಗೆ ಮಾಸಿಕ 18,000 ರೂ. ಭತ್ಯೆ ನೀಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿಯ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸೋಮವಾರ ಘೋಷಿಸಿದ್ದಾರೆ.

ಮುಂದಿನ ವರ್ಷ ಫೆಬ್ರುವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಮುನ್ನ ಈ ಘೋಷಣೆ ಹೊರಬಿದ್ದಿದ್ದು, ಸತತ ನಾಲ್ಕನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಎಎಪಿ ಪ್ರಯತ್ನ ನಡೆಸುತ್ತಿದೆ. ಹಲವು ವಿಶೇಷ ಯೋಜನೆಗಳನ್ನು ಘೋಷಿಸುತ್ತಿದೆ.

'ಪೂಜಾರಿಗಳು ಮತ್ತು ಗ್ರಂಥಿಗಳು ನಮ್ಮ ಸಮಾಜದ ಪ್ರಮುಖ ಭಾಗವಾಗಿದ್ದಾರೆ. ಆದರೆ, ಅವರನ್ನು ನಿರ್ಲಕ್ಷ್ಯಿಸಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ, ನಾವು ಅವರನ್ನು ಬೆಂಬಲಿಸಲು ಈ ಯೋಜನೆಯನ್ನು ಪರಿಚಯಿಸುತ್ತಿದ್ದೇವೆ. ಈ ಯೋಜನೆ ಅಡಿಯಲ್ಲಿ ಅವರಿಗೆ ತಿಂಗಳಿಗೆ 18,000 ರೂ. ಭತ್ಯೆಯನ್ನು ನೀಡಲಾಗುತ್ತದೆ. ಈ ಯೋಜನೆಗೆ ನಾಳೆಯಿಂದಲೇ ನೋಂದಣಿ ಪ್ರಾರಂಭವಾಗುತ್ತದೆ' ಎಂದು ಕೇಜ್ರಿವಾಲ್ ಹೇಳಿದರು.

ಮಂಗಳವಾರ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ಮಂದಿರಕ್ಕೆ ಭೇಟಿ ನೀಡಿ, ಅಲ್ಲಿನ ಅರ್ಚಕರ ನೋಂದಣಿ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸುವುದಾಗಿ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು