LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ದೇವರು ರುಜು ಮಾಡಿದನು' ಶೀರ್ಷಿಕೆ ಬಂತು

ಜನರ ನಾಡಿಮಿಡಿತವನ್ನು ಅರಿತಿರುವ, ನಮ್ಮ ನಡುವೆ ನಡೆಯುವ ಘಟನೆಯನ್ನು ನಿರ್ಮಾಪಕರಿಗೆ ಹೊರೆಯಾಗದೆ ದೃಶ್ಯ ರೂಪಕ್ಕೆ ಇಳಿಸುವ ನಿರ್ದೇಶಕರಲ್ಲಿ ನಿಸ್ಸೀಮರು ಸಿಂಪಲ್ ಸುನಿ.. ಅಪಾರ ಭಾಷಾಭಿಮಾನ ಹೊಂದಿರುವ ಕೆಲಸಲ್ಲಿ ಬದ್ಧತೆ, ಹಾಗೂ ಶುದ್ಧತೆ ತೋರುವ ನಿರ್ದೇಶಕ ಸುನಿ ಈಗ ದೇವರು ರುಜು ಮಾಡಿದನು ಎನ್ನುತ್ತಿದ್ದಾರೆ. ದೇವರು ರುಜು ಮಾಡಿದನು ಚಿತ್ರ ಮೂಲಕ ಬೆಳ್ಳಿಪರದೆಗೆ ನವ ನಾಯಕನ್ನು ಪರಿಚಯಿಸಿದ್ದಾರೆ.

ರಂಗಭೂಮಿ ಕಲಾವಿದರಾಗಿರುವ, ಅಪಾರ ಸಿನಿಮಾ ಪ್ರೀತಿ ಹೊಂದಿರುವ ವೀರಾಜ್ ಅವರು ಹೀರೋ ಆಗಿ ಸ್ಯಾಂಡಲ್ ವುಡ್ ಗೆ ಅಡಿ ಇಡುತ್ತಿದ್ದಾರೆ. ಕೈಯಲ್ಲಿ ಗಿಟಾರ್ ಹಿಡಿದು ರಕ್ತಸಿಕ್ತರಾಗಿ ಕಾಣಿಸಿಕೊಂಡಿರುವ ವೀರಾಜ್ ಗೆ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಿಂಪಲ್ ಸುನಿ ಅವರ ಕಥನ, ವಚನ, ರಚನ ನಿರ್ದೇಶನ ಈ ಚಿತ್ರಕ್ಕಿದೆ.

ಪುಟ್ಟದೊಂದು ಝಲಕ್ ಮೂಲಕ ಹೀರೋ ಹಾಗೂ ಟೈಟಲ್ ರಿವೀಲ್ ಮಾಡಲಾಗಿದೆ. ಈಗಾಗಲೇ ನಾಯಕ ವೀರಾಜ್ ಟೀಸರ್ ಶೂಟ್ ಮಾಡಲಾಗಿದೆ. ರಕ್ತಚರಿತ್ರೆ ಜೊತೆಗೆ ಸಂಗೀತದ ಕಥೆಯನ್ನು ದೇವರು ರುಜು ಮಾಡಿದನು ಸಿನಿಮಾ ಮೂಲಕ ಸುನಿ ತೆರೆಯಲ್ಲಿ ಅನಾವರಣ ಮಾಡಲು ಹೊರಟಿದ್ದಾರೆ. ಇದೇ ತಿಂಗಳ 20ರಂದು ಸಿನಿಮಾದ ಮುಹೂರ್ತ ನಡೆಯಲಿದ್ದು, ಮುಹೂರ್ತದ ನಂತರ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

ಗ್ರೀನ್ ಹೌಸ್ ಮೂವೀಸ್ ಬ್ಯಾನರ್ ನಡಿಯಲ್ಲಿ ಬರ್ತಿರುವ ದೇವರು ರುಜು ಮಾಡಿದನು ಸಿನಿಮಾಗೆ ಗೋವಿಂದ್ ರಾಜ್ ಸಿಟಿ ನಿರ್ಮಾಣ ಮಾಡುತ್ತಿದ್ದಾರೆ. ಜೆಜೆ ಮತ್ತು ಜೇಡ್ ಸ್ಯಾಂಡಿ ಸಂಗೀತ ನಿರ್ದೇಶನ, ಸಂತೋಷ್ ರೈ ಪತಾಜಿ ಛಾಯಾಗ್ರಹಣ, ವಿನಯ್ ಸಂಕಲನ ಚಿತ್ರಕ್ಕಿದೆ. ಬೆಂಗಳೂರು, ಉತ್ತರ ಕನ್ನಡ, ಗೋವಾ ಸುತ್ತಮುತ್ತ ದೇವರು ರುಜು ಮಾಡಿದನು ಚಿತ್ರದ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು