LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ದೇವಸ್ಥಾನಗಳ ಹುಂಡಿ ಒಡೆದು ಹಣ ಕಳ್ಳತನ ಮಾಡಿ ಸಾವಿರಾರು ರೂಪಾಯಿ ಲೂಟಿ

ಬಾಗೇಪಲ್ಲಿ: ಅಕ್ಕ ಪಕ್ಕದ ಎರಡು ದೇವಸ್ಥಾನಗಳ ಹುಂಡಿ ಒಡೆದು ಹಣ ಕಳ್ಳತನ ಮಾಡಿ ಸಾವಿರಾರು ರೂಪಾಯಿಗಳನ್ನು ದೋಚಿರುವ ಘಟನೆ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಶ್ರೀ ಬೈಲಾಂಜನೇಯಸ್ವಾಮಿ ದೇವಸ್ಥಾನ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ ನಡೆದಿದೆ.

ಶ್ರೀ ಬೈಲಾಂಜನೇಯಸ್ವಾಮಿ ದೇವಸ್ಥಾನ : ಇಂದು ಬೆಳಗಿನ ಜಾನ ದೇವಸ್ಥಾನದ ಆವರಣ ಸ್ವಚ್ಚಗೊಳಿಸುವ ಮಹಿಳೆಯು ಆವರಣದ ಬಾಗಿಲು ತೆರೆದಾಗ ಕಳ್ಳತನ ನಡೆದಿರುವುದು ಗೊತ್ತಾಗಿ ದೇವಸ್ಥಾನದ ಅರ್ಚಕರ ಗಮನಕ್ಕೆ ತಂದಿದ್ದು, ಕೂಡಲೇ ಅರ್ಚಕರು ಪೊಲೀಸರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿ ಕಳ್ಳರು ದೇವಸ್ಥಾನದ ಹಿಂಭಾಗದ ಮಳಿಗೆಗಳ ಮೇಲ್ಚಾವಣಿಯ ಮುಖಾಂತರ ದೇವಸ್ಥಾನದೊಳಗೆ ಇಳಿದು ದೇವಸ್ಥಾನಕ್ಕೆ ಅಳವಡಿಸಲಾಗಿದ್ದ ಎರಡು ಕಬ್ಬಿಣದ ಗ್ರಿಲ್ಸ್ ಗಳನ್ನು ಮುರಿದು, ಗರ್ಭಗುಡಿಯ ಬಾಗಿಲನ್ನು ಮುರಿದು ದೇವಸ್ಥಾನದ ಒಳಗಡೆ ಇಡಲಾಗಿದ್ದ ಹುಂಡಿಯನ್ನು ಒಡೆದು ಹುಂಡಿಯಲ್ಲಿದ್ದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ದೇವಸ್ಥಾನವು ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು ಕಳೆದ 14 ತಿಂಗಳುಗಳಿಂದ ಹುಂಡಿ ತೆರೆದಿಲ್ಲ ಎನ್ನಲಾಗಿದ್ದು, ಪ್ರತಿವರ್ಷ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಹಣ ಹುಂಡಿಯಲ್ಲಿ ಸಂಗ್ರಹವಾಗುತ್ತಿತ್ತು ಎನ್ನಲಾಗಿದೆ.ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ :- ಶ್ರೀ ಬೈಲಾಂಜನೇಯಸ್ವಾಮಿ ದೇವಸ್ಥಾನದ ಪಕ್ಕದಲ್ಲೇ ಇರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹುಂಡಿಯನ್ನು ಸಹ ಒಡೆದು ಹಣ ದೋಚಲಾಗಿದ್ದು, ಕಳೆದ ಜನವರಿ 15 ರಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು ಅಂದಿನಿಂದ ಈ ವರೆವಿಗೂ ಸಂಗ್ರಹವಾಗಿ ಇರಬಹುದು ಎನ್ನಲಾಗಿರುವ ಸುಮಾರು 10-15 ಸಾವಿರಷ್ಟು ಕಳುವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸಿಸಿ ಕ್ಯಾಮರಾ ಅಳವಡಿಸಲು ಆಗ್ರಹ : ಶ್ರೀ ಬೈಲಾಂಜನೇಯಸ್ವಾಮಿ ದೇವಸ್ಥಾನವು ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು ಈ ಕೂಡಲೇ ಅಧಿಕಾರಿಗಳು ಸರ್ಕಾರದ ಗಮನಕ್ಕೆ ತಂದು ಸಿಸಿ ಕ್ಯಾಮರಾಗಳನ್ನು ಅಳವಡಿಸಿಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಪ್ರಶಾಂತ್ ವರ್ಣಿ, ಅಪರಾಧ ವಿಭಾಗದ ಆರಕ್ಷಕ ಉಪ ನಿರೀಕ್ಷಕ ಮುನಿರತ್ನಂ, ಮತ್ತು ಸಿಬ್ಬಂದಿ, ಬೆರಳಚ್ಚು ತಜ್ಞರು, ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗೇಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು