LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ದೇಶದ ಆರ್ಥಿಕ ಪ್ರಗತಿಯಲ್ಲಿ ಕೈಜೋಡಿಸುವಂತೆ ಲೆಕ್ಕಪರಿಶೋಧಕರಿಗೆ ಉದ್ಯಮಿ ಟಿ.ವಿ.ಮೋಹನದಾಸ ಪೈ ಕರೆ

ಬೆಂಗಳೂರು: ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆಂಟ್ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ 9700 ಕ್ಕೂ ಅಧಿಕ ಮಂದಿ ಪದವೀಧರರಿಗೆ ಪದವಿ ಪ್ರಧಾನ ಘಟಿಕೋತ್ಸವ ಕಾರ್ಯಕ್ರಮ ನಡೆಯಿತು.ಪದವಿ ಪ್ರಧಾನ ಪ್ರಮುಖ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದು, ದಹಲಿ, ಮುಂಬೈ, ಚನೈ ಸಹಿತ ದೇಶಾದ್ಯಂತ 13 ನಗರಗಳಲ್ಲಿ ಏಕಕಾಲಕ್ಕೆ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ 9700 ಕ್ಕೂ ಅಧಿಕ ಮಂದಿ ಪದವೀಧರರಿಗೆ ಪದವಿ ಪ್ರಧಾನ ಮಾಡಲಾಯಿತು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹೆಸರಾಂತ ಉದ್ಯಮಿ ಆರೀನ್ ಕ್ಯಾಪಿಟಲ್ ಹಾಗೂ ಮಣಿಪಾಲ ಗ್ಲೋಬಲ್ ಎಜುಕೇಷನ್ ಚೇರಮನ್ ಟಿ.ವಿ ಮೋಹನದಾಸ ಪೈ ಅವರು ಪದವಿ ಪ್ರಧಾನ ಮಾಡಿದರು.ಬೆಂಗಳೂರು ಸಹಿತ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ 900 ಮಂದಿ ಸಿಎ ಪದವೀಧರರು ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪದವಿ ಪತ್ರ ಸ್ವೀಕರಿಸಿದರು.

ಸಿಎ ಪದವೀಧರರನ್ನು ಉದ್ದೇಶಿಸಿ ಮಾತನಾಡಿದ ಉದ್ಯಮಿ ಟಿ.ವಿ.ಮೋಹನದಾಸ ಪೈ ಭಾರತದ ಆರ್ಥಿಕ ಪ್ರಗತಿಯಲ್ಲಿ ಸಿಎ ಪದವೀಧರರ ಪಾತ್ರ ಮಹತ್ವಗಾಗಿದ್ದು ದೇಶದ ಆರ್ಥಿಕ ಪ್ರಗತಿಯಲ್ಲಿ ಕೈಜೋಡಿಸುವಂತೆ ಕರೆನೀಡಿದರು.ಭಾರತ ಮುಂದಿನ ಹತ್ತು ವರ್ಷದಲ್ಲಿ ದೊಡ್ಡ ಪ್ರಮಾಣದ ಆರ್ಥಿಕ ಪ್ರಗತಿ ಸಾಧಿಸಲಿದ್ದು, ಜಾಗತಿಕ ಮಟ್ಟದಲ್ಲಿ ಬಲಿಷ್ಠ ಆರ್ಥಿಕ ಶಕ್ತಿಯಾಗಿಹೊರಹಮ್ಮಲಿದೆ ಎಂದರು.

ಪ್ರಾಮಾಣಿಕತೆ, ವೃತ್ತಿ ನಿಷ್ಠತೆ, ಪರಿಶ್ರಮ ಯಶಸ್ಸಿನ ಮೆಟ್ಟಿಲಾಗಿದೆ ಎಂದ ಅವರು ಜಾಗತಿಕ ಮಟ್ಟದಲ್ಲಿ ಭಾರತ ಲೆಕ್ಕ ಪರಿಶೋಧಕರಿಗೆ ವಿಫುಲ ಅವಕಾಶವಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಲು ಪ್ರಯತ್ನಿಸಿ ಎಂದು ಯುವ ಪದವೀಧರರಿಗೆ ಕಿವಿ ಮಾತು ಹೇಳಿದರು.ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ಅಧ್ಯಕ್ಷ ಸಿಎ ರಂಜಿತ್ ಕುಮಾರ್ ಅಗವಾಲ ಮಾತನಾಡಿ ದೇಶಾದ್ಯಂತ 9700 ಕ್ಕೂ ಅಧಿಕ ಮಂದಿಗೆ ಪದವಿ ಪ್ರಧಾನ ಮಾಡಲಾಗಿದೆ. ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಮಂದಿ ಲೆಕ್ಕಪರಿಶೋಧಕರಿದ್ದು ಪ್ರತಿ ಮೂವರಲ್ಲಿ ಒಬ್ಬರು ಮಹಿಳೆಯರಾಗಿರುವುದು ಹೆಮ್ಮೆಯ ವಿಷಯ ಎಂದರು.

ಲೆಕ್ಕಪರಿಶೋಧಕ ವೃತ್ತಿಯ ಗೌರವ ಕಾಪಾಡುವಂತೆ ನೂತನ ಪದವಿದರರಿಗೆ ಕಿವಿಮಾತು ಹೇಳಿದರು.ಬಾರತೀಯ ಲೆಕ್ಕಪರಿಶೋಧಕರ ಸಂಘದ ರಾಷ್ಟ್ರೀಯ ಪರಿಷತ್ ಸದಸ್ಯರಾದ ಸಿಎ ಕೋಥಾಸ್ ಎಸ್ ಶ್ರೀನುವಾಸ್, ಸಿಎ ಪ್ರಸನ್ನ ಕುಮಾರ್. ಸಿಎ ಗೀತಾ ಎಬಿ ಹಾಗೂ ಬೆಂಗಳೂರು ಶಾಖೆಯ ಅಧ್ಯಕ್ಷ ಸಿಎ ಪ್ರಮೋದ್ ಆರ್ ಹೆಗಡೆ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು