LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ದೇಶ ಕಟ್ಟಲು ನೆಹರೂ ಹಾಕಿರುವ ಅಡಿಪಾಯಕ್ಕೆ ಬೆಂಗಳೂರೇ ಸಾಕ್ಷಿ; DKS

ಬೆಂಗಳೂರು: ಐವತ್ತು ಜನ ಕಾಂಗ್ರೆಸ್ ಎಂಎಲ್ಎ ಗಳಿಗೆ ಬಿಜೆಪಿಯವರು 50 ಕೋಟಿ ಆಮಿಷ ಒಡ್ಡಿರುವುದು ನಿಜ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ ಐವತ್ತು ಶಾಸಕರಿಗೆ ತಲಾ 50 ಕೋಟಿಯಂತೆ ಬಿಜೆಪಿಯವರು ಆಮಿಷ ಒಡ್ದುತ್ತಿದ್ದಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದರು. ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಮುಖ್ಯಮಂತ್ರಿಯ ಬಳಿ ತಿಳಿಸಿದ್ದಾರೆ. ಈ ಸಂಗತಿಯನ್ನು ಮುಖ್ಯಮಂತ್ರಿಗಳು ಮಾಧ್ಯಮದ ಮುಂದೆ ಹೇಳಿದ್ದಾರೆ. ಮಿಕ್ಕ ವಿಚಾರಗಳನ್ನು ಅನಂತರ ನಿಮಗೆ ತಿಳಿಸುತ್ತೇನೆ ಎಂದು ತಿಳಿಸಿದರು.

ದೇಶದ ನಿರ್ಮಾಣಕ್ಕಾಗಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಹಾಕಿರುವ ಭದ್ರ ಬುನಾದಿಗೆ ಬೆಂಗಳೂರು ಸಾಕ್ಷಿ ಎಂದು ತಿಳಿಸಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ನಡೆದ ಜವಾಹರ್ ಲಾಲ್ ನೆಹರೂ ಜಯಂತಿ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿ, ನೆಹರೂ ಅವರ ಕೊಡುಗೆ ಹಾಗೂ ಮಕ್ಕಳ ಏಳಿಗೆಗೆ ಕಾಂಗ್ರೆಸ್ ಪಕ್ಷದ ಕೊಡುಗೆಗಳನ್ನು ಸ್ಮರಿಸಿದರು. ನೆಹರೂ ಅವರು ಬೆಂಗಳೂರಿನಲ್ಲಿ ಸಾರ್ವಜನಿಕ ಉದ್ದಿಮೆಗಳು ಹೆಚ್ಎಎಲ್, ಐಟಿಐ, ಬಿಇಎಂಎಲ್, ಬಿಇಎಲ್, ಇಸ್ರೋ ಸೇರಿದಂತೆ ಅನೇಕ ಉದ್ದಿಮೆಗಳು ಆರಂಭಿಸಿದರು. ಇಲ್ಲಿರುವ ಮಾನವ ಸಂಪನ್ಮೂಲ, ಗುಣಮಟ್ಟದ ಶಿಕ್ಷಣದ ಮೇಲೆ ವಿಶೇಷ ಆದ್ಯತೆ ನೀಡಿದರು. ಅವರು ಹಾಕಿಕೊಟ್ಟ ಅಡಿಪಾಯದಲ್ಲಿ ನಾವು ಇಂದು ಈ ದೇಶ ಕಟ್ಟುತ್ತಿದ್ದೇವೆ. ಮಕ್ಕಳಿಗೆ ಶಿಕ್ಷಣ ಸಿಗಬೇಕು, ಮಕ್ಕಳು ಶಾಲೆಯಿಂದ ವಿಮುಖರಾಗಬಾರದು ಎಂದು ಎಸ್ ಎಂ ಕೃಷ್ಣ ಅವರ ಅವಧಿಯಲ್ಲಿ ಬಿಸಿಯೂಟ ಕಾರ್ಯಕ್ರಮ ನೀಡಲಾಯಿತು. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್, ಕ್ಷೀರಭಾಗ್ಯ, ಮೊಟ್ಟೆ ಭಾಗ್ಯ ನೀಡಿ ಪೌಷ್ಠಿಕತೆ ಹೆಚ್ಚಿಸಿದರು. ಇಂದಿರಾ ಗಾಂಧಿ ಅವರ ಕಾಲದಲ್ಲಿ ಅಂಗನವಾಡಿ ಕಾರ್ಯಕ್ರಮ ಮಾಡಲಾಯಿತು. ಹೀಗೆ ಕಾಂಗ್ರೆಸ್ ಸರ್ಕಾರ ಸದಾ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ.

ಇನ್ನು ಈ ವರ್ಷದಿಂದ ಗ್ರಾಮೀಣ ಭಾಗದಲ್ಲಿ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಸಿಎಸ್ ಆರ್ ಶಾಲೆಗಳನ್ನು ಆರಂಭಿಸಲು ಮುಂದಾಗಿದ್ದೇವೆ. ಇದಕ್ಕಾಗಿ ನನ್ನನ್ನು ಸೇರಿದಂತೆ ನಾಲ್ಕೈದು ಮಂತ್ರಿಗಳಿಗೆ ಮುಖ್ಯಮಂತ್ರಿಗಳು ಜವಾಬ್ದಾರಿ ನೀಡಿದ್ದು, ಈಗಾಗಲೇ 50 ಶಾಲೆಗಳ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಹೀಗೆ ಸರ್ಕಾರ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು