LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದೊಡ್ಡಬಳ್ಳಾಪುರ ತಾಲ್ಲೂಕಿಗೆ ಆಗಮಿಸಿದ ಕನ್ನಡ ಜ್ಯೋತಿ ರಥಕ್ಕೆ ಅದ್ದೂರಿ ಸ್ವಾಗತ

ದೊಡ್ಡಬಳ್ಳಾಪುರ: ತಾಲ್ಲೂಕಿಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥ ಆಗಮಿಸಿತು. ದೇವನಹಳ್ಳಿ ತಾಲ್ಲೂಕಿನಿಂದ ಆಗಮಿಸುವ ಕನ್ನಡ ಜ್ಯೋತಿ ರಥವನ್ನು ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ದೇವನಹಳ್ಳಿ ತಾಲ್ಲೂಕಿನ ಗಡಿಭಾಗದಲ್ಲಿ ಸ್ವಾಗತಿಸುವ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ  ಪ್ರೊ .ಬಿ.ಎನ್.ಕೃಷ್ಣಪ್ಪ, ಗೌರವ ಕಾರ್ಯದರ್ಶಿ ಅಶ್ವಥಗೌಡ, ಕೋಶಾಧ್ಯಕ್ಷ ಡಾ.ಮುನಿರಾಜು, ಕಲಾವಿದರ ಸಂಘದ ಜಿಲ್ಲಾಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ದೇವನಹಳ್ಳಿ ಕಸಾಪ ಆರ್.ಕೆ.ನಂಜೇಗೌಡ, ಸಾಹಿತಿ ಶರಣಯ್ಯ ಹಿರೇಮಠ, ಕನ್ನಡಪರ ಸಂಘಟನೆಯ ಚಂದ್ರಶೇಖರ್, ಟಿ.ಜಿ.ಮಂಜುನಾಥ್, ರಾಜಘಟ್ಟ ಮಹೇಶ್ ಮುಂತಾದವರು ಹಾಜರಿದ್ದರು.

ಆದ್ದೂರಿ ಮೆರವಣಿಗೆ:- ದೊಡ್ಡಬಳ್ಳಾಪುರ ತಾಲ್ಲೂಕಿಗೆ ಆಗಮಿಸಿ ಕನ್ನಡ ಜ್ಯೋತಿ ರಥಕ್ಕೆ ದೊಡ್ಡಬಳ್ಳಾಪುರ ಜವಾಹರ ನವೋವಿದ್ಯಾಲಯದ ವಿದ್ಯಾರ್ಥಿಗಳು ಪುಪ್ಪಾರ್ಚನೆ ಮಾಡಿದರು. ಕನ್ನಡದ 50 ಮಂದಿ ಸಾಧಕರ ಭಾವಚಿತ್ರಗಳನ್ನು ವಿದ್ಯಾರ್ಥಿಗಳು ಪ್ರದರ್ಶನ ಮಾಡಿದ ದೃಶ್ಯ ಗಮನಸೆಳೆಯಿತು. ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್ ಜ್ಞಾನಪೀಠ ಪುರಸ್ಕೃತ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿದರು. ನವೋದಯ ವಿದ್ಯಾಲಯದ ಉಪಪ್ರಾಂಶುಪಾಲ ಜಯಕೃಷ್ಣನ್, ಕನ್ನಡ ಅಧ್ಯಾಪಕರುಗಳಾದ ಉಪಾಧ್ಯೆ, ಈರಣ್ಣ ಸಬರದ, ನಿವೃತ್ತ ಕನ್ನಡ ಅಧ್ಯಾಪಕ ವಿ.ಎಸ್.ಹೆಗಡೆ ಮತ್ತು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪೂರ್ಣಕುಂಭ ಸ್ವಾಗತ : ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಗೆ ಆಗಮಿಸಿದ ಕನ್ನಡ ರಥವನ್ನು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಆದ್ದೂರಿ ಪೂರ್ಣ ಕುಂಭ ಸ್ವಾಗತಿಸಿದರು. ಕಲಾ ತಂಡಗಳೊಂದಿಗೆ ನಡೆದ ಮೆರವಣಿಗೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿಕುಮಾರ್, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನರಸಿಂಹಮೂರ್ತಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಆರ್.ನಾರಾಯಣಸ್ವಾಮಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಗ್ರಾಮದ ಮುಖಂಡರುಗಳಾದ ಮುನಿರಾಜು,

ವಿಶ್ವನಾಥ್, ಕೃಷ್ಣಮೂರ್ತಿ, ಬೈಲಪ್ಪ, ಕನ್ನಡಪರ ಹೋರಾಟಗಾರ ರಾಜಘಟ್ಟರವಿ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ, ಪ್ರತಿನಿಧಿಗಳಾದ ಸಫೀರ್, ಚಂದ್ರಶೇಖರ್, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಕಾರ್ಮಿಕರು ಮತ್ತು ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.: ಸಮ್ಮೇಳನದ ಜಾಗೃತಿಗೆ ಕನ್ನಡ ಜ್ಯೋತಿ ರಥಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ಜ್ಯೋತಿ ರಥವು ಸಂಚರಿಸುತ್ತಿದೆ. . ಸಮಸ್ತ ಕನ್ನಡಿಗರನ್ನು ಆಹ್ವಾನಿಸುವ ಉದ್ದೇಶದಿಂದ ಈ ರಥ ಸಂಚಾರ ಮಾಡುತ್ತಿದೆ.

ಕನ್ನಡ ನಾಡು, ನುಡಿ, ಸಂಸ್ಕೃತಿಯ ಬಗ್ಗೆ ಜಾಗೃತಿ ಮತ್ತು ಅಭಿಮಾನ ಮೂಡಿಸುತ್ತಾ ಕನ್ನಡಿಗರು ಸಮ್ಮೇಳನಕ್ಕೆ ಬರಲು ಈ ರಥ ಯಾತ್ರೆಯು ಪ್ರೇರಣೆಯಾಗಲಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.ಕನ್ನಡ ಜ್ಯೋತಿ ರಥದ ಆಕರ್ಷಣೆ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆಯುತ್ತಿರುವ ಕನ್ನಡ ರಥದ ಮುಂಭಾಗದಲಿ ಭುವನೇಶ್ವರಿ ದೇವಿ ಪ್ರತಿಮೆ ಇದೆ. ಹಿಂಭಾಗದಲ್ಲಿ ಕೃಷಿಯ ಸಂಕೇತವಾದ ಎತ್ತುಗಳೊಂದಿಗೆ ಇರುವ ರೈತನನ್ನು ಕಾಣಬಹುದಾಗಿದೆ.

ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು, ದ.ರಾ.ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕೆ.ಶಿವರಾಮಕಾರಂತ, ವಿ.ಕೃ.ಗೋಕಾಕ್, ಯು.ಆರ್.ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ, ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಅವರುಗಳ ಭಾವಚಿತ್ರಗಳಿವೆ. ಸಾಹಿತ್ಯ ಸಮ್ಮೇಳನ ನಡೆಯುವ ಮಂಡ್ಯ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಚಿತ್ರಗಳು ಆಕರ್ಷಣೆಯ ಆಗಿವೆ.

ಇಂದು ದೊಡ್ಡಬಳ್ಳಾಪುರ ನಗರದಲ್ಲಿ ಮೆರವಣಿಗೆ: ದೊಡ್ಡಬಳ್ಳಾಪುರ ನಗರದಲ್ಲಿ ಮಂಗಳವಾರ ಮುಂಜಾನೆ 9.30 ಗಂಟೆಯಿಂದ ಕನ್ನಡ ಜ್ಯೋತಿ ರಥದ ಮೆರವಣಿಗೆ ನಡೆಯಲಿದೆ. ಬಸವಭವನ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಕನ್ನಡ ಜಾಗೃತ ಭವನ, ತಾಲ್ಲೂಕು ಕಛೇರಿ ವೃತ್ತ, ಮಗುವಾಳಪ್ಪ ವೃತ್ತ, ಇಸ್ಲಾಂಪುರ ರಸ್ತೆ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಬಯಲುಬಸವಣ್ಣ ದೇವಸ್ಥಾನ, ಕನಕದಾಸ ವೃತ್ತದ ಮೂಲಕ ಅರಳುಮಲ್ಲಿಗೆ, ಕಾಡನೂರು ಕೈಮರ, ಚೆನ್ನಾದೇವಿ ಅಗ್ರಹಾರ, ಕನಸವಾಡಿ ಗ್ರಾಮಗಳಲ್ಲಿ ಸಂಚರಿಸಿದ ನಂತರ ನೆಲಮಂಗಲ ತಾಲ್ಲೂಕಿಗೆ ಕನ್ನಡ ರಥವನ್ನು ಬೀಳ್ಕೊಡಲಾಗುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು