LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಧ್ರುವ್ ಜುರೆಲ್ ಶತಕಕ್ಕೆ ಧೋನಿ ದಾಖಲೆ ಧೂಳೀಪಟ


ಕೊಲಂಬೊ: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಧ್ರುವ್ ಜುರೇಲ್ ಕೊಲಂಬೊದಲ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದರು. ರಿಷಭ್ ಪಂತ್ ಮತ್ತೊಂದು ಅರ್ಧಶತಕ ಬಾರಿಸಿದರು. ದಿನದ ಕೊನೆಗೆ ಬೌಲರ್‌ಗಳು 2 ವಿಕೆಟ್ ಪಡೆದು 2ನೇ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಲು ನೆರವಾದರು.2ನೇ ದಿನವಾದ ಸೋಮವಾರ ಜುರೇಲ್ ಶತಕ (115 ರನ್, 117 ಎಸೆತ) ಹಾಗೂ ಪಂತ್ 63 ಅರ್ಧಶತಕ ಭಾರತಕ್ಕೆ ಮಹತ್ವದ್ದಾಗಿತ್ತು. 5 ವಿಕೆಟ್‌ಗೆ 300 ರನ್‌ಗಳೊಡನೆ ದಿನದಾಟ ಮುಂದುವರಿಸಿತು. ಭಾರತ 9 ವಿಕೆಟ್‌ಗೆ 503 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.ನಂತರ ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಇನ್ನಿಂಗ್ಸ್ನಲ್ಲಿ ಆರಂಭದಲ್ಲೇ ಕಳಪೆ ಪ್ರದರ್ಶನ ಕಂಡುಬAದಿತು. 8 ರನ್‌ಗಳಿಗೆ ತಂಡ 2 ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿದೆ. ಲಂಕಾ ತಂಡ 495 ರನ್‌ಗಳಿಂದ ಹಿನ್ನಡೆ ಅನುಭವಿಸಿದೆ. ಟೀಂ ಇಂಡಿಯಾ ಪರ ಪ್ರಸಿದ್ಧ್ ಕೃಷ್ಣ ಮತ್ತು ಮಾವನ್ ಸುತಾರ್ ತಲಾ 1 ವಿಕೆಟ್ ಪಡೆದಿದ್ದಾರೆ.ದಾಖಲೆ ಧೂಳೀಪಟ: ಧ್ರುವ್ ಜುರೆಲ್, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 115 ರನ್‌ಗಳ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಆಕರ್ಷಕ ಶತಕದೊಂದಿಗೆ ಜುರೆಲ್ ಎರಡು ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸೆಂಚುರಿಯೊAದಿಗೆ ಜುರೆಲ್ ಟೀಮ್ ಇಂಡಿಯಾದ ಮಾಜಿ ನಾಯಕ ಎಂ.ಎಸ್. ಧೋನಿ ಅವರ 16 ವರ್ಷಗಳ ಹಳೆಯ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ. 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಧ್ರುವ್ ಜುರೆಲ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಬ್ಯಾಟಿಂಗ್‌ನೊಂದಿಗೆ ಮೂರಂಕಿ ಮೊತ್ತ ಗಳಿಸುವ ಮೂಲಕ ಶ್ರೀಲಂಕಾದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿದ ಭಾರತದ ಮೊದಲ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡರು. ಹಾಗೆಯೇ ಶ್ರೀಲಂಕಾದಲ್ಲಿ ಟೆಸ್ಟ್ನಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟರ್ ಗರಿಷ್ಠ ಸ್ಕೋರ್‌ಗಳಿಸಿದ ಭಾರತೀಯ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದೆ.  2010ರಲ್ಲಿ ಕೊಲಂಬೊದಲ್ಲಿ ಧೋನಿ 76 ರನ್‌ಗಳಿಸಿದ್ದೇ 
ಅತ್ಯಧಿಕ ಸ್ಕೋರ್ ಆಗಿತ್ತು. ಇದೀಗ 115 ರನ್‌ಗಳ ಇನಿಂಗ್ಸ್ನೊಂದಿಗೆ ಧ್ರುವ್ ಜುರೆಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಗೆಯೇ ಶ್ರೀಲಂಕಾದಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಟೆಸ್ಟ್ ಶತಕ ಬಾರಿಸಿದ ಭಾರತದ ಕೇವಲ ಎರಡನೇ ಬ್ಯಾಟರ್ ಎಂಬ ಕೀರ್ತಿಗೂ ಜುರೆಲ್ ಭಾಜನರಾಗಿದ್ದಾರೆ. ಇದಕ್ಕೂ ಮುನ್ನ 2017ರಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (108 ರನ್) ಪಲ್ಲೆಕೆಲೆಯಲ್ಲಿ ಈ ಸಾಧನೆ ಮಾಡಿದ್ದರು. ಇದೀಗ ಜುರೆಲ್ ಬಾರಿಸಿದ 115* ರನ್ ಈ ಕ್ರಮಾಂಕದಲ್ಲಿ ಭಾರತೀಯ ಬ್ಯಾಟರ್ ಒಬ್ಬರು ಗಳಿಸಿದ ಗರಿಷ್ಠ ಸ್ಕೋರ್ ಎನಿಸಿಕೊಂಡಿದೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST