LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ನಂಜನಗೂಡಿನಲ್ಲಿ ಫುಡ್ ಜೋನ್ ಉದ್ಘಾಟನೆ

ನಂಜನಗೂಡು: ನಗರದ 6 ನೇ ಕ್ರಾಸ್ ನಿಂದ 9ನೇ ಕ್ರಾಸ್ ವರೆಗಿನ ಕವರ್ ಡೆಕ್ ಪಕ್ಕದಲ್ಲಿರುವ ಫುಡ್ ಜೋನ್ ವನ್ನು ಶಾಸಕರಾದ ದರ್ಶನ್ ಧ್ರುವನಾರಾಯಣ್ ಹಾಗೂ ಗಣೇಶ್ ಪ್ರಸಾದ್ ಅವರು ಜೊತೆಗೂಡಿ ಉದ್ಘಾಟನೆ ಮಾಡಿದರು.ನಂತರ ಶಾಸಕರಾದ ದರ್ಶನ್ ಧ್ರುವನಾರಾಯಣ್ ಮಾತನಾಡಿ ವ್ಯಾಪಾರಸ್ಥರಿಗೆ ನಗರಸಭೆಯಿಂದ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಟ್ಟು ವ್ಯಾಪಾರ ಮಾಡಲು ಉತ್ತಮ ವೇದಿಕೆಯನ್ನು ಸಜ್ಜು ಮಾಡಿದ್ದೇವೆ ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಎಲ್ಲರೂ ಒಂದೇ ಕಡೆ ಸೇರಿದರೆ ನಗರದ ರಸ್ತೆಗಳಲ್ಲಿ ಟ್ರಾಫಿಕ್ ತೊಂದರೆಗಳು ಸಹ ಇರುವುದಿಲ್ಲ ಆಹಾರಪ್ರಿಯರಿಗೂ ಯಾವುದೇ ಕಿರಿಕಿರಿ ಆಗುವುದಿಲ್ಲ ಎಂದರು.ಶಾಸಕರಾದ ಗಣೇಶ್ ಪ್ರಸಾದ್ ಮಾತನಾಡಿ ನಂಜನಗೂಡು ತಾಲೂಕಿನಲ್ಲಿ ಪ್ರಥಮವಾಗಿ "ಫುಡ್ ಜೋನ್" ಹೊಸ ಯೋಜನೆಯನ್ನು ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಮಾಡಿರುವುದು ನನಗೆ ಸಂತಸ ತಂದಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭೆ ಅಧ್ಯಕ್ಷ ಶ್ರೀಕಂಠಸ್ವಾಮಿ, ಉಪಾಧ್ಯಕ್ಷೆ ರಿಯಾನಾಬಾನು, ಪೌರಯುಕ್ತರಾದ ವಿಜಯ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್, ನಗರಸಭಾ ಸದಸ್ಯರಾದ ಮೀನಾಕ್ಷಿ ನಾಗರಾಜ್, ಮಹೇಶ್ , ಗಾಯತ್ರಿ, ಗಂಗಾಧರ್, ಪ್ರದೀಪ್, ಮಂಗಳಮ್ಮ. ಬಸವರಾಜು, ರವಿ, ದೀಪು,ಎ.ಇ.ಇ. ಮಹೇಶ್,ಹಲವು ಎ.ಇ.ಕುಮಾರ್, ಅಭಿಯಂತರರಾದ ಮೈತ್ರಾವತಿ, ರೇಖಾ ಸೇರಿದಂತೆ ನಗರಸಭೆ ಸಿಬ್ಬಂದಿ ವರ್ಗ, ಮುಖಂಡರು ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು