LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ನಂದಿ ಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ

ಚಿಕ್ಕಬಳ್ಳಾಪುರ : ಹೊಸ ವರ್ಷಾಚರಣೆಗೂ ನಂದಿಬೆಟ್ಟಕ್ಕೂ ಅದೇನೊ ಒಂಥರ ನಂಟು. ಪ್ರಕೃತಿ ಮಡಿಲಲ್ಲಿ ಕುಡಿದು, ಕುಣಿದು, ಕುಪ್ಪಳಿಸಿ ಹೊಸ ವರ್ಷ 2025ನ್ನು ಆಚರಿಸೋಣ ಅಂತ, ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ದಾರೆ. ಆದರೆ, ಈಗಲೇ ನಿಮ್ಮ ಪ್ಲಾನ್​ ಅನ್ನು ಬದಲಾಯಿಸಿಕೊಳ್ಳಿ, ಏಕೆಂದರೆ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿದೆ.

ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಅಂದರೆ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ ವಯ್ಯಾರ. ಮಿಗಿಲಾಗಿ ಸಮುದ್ರಮಟ್ಟದಿಂದ 1600 ಮೀಟರ್ ಎತ್ತರದಲ್ಲಿ ನಿಂತು ಸೂರ್ಯೋದಯ ಹಾಗೂ ಸೂರ್ಯಸ್ತ ವಿಹಂಗಮ ನೋಟ ನೋಡುವುದಕ್ಕೆ ತುಂಬಾ ಫೇಮಸ್.

ನಂದಿಗಿರಿಧಾಮ ಕಾಣಸಿಗುವ ಬೆಳ್ಳಿ ಮೋಡ, ಇಬ್ಬನಿ, ಸುತ್ತಲೂ ಎತ್ತ ನೋಡಿದರೂ ಮುತ್ತಿಕ್ಕುವ ಮಂಜು, ಇಂಥ ಪ್ರಕೃತಿ ಸೊಬಗಿನಲ್ಲಿ ಕುಳಿತು ಹೊಸ ವರ್ಷ 2025ನ್ನು ಸ್ವಾಗತಿಸೋಣ ಅಂತ ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ದರು. ಆದರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಪಾರ್ಟಿ ಪ್ರಿಯರ ಕನಸು ಭಗ್ನ ಮಾಡಿದೆ. ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದೆ.

ಡಿಸೆಂಬರ್ 31ಸಂಜೆ 6 ಗಂಟೆಯಿಂದ 2025 ಜನವರಿ1ರಂದು ಬೆಳಿಗ್ಗೆ ರಾತ್ರಿ 11 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶ ಕೂಡ ನಿರ್ಬಂಧಿಸಿದೆ. ಇದರಿಂದ ಪ್ರವಾಸೋದ್ಯಮ ಇಲಾಖೆಗೂ ನಿರ್ಬಂಧದ ಬಿಸಿ ಮುಟ್ಟಿದೆ.

ಹೊಸ ವರ್ಷ ಆಚರಣೆಗೆ ಬೆಂಗಳೂರಿನ ಪಬ್ ರೆಸಾರ್ಟ್​​ಗಳ ಬದಲು ಪ್ರಕೃತಿಯ ಮಡಿಲಲ್ಲಿ ಹೊಸ ವರ್ಷಾಚರಣೆಯ ಕನಸ್ಸು ಕಂಡಿದ್ದ ಯುವ ಸಮುದಾಯ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು