LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಕಲಿ ಕಾಂಗ್ರೆಸ್ ಪಕ್ಷ ಅವಶ್ಯಕತೆ ಇಲ್ಲ: ಆರ್.ಅಶೋಕ್

ಬೆಂಗಳೂರು: ಈಗಿನ ನಕಲಿ ಕಾಂಗ್ರೆಸ್ ಪಕ್ಷ: ನಕಲಿ ಗಾಂಧಿ ಕುಟುಂಬದಿಂದ, ನಕಲಿ ಗಾಂಧಿ ಕುಟುಂಬಕ್ಕಾಗಿ, ನಕಲಿ ಗಾಂಧಿ ಕುಟುಂಬಕೊಸ್ಕರಸ್ವಾತಂತ್ರ್ಯ ದೊರಕಿತು. ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಸ್ವಾತಂತ್ರ್ಯ ಬಂದಾಗಲೇ ಅದನ್ನು ವಿಸರ್ಜಿಸಿ ಎಂದು ಹೇಳಿದ ಮಹಾತ್ಮ ಗಾಂಧಿಯವರ ಮಾತನ್ನು ಧಿಕ್ಕರಿಸಿದ ನಕಲಿ ಗಾಂಧಿಗಳು, ಇವತ್ತು ಯಾವ ನೈತಿಕತೆಯಿಂದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.ಸ್ವಾತಂತ್ರ್ಯ ಪೂರ್ವದ ಕಾಂಗ್ರೆಸ್ ಅಂದರೆ ಅದು ರಾಜಕೀಯ ಪಕ್ಷವಾಗಿರಲಿಲ್ಲ. ದೇಶವನ್ನ ದಾಸ್ಯದಿಂದ ಮುಕ್ತಿಗೊಳಿಸಲು ಹೋರಾಡುತ್ತಿದ್ದ ದೇಶಭಕ್ತರ ಒಕ್ಕೊರಲಿನ ವೇದಿಕೆಯಾಗಿತ್ತು.

ಆದರೆ ಸ್ವತಂತ್ರ ಬಂದ ನಂತರ ಮಹಾತ್ಮ ಗಾಂಧೀಜಿ ಅವರ ಮಾತನ್ನು ಧಿಕ್ಕರಿಸಿ, ಕೇವಲ ಅಧಿಕಾರಕ್ಕಾಗಿ, ಕಾಂಗ್ರೆಸ್ ಪಕ್ಷವನ್ನು ಒಂದು ಕುಟುಂಬದ ಆಸ್ತಿ ಮಾಡಿಕೊಂಡ ನಕಲಿ ಗಾಂಧಿಗಳು ಮತ್ತು ಅವರ ಅನುಯಾಯಿಗಳು ಇವತ್ತು 'ಗಾಂಧಿ ಭಾರತ' ಹೆಸರಿನಲ್ಲಿ ಐತಿಹಾಸಿಕ ಬೆಳಗಾವಿ ಅಧಿವೇಶನ ಆಚರಿಸುತ್ತಿರುವುದು ವಿಪರ್ಯಾಸ.ಗಾಂಧೀಜಿ ಮಾತ್ರವಲ್ಲ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರೂಸಹ ಕಾಂಗ್ರೆಸ್ ಪಕ್ಷವನ್ನ ತಿರಸ್ಕಾರ ಮಾಡಿದ್ದರು. ಕಾಂಗ್ರೆಸ್ ಪಕ್ಷ ಸೇರುವುದು ಆತ್ಮಹತ್ಯೆ ಮಾಡಿಕೊಂಡಂತೆ ಎಂದು ಅಂಬೇಡ್ಕರರು ದಲಿತರಿಗೆ ಸಲಹೆ ನೀಡಿದ್ದರು.

ಸ್ವತಂತ್ಯಕ್ಕಾಗಿ ತಮ್ಮ ಸರ್ವಸ್ವವನ್ನೂ ಸಮರ್ಪಿಸಿದ ಗಾಂಧಿ, ಸರ್ದಾರ್ ಪಟೇಲ್ ಅಂತಹ ಮೇರು ನಾಯಕರನ್ನು ಒಳಗೊಂಡಿದ್ದ ಸ್ವಾತಂತ್ಯ ಪೂರ್ವ ಕಾಂಗ್ರೆಸ್‍ಗೂ ಅಧಿಕಾರಕ್ಕಾಗಿ ನಕಲಿ ಗಾಂಧಿಗಳು ನಡೆಸುತ್ತಿರುವ ಈಗಿನ ನಕಲಿ ಕಾಂಗ್ರೆಸ್‍ಗೂ ಸಂಬಂಧವೇ ಇಲ್ಲ.ದೇಶದ ಜನರಿಂದ ಪದೇ ಪದೇ ತಿರಸ್ಕಾರಗೊಳ್ಳುತ್ತಿರುವ ನಕಲಿ ಗಾಂಧಿಗಳನ್ನ ಮತ್ತೊಮ್ಮೆ ರೀಲಾಂಚ್ ಮಾಡಲು ರಾಜ್ಯದ 20 ಕೋಟಿ ರೂಪಾಯಿ ತೆರಿಗೆ ಹಣವನ್ನ ಪೋಲು ಮಾಡುತ್ತಿರುವ ಸಿಎಂ ಮುಖ್ಯಮಂತ್ರಿ ನೇತೃತ್ವದ ಕಾಂಗ್ರೆಸ್ ಸರ್ಕಾರ, ನಕಲಿ ಗಾಂಧಿಗಳ ಗುಲಾಮಗಿರಿ ಮಾಡಲು ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ ಎಂದು ಗುಡುಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು