LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ನಕಾರಾತ್ಮಕ ಚಿಂತನೆ ಇಲ್ಲದ ಸರ್ವರ ಪ್ರೀತಿ ಪಾತ್ರ ಕೃಷ್ಣ ವಿಧಾನಸಭೆಯಲ್ಲಿ ಸಂತಾಪ ಸೂಚಕದಲ್ಲಿ ಸಭಾಧ್ಯಕ್ಷರ ಮಾತು

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಯಾವುದೇ ವಿಷಯದಲ್ಲಿ ಎಲ್ಲಿಯೂ ನಕಾರಾತ್ಮಕ ಚಿಂತನೆ ಇಲ್ಲದ ಸರ್ವರ ಪ್ರೀತಿ ಪಾತ್ರರಾಗಿ ತಮ್ಮ ವ್ಯಕ್ತಿತ್ವವನ್ನು ಉಳಿಸಿಕೊಂಡು ಬಂದಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬಣ್ಣಿಸಿದ್ದಾರೆ.ವಿಧಾನಸಭೆಯಲ್ಲಿಂದು ಕೃಷ್ಣ ಅವರ ನಿಧನಕ್ಕೆ ಸಂತಾಪಸೂಚಕ ನಿರ್ಣಯ ಮಂಡಿಸಿ ಮಾತನಾಡಿದ ಅವರು, ಪ್ರತಿಯೊಂದು ಸಾವು ಒಂದು ಸಂದೇಶ ಕೊಡುತ್ತದೆ.

ಅನೇಕ ಹುದ್ದೆಗಳನ್ನು ಎಸ್.ಎಂ.ಕೃಷ್ಣ ಅವರು ಅಲಂಕರಿಸಿದ್ದರುಸಹ ಬಹುತೇಕ ವಿಷಯಗಳನ್ನು ಸಕಾರಾತ್ಮಕವಾಗಿಯೇ ಚಿಂತಿಸುವ ಮೂಲಕ ತಾವು ಅಂದುಕೊಂಡಿದ್ದ ಕಾರ್ಯಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲಾ ರಾಜಕೀಯ ಯುವ ಮುಖಂಡರಿಗೆ ಮಾದರಿಯಾದ ಮುತ್ಸದ್ಧಿ ಎಂದರು.
ಬೆಂಗಳೂರಿನ ಬೆಳವಣಿಗೆ ರಾಷ್ಟ್ರಮಟ್ಟದಲ್ಲಿ ರಾಜ್ಯಮಟ್ಟದಲ್ಲಿ ಬೆಳೆಸುವಲ್ಲಿ ಸಾಕಷ್ಟು ಶ್ರಮಿಸಿದ್ದರು. ಶಾಶ್ವತವಾದ ಹೆಸರನ್ನು ಗಳಿಸಿದ್ದಾರೆ ಎಂದು ಕೃಷ್ಣ ಅವರ ಕಾರ್ಯಸಾಧನೆ ಅಥವಾ ಅವರ ವ್ಯಕ್ತಿತ್ವವನ್ನು ಕೊಂಡಾಡಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಭಾಧ್ಯಕ್ಷರ ಮಾತನ್ನು ಸಮರ್ಥಿಸಿ ಮಾತನಾಡಿ, ಮುತ್ಸದ್ದಿ ರಾಜಕಾರಣಿಯಾಗಿ ಸಾರ್ವಜನಿಕ ಜೀವನದಲ್ಲಿ ಅತೀ ದೀರ್ಘ ಕಾಲ ರಾಜಕೀಯ ಜೀವನ ನಡೆಸಿದರು ಎಂದರು.ವಿದ್ಯಾರ್ಥಿ ದೆಸೆಯಲ್ಲಿ 1968ರಲ್ಲಿ ಟೆಕ್ಸಾಸ್‍ನಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ದೇಶದ ನಾಲ್ಕು ಸದನಗಳಲ್ಲಿ ಸದಸ್ಯರಾಗಿದ್ದರು. ಸ್ಪೀಕರ್ ಗೌರ್ನರ್ ಸಹ ಆಗಿದ್ದರು. ಕೇಂದ್ರ ಸಚಿವರೂ ಆಗಿದ್ದರು ಎಂದು ಬಣ್ಣಿಸಿ ಯಾರನ್ನೂ ದ್ವೇಷಿಸದ ಎಲ್ಲರನ್ನೂ ಪ್ರೀತಿಸುವ ವ್ಯಕ್ತಿ ಎಸ್.ಎಂ.ಕೃಷ್ಣ ಆಗಿದ್ದರು ಎಂದು ಹೇಳಿದರು.

ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ರಾಜ್ಯದಲ್ಲಿ, ದೇಶದಲ್ಲಿ ಎಸ್.ಎಂ.ಕೃಷ್ಣ ಅವರನ್ನು ಬೆಂಗಳೂರಿನ ಜನ ಮಾತ್ರ ಮರೆಯಲು ಸಾಧ್ಯವಿಲ್ಲ. ಬೆಂಗಳೂರಿನ ಬೆಳವಣಿಗೆಗೆ ಎಸ್.ಎಂ.ಕೃಷ್ಣ ಅವರು ಶ್ರಮಿಸಿದ್ದು ಅಭೂತಪೂರ್ವ. ದೇಶದ ಯಾವುದೇ ಜನರು ವಿದೇಶದವರು, ಯಾರೇ ಬಂದರು ಬೆಂಗಳೂರಿಗೆ ಪ್ರಥಮ ಭೇಟಿ ಕೊಡುವುದು ಸರ್ವೇ ಸಾಮಾನ್ಯ. ಬೆಂಗಳೂರನ್ನು ಬೆಳವಣಿಗೆ ಮಾಡುವಲ್ಲಿ ಕೆಂಪೇಗೌಡರು ಮಾಡಿದ ಕಾರ್ಯದಂತೆಯೇ ಕೃಷ್ಣ ಅವರು ಮಾಡಿದ್ದಾರೆ ಎಂದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ಎಸ್.ಎಂ.ಕೃಷ್ಣ ಮತ್ತು ತಮ್ಮ ನಡುವೆ ಇದ್ದ ಒಡನಾಟವನ್ನು ಸ್ಮರಿಸಿ ಎಸ್.ಕೃಷ್ಣ ದೇಶ ಮತ್ತು ರಾಜ್ಯದಲ್ಲಿ ತಮ್ಮದೇ ಆದ ವ್ಯಕ್ತಿತ್ವವನ್ನು ಗಳಿಸಿಕೊಂಡು ಉಳಿಸಿಕೊಂಡಿದ್ದರು ಎಂದರು.ಸದನದ ಬಹುತೇಕ ಸದಸ್ಯರು ಕೃಷ್ಣ ಅವರ ಬಗ್ಗೆ ಮಾತನಾಡಿ ಅವರ ಕಾರ್ಯಸಾಧನೆಗಳ ಗುಣಗಾನ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು