LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನಗರದ 100 ಕಿಮೀ ವ್ಯಾಪ್ತಿಯಲ್ಲಿ ಎಸಿ ಬಸ್‌ ಸೇವೆ ಆರಂಭಿಸಲು KSRTC ಮುಂದು..!

ಬೆಂಗಳೂರು: ಬೆಂಗಳೂರಿನಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಸ್ಥಳಗಳಿಗೆ ಹವಾನಿಯಂತ್ರಿತ ಬಸ್ ಸೇವೆಗಳ ಒದಗಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಚಿಂತನೆ ನಡೆಸುತ್ತಿದೆ.

ಸೇವೆ ಕುರಿತ ಕಾರ್ಯಸಾಧ್ಯತೆಗಳ ಕುರಿತು ನಿಗಮವು ಅಧ್ಯಯನ ನಡೆಸುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆಎಸ್‌ಆರ್‌ಟಿಸಿ ಎಂಡಿ ಅನ್ಬು ಕುಮಾರ್ ಅವರು, ವಿವಿಧ ಉದ್ದೇಶಗಳಿಗಾಗಿ ಪ್ರತಿನಿತ್ಯ ನಗರಕ್ಕೆ ಸಾವಿರಾರು ಜನರು ಪ್ರಯಾಣಿಸುತ್ತಿರುತ್ತಾರೆ. ವಿದ್ಯಾರ್ಥಿಗಳು, ಟೆಕ್ಕಿಗಳು, ಕಾರ್ಮಿಕರು ಮತ್ತು ವ್ಯಾಪಾರಿಗಳು ಬೆಂಗಳೂರಿಗೆ ಹತ್ತಿರವಿರುವ ಕೋಲಾರ, ತುಮಕೂರು, ಆನೇಕಲ್, ರಾಮನಗರ, ಕನಕಪುರ, ಚನ್ನಪಟ್ಟಣ, ಮಂಡ್ಯ, ಚಿಕ್ಕಬಳ್ಳಾಪುರ, ಹೊಸೂರಿಗೆ ಪ್ರಯಾಣ ಮಾಡುತ್ತಿರುತ್ತಾರೆ. ಈಗಾಗಲೇ ನಿಗಮವು ಬೆಂಗಳೂರಿನಿಂದ ಚೆನ್ನೈ, ಮಂಗಳೂರು, ಬೆಳಗಾವಿ, ಗೋವಾ ಮತ್ತು ಇತರ ಮಾರ್ಗಗಳಲ್ಲಿ ಎಸಿ ಬಸ್‌ ಸೇವೆಗಳನ್ನು ಒದಗಿಸುತ್ತಿದೆ. ಆದರೆ, 100 ಕಿಮೀ ವ್ಯಾಪ್ತಿಯಲ್ಲಿರುವ ಸ್ಥಳಗಳಿಗೆ ಎಸಿ ಸೇವೆಗಳನ್ನು ನೀಡಲಾಗಿಲ್ಲ. ಅಶ್ವಮೇಧ ಸೇರಿದಂತೆ ಅಸ್ತಿತ್ವದಲ್ಲಿರುವ ನಾನ್-ಎಸಿ ಬಸ್‌ಗಳು ಸಾಮಾನ್ಯ ಪಾಯಿಂಟ್-ಟು-ಪಾಯಿಂಟ್ ಬಸ್‌ಗಳಾಗಿದ್ದು, ಕುಳಿತುಕೊಳ್ಳಲು ಮತ್ತು ನಿಂತು ಪ್ರಯಾಣಿಸಲು ಅನುಕೂಲಕರವಾಗಿದೆ. ಆದಾಗ್ಯೂ, ಆರಾಮ, ಚಾರ್ಜಿಂಗ್ ಪೋರ್ಟ್‌ಗಳು ಮತ್ತು ಇತರ ಸೌಕರ್ಯಗಳನ್ನು ಒದಗಿಸುವ ಎಸಿ ಬಸ್‌ಗಳಿಗೆ ಬೇಡಿಕೆಗಳು ಹೆಚ್ಚಾಗಿವೆ.

ಕಳೆದ ಮೂರು ವರ್ಷಗಳಲ್ಲಿ ನಿಗಮವು ಅಂಬಾರಿ ಉತ್ಸವ, ಅಶ್ವಮೇಧ, ಪಲ್ಲಕಿ, ಮತ್ತು EV ಪವರ್ ಪ್ಲಸ್ (ಇ-ಬಸ್) ಬಸ್ ಸೇವೆಗಳನ್ನ ಒದಗಿಸಿದ್ದು, ಈ ಎಲ್ಲಾ ಸೇವೆಗಳನ್ನು ಜನರು ಬೆಂಬಲಿಸಿದ್ದಾರೆ. ಇದೀಗ ಜನರ ಬೇಡಿಕೆಗೆ ಅನುಗುಣವಾಗಿ ಹೊಸ ಸೇವೆಯನ್ನು ಪ್ರಾರಂಭಿಸಲು ಚಿಂತನೆ ನಡೆಸುತ್ತಿದ್ದೇವೆ. ಬೆಂಗಳೂರಿನಿಂದ 100 ಕಿ.ಮೀ ದೂರದ ಪ್ರದೇಶಗಳಿಗೆ ಎಸಿ ಬಸ್‌ಗಳ ಬೇಡಿಕೆ ಇದೆ. ಹೀಗಾಗಿ ಮಾರ್ಗಗಳು ಮತ್ತು ಬೇಡಿಕೆಯ ಕುರಿತು ಕಾರ್ಯಸಾಧ್ಯತೆಗಳ ಬಗ್ಗೆ ಅಧ್ಯಯನವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಎಸ್ ಬಸ್ ಗಳಲ್ಲಿ ಟಿಕೆಟ್ ದರ ಹೆಚ್ಚಾಗಿರಬಹುದು. ಆದರೆ, ಸಾಂದರ್ಭಿಕವಾಗಿ ಪ್ರಯಾಣಿಸುವುದರಿಂದ ಪಾವತಿಗೆ ಜನರು ಸಿದ್ಧರಿದ್ದಾರೆ. ನಿಗಮಕ್ಕೆ ಲಾಭವೊಂದೇ ಉದ್ದೇಶವಾಗಿರದ ಕಾರಣ ಸಾಧ್ಯಾಸಾಧ್ಯತೆ ಅಧ್ಯಯನದ ನಂತರ ದರವನ್ನು ನಿರ್ಧರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು