LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಗರಾಭಿವೃದ್ಧಿ ಇಲಾಖೆಯಲ್ಲಿನ ಭ್ರಷ್ಟಾಚಾರ ತಡೆಗಟ್ಟಲು ಸಿಎಂಗೆ ಪತ್ರ

ರಾಜ್ಯದಲ್ಲಿನ ಖಾಸಗಿ ಬಡಾವಣೆಗಳ ನಿರ್ಮಾಣಕ್ಕಾಗಿ ನಗರಾಭಿವೃದ್ಧಿ ಸಚಿವರ ಒಪ್ಪಿಗೆ ಪಡೆಯಬೇಕೆಂಬ ನೂತನ ಆದೇಶ ವ್ಯಾಪಕ ಭ್ರಷ್ಟಾಚಾರಕ್ಕೆ ನಾಂದಿ ಮಾಡಿಕೊಡುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆಯುವ ಮೂಲಕ ಎಚ್ಚರಿಸಿದ್ದಾರೆ.ತಮ್ಮ ಪತ್ರದಲ್ಲಿ, ರಾಜ್ಯದ ಅನೇಕ ನಗರ, ಪಟ್ಟಣಗಳಲ್ಲಿ ಈಗಾಗಲೇ ಖಾಸಗಿ ಸಂಸ್ಥೆಗಳಿಂದ ಸುಸಜ್ಜಿತವಾದ ಬಡಾವಣೆಗಳು ನಿರ್ಮಾಣವಾಗಿ ಜನತೆಗೆ ಕೈಗೆಟುಕುವ ಬೆಲೆಯಲ್ಲಿ ಸೂರನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿದೆ. ಇದುವರೆಗೂ1961 ರ ಆರ್.ಡಿ.ಪಿ.ಅರ್ ಕಾಯ್ದೆಯ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರಗಳು ಆಯಾ ಖಾಸಗಿ ನಿವೇಶನಗಳ ನೀಲಿ ನಕಾಶೆಯನ್ನು ತಯಾರಿಸಿ ಅನುಮತಿಯನ್ನು ನೀಡಿ ಖಾಸಗಿ ಬಡಾವಣೆಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿತ್ತು.

ಆದರೆ , ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಮ್ಮ ಇತ್ತೀಚಿನ ಸಭೆಯಲ್ಲಿ ರಾಜ್ಯದಲ್ಲಿನ ಯಾವುದೇ ಖಾಸಗಿ ಬಡಾವಣೆಗಳ ನಿರ್ಮಾಣಕ್ಕಾಗಿ ಅಂತಿಮ ಅನುಮತಿಯನ್ನು ಸಚಿವಾಲಯದ ಮೂಲಕವೇ ಆಗಬೇಕೆಂದು ಕಾಯ್ದೆಗೆ ತಿದ್ದುಪಡಿ ತರಲು ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಮಂತ್ರಿಗಳ ಈ ನಡೆ ಸಂಪೂರ್ಣವಾಗಿ ಅಧಿಕಾರ ವಿಕೇಂದ್ರೀಕರಣದ ಸಂವಿಧಾನದ ಮೂಲ ಆಶಯಕ್ಕೆ ಕೊಡಲಿ ಪೆಟ್ಟು ಬೀಳುವಂತಿದೆ. ನಗರಾಭಿವೃದ್ಧಿ ಸಚಿವಾಲಯದಿಂದ ನೇರವಾಗಿ ಭ್ರಷ್ಟಾಚಾರ ಮಾಡುವ ಉದ್ದೇಶದಿಂದಲೇ ಈ ರೀತಿಯ ತಿದ್ದುಪಡಿಯನ್ನು ಮಾಡಲು ಹೊರಟಿರುವುದು ಸ್ಪಷ್ಟವಾಗಿ ಮೇಲ್ನೋಟಕ್ಕೆ ಗೋಚರಿಸುತ್ತದೆ. ಈ ತಿದ್ದುಪಡಿಯು ನಗರ/ ಪಟ್ಟಣ ಯೋಜನಾ ಪ್ರಾಧಿಕಾರಗಳ ಸ್ವಾಯತ್ತತೆಗೆ ಧಕ್ಕೆ ತರುವಂತಿದೆ.

ಈ ಕೂಡಲೇ ತಾವು ಮಧ್ಯಪ್ರವೇಶ ಮಾಡಿ ನಿಮ್ಮ ನಗರಾಭಿವೃದ್ದಿ ಮಂತ್ರಿಯವರ ಕಾಯ್ದೆಯ ತಿದ್ದುಪಡಿಯ ಯೋಚನೆಯನ್ನು ತಕ್ಷಣವೇ ನಿಲ್ಲಿಸಬೇಕು . ಈ ಮೂಲಕ ಮುಂದಾಗಬಹುದಾದ ವ್ಯಾಪಕ ಭ್ರಷ್ಟಾಚಾರವನ್ನು ತಡೆಗಟ್ಟಬೇಕು ಮತ್ತು ವಿಕೇಂದ್ರೀಕರಣದ ಪರಿಕಲ್ಪನೆಯ ಮಹತ್ವವನ್ನು ಎತ್ತಿ ಹಿಡಿಯಬೇಕು ಎಂದು ಮುಖ್ಯಮಂತ್ರಿ ಚಂದ್ರು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು