LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಡೆಯದ ಕಲಾಪ ಮುಂದುವರೆದ ವಿಪಕ್ಷಗಳ ಧರಣಿ | ರಾಜಭವನಕ್ಕೆ ಪಾದಯಾತ್ರೆ

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ರಚಿಸಿರುವ ಸಮಿತಿಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ನಿನ್ನೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ನಡೆಸಿದ್ದ ಧರಣಿಯನ್ನು ಇಂದೂ ಸಹ ಮುಂದುವರೆಸಿವೆ.ಇಂದು ಬೆಳಿಗ್ಗೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳಾದ ಜೆಡಿಎಸ್, ಬಿಜೆಪಿ ಶಾಸಕರು ತಮ್ಮ ಧರಣಿಯನ್ನು ಮುಂದುವರೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನವನ್ನು ಹೊರಹಾಕಿದರು.

ಈ ಸಂದರ್ಭದಲ್ಲಿ ಪರಿಸ್ಥಿತಿ ಗಮನಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಕಲಾಪವನ್ನು ಮಧ್ಯಾಹ್ನ 1.45ಕ್ಕೆ ಮುಂದೂಡಿದ ಪರಿಣಾಮ ಪ್ರತಿಪಕ್ಷಗಳ ಧೋರಣೆಗೆ ಕಲಾಪ ಬಲಿಯಾಯಿತು.ಕಲಾಪವನ್ನು ಮುಂದೂಡಿದ ನಂತರ ಪ್ರತಿಪಕ್ಷಗಳಾದ ಜೆಡಿಎಸ್-ಬಿಜೆಪಿ ಶಾಸಕರು ಸರ್ಕಾರದ ಧೋರಣೆಯನ್ನು ಖಂಡಿಸಿ ದೂರು ನೀಡಲು ರಾಜಭವನಕ್ಕೆ ಪಾದಯಾತ್ರೆ ಮೂಲಕ ತೆರಳಿದರು.ಇದಕ್ಕೂ ಮುನ್ನ ಇಂದು ಬೆಳಿಗ್ಗೆ ಬಿಜೆಪಿ ಜೆಡಿಎಸ್ ಶಾಸಕರು ವಿಧಾನಸೌಧದ ಪಶ್ಚಿಮ ಭಾಗದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿದರಲ್ಲದೆ ಇದೊಂದು ಲೂಟಿ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಧರಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಜೆಡಿಎಸ್‍ನ ಸಿಬಿ.ಸುರೇಶ್‍ಬಾಬು, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಸಿ.ಟಿ.ರವಿ, ಸುನೀಲ್ ಕುಮಾರ್, ಸಿ.ಸಿ.ಪಾಟೀಲ್, ಕೆ.ಗೋಪಾಲಯ್ಯ ಸೇರಿದಂತೆ ಬಿಜೆಪಿ-ಜೆಡಿಎಸ್ ಶಾಸಕರು ಪಾಲ್ಗೊಂಡರು.ಈ ಸಂದರ್ಭದಲ್ಲಿ ಬಹುತೇಕರು ಮಾತನಾಡಿ ಸರ್ಕಾರದ ಧೋರಣೆಯನ್ನು ಖಂಡಿಸಿದರು.

ಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರು ಸೇರಿದಂತೆ ಅನೇಕರಿಗೆ ಸಂಬಳ ಕೊಡಲು ಹಣವಿಲ್ಲ ಈ ಸರ್ಕಾರ ಪಾಪರ್ ಆಗಿದೆ. ಆದರೂ ಸರ್ಕಾರದ ಹಣವನ್ನು ತಮ್ಮ ಪಕ್ಷದ ಕಾರ್ಯಕರ್ತರಿಗೆ ಸಂಬಳದ ಮೂಲಕ ನೀಡಿ ಮೋಜು-ಮಸ್ತಿ ಮಾಡಲು ಮುಂದಾಗಿದೆ.ಕಾಂಗ್ರೆಸ್ ಕಾರ್ಯಕರ್ತರೇನು ಆಕ್ಸ್‍ಫರ್ಡ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿದ್ದಾರಾ ಎಂದು ಹರಿಹಾಯ್ದರು.
ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬದಲು ಕಾಂಗ್ರೆಸ್ಸನ್ನೇ ಮುಚ್ಚಿಬಿಡಿ. ಜನರಿಗೆ ನೆಮ್ಮದಿಯಾಗುತ್ತದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು