LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನನ್ನ ಧ್ವನಿ ಅಡಗಿಸಲಾಗಲ್ಲ ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ದೆಹಲಿ: ದೇಶದ ಜನ ನಮಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ನಮ್ಮ ಧ್ವನಿ ಅಡಿಗಿಸಲಾಗಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ಸಂಸತ್ ಭವನದ ಬಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸತ್‍ನಲ್ಲಿ ಕೆಲ ಪಕ್ಷಗಳವರು ನಕಾರಾತ್ಮಕ ವಿಷಯಗಳಬಗ್ಗೆ ಚರ್ಚೆ ಮಾಡಿ ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ.

ನಮಗೆ ಸ್ಪಷ್ಟ ಬಹುಮತವಿದುದ, ನಮ್ಮ ಧ್ವನಿಯನ್ನು ಅಡಗಿಸಲಾಗಲ್ಲ ಎಂದಿದ್ದಾರೆ.ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿರುವ ಅವರು, ಸುಗಮ ಕಲಾಪ ನಡೆಯಲು ದೇಶದ ಜನ ನಿರೀಕ್ಷೆ ಮಾಡುತ್ತಾರೆ. 60 ವರ್ಷಗಳ ನಂತರ ಮೂರನೇ ಅವಧಿಗೆ ಸರ್ಕಾರ ಆಯ್ಕೆಯಾಗಿದೆ. ಜನ ಸೇವೆ ಮಾಡಲು ಮತ್ತಷ್ಟು ಅವಕಾಶ ದೊರಕಿದೆ. ಸಿಕ್ಕಿರುವ ಅವಕಾಶವನ್ನು ದೇಶದ ಅಬಿವೃದ್ಧಿಗಾಗಿ ಕೆಲಸ ಮಾಡುತ್ತೇವೆ. ವಿಕಾಸ ಭಾರತದ ಅಡಿ ಮನಮ್ಮ ಸರ್ಕಾರ ಕೆಲಸ ಮಾಡಲಿದೆ ಎಂದಿರುವ ಅವರು ನಾಳೆ ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು ತಿಳಿಸಿದ್ದಾರೆ.

ನಾಳೆ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ ಎಂದು ಹೇಳಿದ್ದಾರೆ. ನಾನು ದೇಶದ ಜನರಿಗೆ ಭರವಸೆಗಳನ್ನು ನೀಡುತ್ತಿದ್ದೇನೆ ಮತ್ತು ಇದನ್ನು ನಾನು ಜಾರಿಗೆ ತರುತ್ತೇನೆ. ಇದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಈ ಬಜೆಟ್ ಅಮೃತ ಕಾಲಕ್ಕೆ ಮಹತ್ವದ ಬಜೆಟ್ ಆಗಿದೆ. ಇಂದಿನ ಬಜೆಟ್ ನಮ್ಮ ಅಧಿಕಾರದ ಮುಂದಿನ 5 ವರ್ಷಗಳ ದಿಕ್ಕನ್ನು ನಿರ್ಧರಿಸುತ್ತದೆ. ಈ ಬಜೆಟ್ ನಮ್ಮ ವಿಕಸಿತ ಭಾರತದ ಕನಸಿಗೆ ಬುನಾದಿಯಾಗಿದೆ ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು