LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಉಪಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ: ಸಿಎಂ

ಸಂಡೂರು: ಈ.ತುಕಾರಾಮ್ ಅವರು ಈ ಬಾರಿ ಶಾಸಕರಾದ ಬಳಿಕ 1200 ಕೋಟಿ ಅನುದಾನವನ್ನು ಸಂಡೂರು ಜನತೆಗಾಗೆ ತಂದಿದ್ದಾರೆ. ಅಭಿವೃದ್ಧಿ ಎಂದರೆ ತುಕಾರಾಮ್. ತುಕಾರಾಮ್ ಎಂದರೆ ಅಭಿವೃದ್ಧಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶವನ್ನು ಉದ್ಘಾಟಿಸಿ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸುವುದರ ಜೊತೆಗೆ ಪೂರ್ಣಗೊಂಡಿರುವ ಸುಮಾರು 400 ಕೋಟಿಗೂ ಅಧಿಕ ಮೊತ್ತದ ಯೋಜನೆಗಳನ್ನು ಸಂಡೂರು ಜನತೆಗೆ ಅರ್ಪಿಸಿ ಮಾತನಾಡಿದರು.
ಸಂಡೂರಿನಲ್ಲಿ 12 ಸಾವಿರ ಮನೆಗಳನ್ನು ಕಟ್ಟಿ ಕ್ಷೇತ್ರದ ಜನರಿಗೆ ಹಂಚಿಕೆ ಮಾಡಿರುವುದರ ಶ್ರೇಯಸ್ಸು ಸಂತೋಷ್ ಲಾಡ್- ಈ.ತುಕಾರಾಮ್ ಜೋಡಿಗೆ ಸಲ್ಲಬೇಕು.

ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಉಪ ಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ ಎಂದು ಸಿಎಂ ಕರೆ ನೀಡಿದರು.
ಈ.ತುಕಾರಾಮ್ ಅವರು ನನ್ನ ಬಲವಂತಕ್ಕೆ, ಪಕ್ಷದ ಮಾತಿಗೆ ಬೆಲೆ ಕೊಟ್ಟು ಲೋಕಸಭೆಗೆ ಸ್ಪರ್ಧಿಸಿದರು. ಈ.ತುಕರಾಮ್ ಅವರು ಸಂಡೂರು ಜನತೆಯ ಮೇಲೆ ಬಹಳ ಪ್ರೀತಿ, ವಿಶ್ವಾಸ ಇಟ್ಟುಕೊಂಡಿದ್ದಾರೆ. ಈ.ತುಕಾರಾಮ್ ಅವರಂತಹ ಕಾಯಕ ನಾಯಕ ನಿಮಗೆ ಬೇರೆಲ್ಲೂ ಸಿಗುವುದಿಲ್ಲ.

ಹೀಗಾಗಿ ಸಂಡೂರು ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನಿಮ್ಮ ಆಶೀರ್ವಾದ ಹೀಗೇ ಮುಂದುವರೆಯಲಿ ಎಂದು ಸಿಎಂ ವಿನಂತಿಸಿದರು.ಸಂಡೂರಿನ ಜನತೆಯೂ ಸೇರಿ ರಾಜ್ಯದ ಜನತೆಗೆ ಐದೈದು ಗ್ಯಾರಂಟಿಗಳನ್ನು 56000 ಕೋಟಿ ವೆಚ್ಚದಲ್ಲಿ ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಬಿಜೆಪಿ ಯವರು ಸುಳ್ಳುಗಳನ್ನು ಎರಚುತ್ತಾ ಕುಳಿತಿದೆ ಎಂದರು.

ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿಯ ಪೆದ್ದ ಶಿಖಾಮಣಿಗಳು ಸುಳ್ಳುಗಳನ್ನು ಎರಚುತ್ತಾ ಕುಳಿತಿದ್ದಾರೆ. ಹಾಗಿದ್ರೆ ಬರೀ ಸಂಡೂರಿನ ಅಭಿವೃದ್ಧಿಗೆ ಕಳೆದ ಒಂದು ವರ್ಷದಲ್ಲಿ ಈ.ತುಕಾರಾಮ್ ಅವರು 1200 ಕೋಟಿ ರೂಪಾಯಿ ಅನುದಾನ ತರಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.
ಸಂಡೂರಿನ ಜನರ ತೆರಿಗೆ ಹಣಕ್ಕೆ, ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರ ಸರ್ಕಾರ ನಿರಂರವಾಗಿ ವಂಚಿಸುತ್ತಿದೆ. ನಿಮಗೆ, ನಮಗೆ ಕೇಂದ್ರದಿಂದ ಬರಬೇಕಾದ ಹಣವನ್ನು ಕೊಡಿ ಎಂದು ಮೋದಿಗೆ ಕೇಳುವ ಧೈರ್ಯ ಬಿಜೆಪಿಗೆ ಇಲ್ಲ. ವಿಜಯೇಂದ್ರಗೆ ಇಲ್ಲ. ಇದು ಸಂಡೂರಿನ ಜನತೆಗೆ, ರಾಜ್ಯದ ಜನತೆಗೆ ಬಗೆದ ದ್ರೋಹ ಅಲ್ಲವೇ ಎಂದು ಸಿಎಂ ಪ್ರಶ್ನಿಸಿದರು.

ತೆರಿಗೆ ಕಟ್ಟುವುದರಲ್ಲಿ ಕರ್ನಾಟಕ ಮೊಲ ಸ್ಥಾನದಲ್ಲಿದೆ. ಆದರೆ ನಮ್ಮ ಪಾಲು ವಾಪಾಸ್ ಕೊಡುವುದರಲ್ಲಿ ಕೇಂದ್ರ ಸರ್ಕಾರ ಕೊನೆ ಸ್ಥಾನದಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಮಾಜಿ ಸಚಿವರೂ-ಸಂಸದರೂ ಆದ ಈ.ತುಕಾರಾಂ, ಶಾಸಕರುಗಳಾದ ಲತಾ ಮಲ್ಲಿಕಾರ್ಜುನ್, ಕಂಪ್ಲಿ ಗಣೇಶ್, ಶ್ರೀನಿವಾಸ್, ನಾಗರಾಜ್, ನಾರಾ ಭರತ್ ರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಧ್ಯಕ್ಷರಾದ ಮೆಹರೂಜ್ ಖಾನ್, ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಹಿರಿಯ ನಾಯಕರಾದ ಅಲ್ಲಂ ವೀರಭದ್ರಪ್ಪ, ಲಿಡ್ಕರ್ ಅಧ್ಯಕ್ಷರಾದ ನಾಗರಾಜ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು