LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ನಮ್ಮ ಕ್ರಿಕೆಟ್ ಐಸಿಯುನಲ್ಲಿದೆ’ ಎಂದ ರಶೀದ್ ಲತೀಫ್

ಇಸ್ಲಾಮಾಬಾದ್: ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ದ ತವರಿನಲ್ಲಿ ಸರಣಿ ಸೋಲು ಕಂಡ ಪಾಕಿಸ್ತಾನ ಕ್ರಿಕೆಟ್‍ನ (Pakistan Cricket) ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಸೀಮಿತ ಮಾದರಿ ಕ್ರಿಕೆಟ್‍ನ ನಾಯಕರಾಗಿದ್ದ ಬಾಬರ್ ಅಜಂ Babar Azam ಅವರು ಬುಧವಾರ ರಾಜೀನಾಮೆ ನೀಡಿದ್ದು, ಪಾಕಿಸ್ತಾನಿ ಕ್ರಿಕೆಟ್‍ನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತಷ್ಟು ಜಗಜ್ಜಾಹೀರಾಗಿದೆ.

ಮೇಲಧಿಕಾರಿಗಳ ಸತತ ಬದಲಾವಣೆ ಮತ್ತು ಕ್ರೀಡೆಯಲ್ಲಿ ಸ್ವಜನಪಕ್ಷಪಾತವು ನುಸುಳಿದೆ ಎಂಬ ಆರೋಪಗಳಿವೆ. ಮಂಗಳವಾರ ಮಧ್ಯರಾತ್ರಿಯ ಸಮಯದಲ್ಲಿ ಬಾಬರ್ ಅಜ ತಮ್ಮ ವೈಯಕ್ತಿಕ ಸಾಮಾಜಿಕ ಮಾಧ್ಯಮದಲ್ಲಿ ರಾಜೀನಾಮೆ ಘೋಷಿಸಿದರು. ಇದಾಗಿ 12 ಗಂಟೆಗಳ ನಂತರ ಅಧಿಕೃತ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೇಳಿಕೆ ನೀಡಿದೆ.

ಪಾಕಿಸ್ತಾನ ಕ್ರಿಕೆಟ್ ಕಳೆದ ಎರಡು ವರ್ಷಗಳಲ್ಲಿ ನಾಲ್ವರು ತರಬೇತುದಾರರು, ಮೂವರು ಬೋರ್ಡ್ ಮುಖ್ಯಸ್ಥರು ಮತ್ತು ನಾಲ್ವರು ನಾಯಕರನ್ನು ಕಂಡಿದೆ. ಅದೇ ಸಮಯದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನವೂ ಕುಸಿತ ಕಂಡಿದೆ. `ಇದು ನಾಯಕತ್ವದ ಬಿಕ್ಕಟ್ಟು’ ಎಂದು ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್ ಟೀಕೆ ಮಾಡಿದ್ದಾರೆ. `ಪಾಕಿಸ್ತಾನ ಕ್ರಿಕೆಟ್ ಐಸಿಯುನಲ್ಲಿದೆ, ಚಿಕಿತ್ಸೆಗಾಗಿ ತಜ್ಞರಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಕಳೆದ ವರ್ಷದ ನವೆಂಬರ್ ನಲ್ಲಿ ನಡೆದ ಏಕದಿನ ವಿಶ್ವಕಪ್ ನಿಂದ ಪಾಕಿಸ್ತಾನದ ಆರಂಭಿಕ ನಿರ್ಗಮನದ ನಂತರ ಬಾಬರ್ ಅಜಂ ಅವರು ಎಲ್ಲಾ ಮೂರು ಸ್ವರೂಪಗಳಿಗೆ ರಾಜೀನಾಮೆ ನೀಡಿದ್ದರು. ಆದರೆ ಕಳೆದ ಮಾರ್ಚ್‍ನಲ್ಲಿ ವೈಟ್-ಬಾಲ್ ತಂಡಗಳ ನಾಯಕತ್ವಕ್ಕೆ ಮರಳಿದರು. ಆದರೆ ಕೇವಲ ಆರು ತಿಂಗಳುಗಳ ಬಳಿಕ ರಾಜೀನಾಮೆ ನೀಡಿದ್ದಾರೆ. ನಾಲ್ಕು ಪ್ರಮುಖ ಸರಣಿಗಳು ಮತ್ತು ಮುಂದಿನ ವರ್ಷ ಚಾಂಪಿಯನ್ಸ್ ಟ್ರೋಫಿ ಇದ್ದರೂ ಬಾಬರ್ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು