LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ನಮ್ಮ ಜೊತೆ 10 ಪಂದ್ಯಗಳನ್ನಾಡಿ ನೋಡಿ: ಟೀಮ್ ಇಂಡಿಯಾಗೆ ಪಾಕ್ ಕ್ರಿಕೆಟಿಗನ ಸವಾಲು

ಭಾರತ ಮತ್ತು ಪಾಕಿಸ್ತಾನ್ ಈವರೆಗೆ ಒಟ್ಟು 208 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಪಾಕಿಸ್ತಾನ್ ತಂಡ 88 ಮ್ಯಾಚ್‍ಗಳಲ್ಲಿ ಜಯ ಸಾಧಿಸಿದರೆ, ಭಾರತ ತಂಡ 76 ಪಂದ್ಯಗಳನ್ನು ಗೆದ್ದುಕೊಂಡಿದೆ. ಆದರೆ ಕಳೆದೊಂದು ದಶಕದಿಂದ ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಪಾರುಪತ್ಯ ಮರೆಯುತ್ತಾ ಬರುತ್ತಿದೆ. ಹೀಗಾಗಿಯೇ ಉಭಯ ತಂಡಗಳ ನಡುವಣ ದ್ವಿಪಕ್ಷೀಯ ಸರಣಿ ಮೂಲಕ ಯಾರು ಬಲಿಷ್ಠ ಎಂಬುದು ನಿರ್ಧಾರವಾಗಲಿ ಎಂದು ಸಕ್ಲೇನ್ ಮುಷ್ತಾಕ್ ಆಗ್ರಹಿಸಿದ್ದಾರೆ.

ಪಾಕಿಸ್ತಾನ್ ವಿರುದ್ಧದ ಟೀಮ್ ಇಂಡಿಯಾದ ಪಾರುಪತ್ಯ ಚಾಂಪಿಯನ್ಸ್ ಟ್ರೋಫಿಯಲ್ಲೂ ಮುಂದುವರೆದಿದೆ.ಚಾಂಪಿಯನ್ಸ್ ಟ್ರೋಫಿಯಲ್ಲಿನ ಟೀಮ್ ಇಂಡಿಯಾದ ಉತ್ತಮ ಪ್ರದರ್ಶನದ ಬಳಿಕ ಮಾತನಾಡಿದ ಪಾಕ್ ತಂಡದ ಮಾಜಿ ಸ್ಪಿನ್ನರ್ ಸಕ್ಲೇನ್ ಮುಷ್ತಾಕ್, ನಾವು ರಾಜಕೀಯ ವಿಷಯಗಳನ್ನು ಬದಿಗಿಟ್ಟರೆ, ಅವರ ಆಟಗಾರರು ತುಂಬಾ ಒಳ್ಳೆಯವರು. ಅಲ್ಲದೆ ಅವರು ಉತ್ತಮ ಕ್ರಿಕೆಟ್ ಆಡುತ್ತಿದ್ದಾರೆ. ಆದರೆ ಅವರು ಪಾಕಿಸ್ತಾನ್ ವಿರುದ್ಧ ಹೆಚ್ಚಿನ ಪಂದ್ಯಗಳನ್ನಾಡದಿರುವುದೇ ಸಮಸ್ಯೆಯಾಗಿರುವುದು.

ಇದರ ಹೊರತಾಗಿ ಒಂದು ಪಂದ್ಯದ ಫಲಿತಾಂಶದಿಂದ ಯಾರು ಉತ್ತಮರು ಎಂದು ಅಳೆಯುವುದು ಸರಿಯಲ್ಲ. ನನ್ನ ಪ್ರಕಾರ, ಎರಡೂ ತಂಡಗಳು ಮೂರು ಸ್ವರೂಪಗಳಲ್ಲೂ ಕನಿಷ್ಠ ಹತ್ತತ್ತು ಪಂದ್ಯಗಳನ್ನಾಡಲಿ. ಇದರಿಂದ ಯಾವ ತಂಡ ಬಲಿಷ್ಠ ಎಂಬುದು ಗೊತ್ತಾಗುತ್ತದೆ ಎಂದು ಸಕ್ಲೇನ್ ಮುಷ್ತಾಕ್ 24 ನ್ಯೂಸ್ ಚಾನೆಲ್‍ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು