LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನಮ್ಮ ಮಧ್ಯೆ ಯಾವುದೇ ಮನಸ್ತಾಪವಿಲ್ಲ: ಹೆಚ್ ಡಿ ರೇವಣ್ಣ

ಬೆಂಗಳೂರು: ಉಪ ಚುನಾವಣೆ ಸೋಲು ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಂತ್ಯಕ್ಕೆ ನಾಂದಿ ಹಾಡಬಹುದು ಎಂಬ ಮಾತುಗಳು ಬರುತ್ತಿದ್ದು, ಈ ನಡುವಲ್ಲೇ ಪಕ್ಷದ ನಾಯಕತ್ವವು ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್'ಡಿ.ಕುಮಾರಸ್ವಾಮಿ ಅವರ ಮೇಲೆ ವಿಶ್ವಾಸ ಪುನರುಚ್ಛರಿಸಲು ಆರಂಭಿಸಿದೆ.

ಚನ್ನಪಟ್ಟಣ ಉಪಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಕುಮಾರಸ್ವಾಮಿ ಹಾಗೂ ದೇವೇಗೌಡ ಪರವಾಗಿ ಮಾತನಾಡಿದ್ದು, ಇಬ್ಬರೂ ನನ್ನ ನಾಯಕರು ಎಂದು ಹೇಳುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಮೂಳೆ ಮುರಿತಗೊಂಡಿತ್ತು. ಈಗಷ್ಟೇ ಚೇತರಿಸಿಕೊಂಡಿದ್ದೇನೆ. ಹೀಗಾಗಿ ಪ್ರಚಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಮನಸ್ತಾಪವಿದೆ ಎಂದು ಯಾರಾದರೂ ಭಾವಿಸಿದರೆ ಅದು ತಪ್ಪು.ನನ್ನ ಕೊನೆಯ ಉಸಿರು ಇರುವವರೆಗೂ ಕುಮಾರಸ್ವಾಮಿ ನನ್ನ ನಾಯಕ ಮತ್ತು ನನ್ನ ಮಕ್ಕಳೂ ಅವರ ನಿರ್ಧಾರಗಳಿಗೆ ಬದ್ಧರಾಗಿದ್ದಾರೆ. ಪಕ್ಷವನ್ನು ಹೇಗೆ ಮೇಲೆತ್ತಬೇಕೆಂಬುದು ಎಚ್‌ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೆ ಹೇಗೆ ಗೊತ್ತಿದೆ. 1989 ರಲ್ಲಿ ಜೆಡಿಎಸ್ ಎರಡು ಸ್ಥಾನಗಳನ್ನು ಗೆದ್ದಾಗ ಹಾಗೂ ದೇವೇಗೌಡರು ಸೋಲು ಕಂಡಾಗ ಅವರ ರಾಜಕೀಯ ಜೀವನಕ್ಕೆ ಅಂತ್ಯವಾಗುತ್ತದೆ ಎಂದು ಕೆಲವರು ಭವಿಷ್ಯ ನುಡಿದಿದ್ದರು. ನಂತರ ಏನಾಯಿತು ನಿಮಗೇ ಗೊತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ನವರು ಸಿಪಿ ಯೋಗೇಶ್ವರ್ ರನ್ನು ಕೈಕಾಲು ಕಟ್ಟಿ ಕರೆದುಕೊಂಡು ಹೋದರು. ಸಿಪಿವೈಗೆ ಉಜ್ವಲ ಭವಿಷ್ಯ ನೀಡಲಿ. ಸಿಪಿ ಯೋಗೇಶ್ವರ್ ಒಳ್ಳೆಯ ಕೆಲಸ ಮಾಡಲಿ ಅವರನ್ನ ಮಂತ್ರಿ ಮಾಡಲಿ. ನಿಖಿಲ್ ಗೆ ಭವಿಷ್ಯವಿದೆ ಅವನಿಗೆ ವಯಸ್ಸಾಗಿಲ್ಲ. ಪ್ರಾದೇಶಿಕ ಪಕ್ಷ ಕಟ್ಟಿ ಬೆಳೆಯಲಿ ಎಂದು ಶುಭಹಾರೈಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು