LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನಮ್ಮ ಸಂವಿಧಾನವು ದೇಶದ ಅಭಿವೃದ್ಧಿಗೆ ಪೂರಕವಾಗಿ ವರವಾಗಿದೆ: ಕೆ.ಹೆಚ್.ಮುನಿಯಪ್ಪ

ದೇವನಹಳ್ಳಿ: ರಾಷ್ಟ್ರದ ಸಾರ್ವಭೌಮತ್ವವನ್ನು ಗೌರವಿಸುವ ಮತ್ತು ದೇಶದ ಎಲ್ಲಾ ನಾಗರಿಕರು ಸಮಾನ ಶಿಕ್ಷಣ, ಧಾರ್ಮಿಕ ಹಕ್ಕು, ಮೂಲಭೂತ ಹಕ್ಕುಗಳನ್ನು ಪಡೆದು ನಾವೆಲ್ಲ ಸರ್ವಸ್ವತಂತ್ರರು ಮತ್ತು ಒಕ್ಕೂಟ ವ್ಯವಸ್ಥೆಯಲ್ಲಿ ಭಾಗಿಯಾಗಿದ್ದೇವೆ ಎಂದು ಘೋಷಿಸಿಕೊಂಡ ದಿನವನ್ನು ನಾವು ಗಣರಾಜ್ಯೋತ್ಸವ ದಿನ ಎಂದು ಸಂಭ್ರಮದಿಂದ ಆಚರಿಸುತ್ತಿದ್ದೇವೆ ಎಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.

ಅವರು ದೇವನಹಳ್ಳಿ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬೆ.ಗ್ರಾ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಚರಿಸಲಾದ 76ನೇ ಗಣರಾಜ್ಯೋತ್ಸವ ಸಮಾರಂಭದ ಸಂದೇಶವನ್ನು ತಿಳಿಸುತ್ತಾ ಆಗಸ್ಟ್ 15, 1947ರಂದು ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ, ಆಗಸ್ಟ್-29 ರಂದು ಭಾರತರತ್ನ ಡಾ||ಬಿ.ಆರ್. ಅಂಬೇಡ್ಕರ್ ರವರ ನೇತೃತ್ವದಲ್ಲಿ ಸಂವಿಧಾನ ಕರಡು ಸಮಿತಿಯನ್ನು ರಚಿಸಲಾಯಿತು. ಅದರಂತೆ, ಸಮಿತಿಯು ಸಂವಿಧಾನ ಕರಡನ್ನು ಸಿದ್ಧಪಡಿಸಿ, ನವೆಂಬರ್ 04, 1947 ರಂದು ಸಂವಿಧಾನ ರಚನಾ ಸಭೆ ಮುಂದೆ ಮಂಡಿಸಿ, ಇದನ್ನು ಸುದೀರ್ಘ ಚರ್ಚೆ ನಂತರ ಅನೇಕ ತಿದ್ದುಪಡಿ/ ಪರಿಷ್ಕರಣೆ ನಂತರ ಸಂವಿಧಾನ ರಚನಾ ಸಮಿತಿಯು ನವೆಂಬರ್ 26, 1949ರಂದು ಸಂವಿಧಾನವನ್ನು ಅಂಗೀಕರಿಸಿತು. ಅದರಂತೆ, ಜನವರಿ 26, 1950ರಂದು ಸಂವಿಧಾನ ಜಾರಿಗೊಳಿಸಿದ್ದರಿಂದ ಈ ದಿನವನ್ನು ಗಣರಾಜ್ಯ ದಿನವನ್ನಾಗಿ ಆಚರಿಸುತ್ತಿದ್ದೇವೆ.

ನಮ್ಮ ಸಂವಿಧಾನವು ದೇಶದ ಕಟ್ಟಕಡೆಯ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು, ದೇಶದ ಭವಿಷ್ಯದ ಬಗ್ಗೆ ಸುಂದರ ಕನಸನ್ನು ಕಂಡು ಶಾಂತಿ ಜೀವನಕ್ಕಾಗಿ ಸುಸಂಬದ್ಧ ವ್ಯವಸ್ಥೆಯ ಸಮಗ್ರ ಚಿತ್ರಣವಾಗಿದೆ. ಇಲ್ಲಿ ಕಾನೂನುಗಳು, ವಿಧಿಗಳು ಸ್ಪಷ್ಟವಾಗಿದ್ದು ನಿಖರವಾಗಿವೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ವರವಾಗಿವೆ.ಜವಾಹರ್ ಲಾಲ್ ನೆಹರು ರವರು ಹೇಳಿದ ಹಾಗೆ ಭಾರತ ಒಂದು ವೈವಿದ್ಯತೆಯಿಂದ ಕೂಡಿರುವ ಸಮೃದ್ಧ ದೇಶ ಇಲ್ಲಿ ಹಲವು ಸಂಸ್ಕೃತಿ, ಧರ್ಮ, ಭಾಷೆ, ಪ್ರಾದೇಶಿಕತೆ ಇದ್ದರು ನಾವೆಲ್ಲ ಏಕತೆಯನ್ನು ಕಂಡಿದ್ದೇವೆ.

ಭಾರತ ಸದೃಢವಾಗಿ ಬೆಳೆದಿದೆ. ಪ್ರಪಂಚದ ಭೂಪಟದಲ್ಲಿ ತನ್ನನ್ನು ತಾನು ಹೆಮ್ಮೆಯಿಂದ ಗುರುತಿಸಿಕೊಂಡಿದೆ. ಪ್ರಪಂಚದ ಶಕ್ತಿಶಾಲಿ ರಾಷ್ಟ್ರಗಳ ಸಾಲಿನಲ್ಲಿ ನಿಂತು ಬೀಗುತ್ತಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು.ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ-2013 ರಡಿ ಕೇಂದ್ರಸರ್ಕಾರ ನೀಡುವ 5 ಕೆ.ಜಿ. ಜೊತೆಗೆ ರಾಜ್ಯ ಹೆಚ್ಚುವರಿಯಾಗಿ ಪ್ರತಿ ಫಲಾನುಭವಿಗೆ 5 ಕೆ.ಜಿ. ಅಕ್ಕಿ ಬದಲಿಗೆ ರೂ. 170/-ರಂತೆಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಆಃಖಿ ಮಾಡಲಾಗುತ್ತಿದೆ. ಮಹಿಳೆಯರಿಗೆ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಪ್ರತಿ ಮನೆ ಯಜಮಾನಿಗೆ ರೂ. 2000 ದಂತೆ ರಾಜ್ಯದಲ್ಲಿರುವ 1.22 ಕೋಟಿ ಫಲಾನುಭವಿಗಳಿಗೆ ಇಲ್ಲಿಯವರೆಗೆ ರೂ. 35,180 ಕೋಟಿ ಹಣವನ್ನು ಆಃಖಿ ಮೂಲಕ ಕುಟುಂಬದ
ಯಜಮಾನಿ ಖಾತೆಗೆ ವರ್ಗಾವಣೆ ಮಾಡಲಾಗಿದೆ ಗೃಹಜ್ಯೋತಿಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲು ರಾಜ್ಯದ ಒಟ್ಟು 1.62 ಕೋಟಿ ಫಲಾನುಭವಿಗಳಿಗೆ ರೂ. 719 ಕೋಟಿಗಳನ್ನು ವೆಚ್ಚ ಮಾಡಲಾಗಿದೆ.

ಶಕ್ತಿ ಯೋಜನೆಯು ನಮ್ಮ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಉದ್ದೇಶಕ್ಕಾಗಿ ರೂ. 9124 ಕೋಟಿಗಳನ್ನು ಖರ್ಚು ಮಾಡಲಾಗಿದೆ ಯುವನಿಧಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 2.14 ಲಕ್ಷ ವಿದ್ಯಾವಂತ ನಿರುದ್ಯೋಗ ಯುವಕ/ಯುವತಿಯವರಿಗೆ ರೂ. 252.51 ಕೋಟಿ ರೂಗಳ  ಪ್ರೋತ್ಸಾಹಧನವನ್ನು ಮಂಜೂರು ಮಾಡಲಾಗಿದೆ ಒಟ್ಟು 2048 ಫಲಾನುಭವಿಗಳು ಯುವನಿಧಿ ಯೋಜನೆಯಡಿ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.

ಸರಳೀಕೃತ ದರಖಾಸ್ತು ಪೋಡಿ ಆಂದೋಲನಕ್ಕೆ ದಿನಾಂಕ: 24-01-2025ರಂದು ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಭೈರೇಗೌಡರವರ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 1236 ಆರ್ಟಿಸಿ ವಿತರಣೆ ಮಾಡುವ ಮೂಲಕ ರಾಜ್ಯಮಟ್ಟದ ಹೊಸ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ರೈತಾಪಿ ಜನರು ಪೋಡಿಗಾಗಿ ಕಂದಾಯ ಇಲಾಖೆಯ ಕಛೇರಿಗಳನ್ನು ಅಲೆಯುವುದನ್ನು ತಪ್ಪಿಸಲು ಬಹಳ ವ್ಯವಸ್ಥಿತವಾದ ಪೋಡಿ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಕ್ರೀಯಾಶೀಲ ಸಚಿವರಾದ ಕೃಷ್ಣ ಭೈರೇಗೌಡರಿಗೆ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಕುವೆಂಪು ಅವರು ತಮ್ಮ ವಿಶ್ವಮಾನವ ಸಂದೇಶದಲ್ಲಿ ಹೇಳಿದಂತೆ ವಿಜ್ಞಾನಯುಗದ ಪ್ರಾಯೋಗಿಕ ದೃಷ್ಟಿಗೆ ಇನ್ನು ಮೇಲೆ ಮತಮೌಢ್ಯ ಒಪ್ಪಿಗೆಯಾಗದು ಎಂಬುದನ್ನು ಅರ್ಥೈಸಿಕೊಂಡು, ಮೇಲು, ಕೀಳು, ಬಡವ, ಬಲ್ಲಿದನೆಂಬ ಭೇದ ಮರೆತು ರಾಷ್ಟ್ರ ನಿರ್ಮಾಣ ಮಾಡೋಣ. ಸ್ನೇಹ, ಪ್ರೀತಿ, ಸೋದರ ಭಾವದ ಸೆಲೆ ನಮ್ಮ ಜೀವಾಳವಾಗಲಿ ಎಂದು ಹಾರೈಸಿದರು
ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ, ಪೊಲೀಸ್ ವರಿಷ್ಟಾಧಿಕಾರಿ ಸಿ.ಕೆ.ಬಾಬಾ, 5 ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ತಹಶೀಲ್ದಾರ್ ಹೆಚ್.ಬಾಲಕೃಷ್ಣ, ತಾಪಂ ಇ.ಓ.ಶ್ರೀನಾಥ್ ಗೌಡ, ಬಯಾಪ ಅಧ್ಯಕ್ಷ ಶಾಂತಕುಮಾರ್, ಬಯಪಾ ನಿರ್ದೇಶಕರಾದ ವಿ.ಮಂಜುನಾಥ್, ಪ್ರಸನ್ನಕುಮಾರ್, ವಿ.ರಾಮಚಂದ್ರಪ್ಪ, ಜಗನ್ನಾಥ್ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು