LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನವರಸ ನಟನ ಅಕಾಡೆಮಿಯಲ್ಲಿ ಜುಲೈ 20 ರಿಂದ ಹೊಸ ಬ್ಯಾಚ್ ಶುರು

ಜಗ್ಗೇಶ್ ಅವರ ಆಶೀರ್ವಾದದೊಂದಿಗೆ ಶುರುವಾದ ನವರಸ ನಟನ ಅಕಾಡೆಮಿ ಇದೀಗ ಆರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಳೆದ ಆರು ವರ್ಷಗಳಲ್ಲಿ 150ಕ್ಕೂ ಹೆಚ್ಚು ಬ್ಯಾಚ್ ವಿದ್ಯಾರ್ಥಿಗಳಿಗೆ ಅಭಿನಯ, ನಾಟಕ, ನಿರ್ದೇಶನ, ಡಾನ್ಸಿಂಗ್, ಫೈಟಿಂಗ್, ಮೂಖಾಭಿನಯ, ಮೇಕಪ್, ಸಂಕಲನ ಮತ್ತು ಡಬ್ಬಿಂಗ್ ಸೇರಿದಂತೆ ಚಿತ್ರೀಕರಣದ ಅನುಭವ,ಪೋಸ್ಟ್ ಪ್ರೊಡಕ್ಷನ್ ಮೊದಲಾದ ಕುರಿತು ತರಗತಿ ನೀಡುತ್ತಾ ಬಂದಿದೆ.

ಜುಲೈ 20ರಿಂದ ಹೊಸ ಬ್ಯಾಚ್ ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಪ್ರಾಂಶುಪಾಲರಾಗಿರುವ ಈ ಸಂಸ್ಥೆ, ಈ ಬಾರಿ ಸಾಕಷ್ಟು ಮಾರ್ಪಾಡು ಮಾಡಿಕೊಂಡಿದ್ದು, ಹೊಸ ಬ್ಯಾಚ್‍ಗಳ ವಿದ್ಯಾರ್ಥಿಗಳಿಗೆ ಅವೆಲ್ಲವೂ ಲಭ್ಯವಾಗಲಿದೆ. ನಾಲ್ಕು ಮತ್ತು ಆರು ತಿಂಗಳ ನಟನೆ, ನಿರ್ದೇಶನದ ಕೋರ್ಸ್, ವಾರದ ತರಗತಿಗಳು ಮತ್ತು ವಾರಾಂತ್ಯದ ತರಗತಿಗಳು ಅಕಾಡೆಮಿಯಲ್ಲಿ ನಡೆಯಲಿದೆ.

ಕಳೆದ ಎರಡು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ನವರಸ ನಟನ ಅಕಾಡೆಮಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಮಾಲೂರು ಶ್ರೀನಿವಾಸ್ ಸಹ ವಿದ್ಯಾರ್ಥಿಗಳಿಗೆ ನೃತ್ಯ ಹಾಗೂ ಇನ್ನಿತರೆ ಪಟ್ಟುಗಳನ್ನು ಕಲಿಸಿಕೊಡಲಿದ್ದಾರೆ.ಪ್ರಾಂಶುಪಾಲರಾದ ಶಿವಮಣಿ ಸೇರಿದಂತೆ ಕನ್ನಡದ ಹಲವಾರು ಖ್ಯಾತ ನಿರ್ದೇಶಕರು, ನಟರು, ತಂತ್ರಜ್ಞರಿಂದ ನಟನೆ, ನಿರ್ದೇಶನ, ಡೈಲಾಗ್ ಡೆಲಿವರಿ ಹಾಗೂ ಕ್ಯಾಮೆರಾ ಎದುರಿಸುವ ಪರಿ ಇತ್ಯಾದಿಗಳನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟು ಅವರಿಂದಲೇ ಕಿರುಚಿತ್ರವೊಂದನ್ನು ತಯಾರು ಮಾಡಿಸಿ ಅರ್ಹತಾ ಪತ್ರ ವಿತರಣೆ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಬೀಳ್ಕೊಡುತ್ತದೆ ನವರಸ ನಟನ ಅಕಾಡೆಮಿ.

ಆರು ವರ್ಷ ಯಶಸ್ವಿಯಾಗಿ ಮುಗಿಸಿರುವ ಖುಷಿಯಲ್ಲಿದ್ದಾರೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮಾಲೂರು ಶ್ರೀನಿವಾಸ್.ಮಹಿಳೆಯರಿಗಾಗಿ ವಿಶೇಷ ರಿಯಾಯಿತಿ ಸೌಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ: ನವರಸ ನಟನ ಅಕಾಡೆಮಿ, ಮೊ. ಸಂಖ್ಯೆ; 98802 19666 / 98804 19666 ಸಂಪರ್ಕಿಸಬಹುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು