LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನವ ಜಾತ ಶಿಶು ಅಪಹರಣ ಪ್ರಕರಣ ಸುಖಾಂತ್ಯ! ಇಬ್ಬರು ಕಳ್ಳಿಯರ ಬಂಧನ

ಕಲಬುರಗಿ: ಗುಲ್ಬುರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ನಲ್ಲಿ ಅಪಹರಣಗೊಂಡಿದ್ದ ನವ ಜಾತ ಶಿಶುವನ್ನು ರಕ್ಷಿಸುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದೆ. ಮಗು ಅಪಹರಣ ಮಾಡಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿದ್ದು, ಕಂದಮ್ಮನನ್ನು ಸುರಕ್ಷಿತವಾಗಿ ಮತ್ತೆ ತಾಯಿ ಮಡಿಲಿಗೆ ಸೇರಿಸಿದ್ದಾರೆ.

ಬಂಧಿತರನ್ನು ಹೆಚ್. ನಸ್ರೀನ್ ಮತ್ತು ಫಾತೀಮಾ ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಜಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ನರ್ಸ್ ಗಳ ಸೋಗಿನಲ್ಲಿ ಬಂದಿದ್ದ ಕಳ್ಳಿಯರು, ನವಜಾತ ಗಂಡು ಶಿಶುವನ್ನು ಅಪಹರಿಸಿ ಪರಾರಿಯಾಗಿದ್ದರು. ಇದು ರಾಜಾದ್ಯಂತ ಸುದ್ದಿಯಾಗುತ್ತಿದ್ದಂತೆಯೇ ಪೊಲೀಸರು ಹುಡುಕಾಟ ಆರಂಭಿಸಿದ್ದರು.

ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ನೇತೃತ್ವದ ಪೊಲೀಸ್ ತಂಡ 36 ಗಂಟೆಗಳಲ್ಲಿ ಕ್ಷೀಪ್ರ ಕಾರ್ಯಾಚರಣೆ ನಡೆಸುವ ಮೂಲಕ ಕಳ್ಳಿಯರನ್ನು ಬಂಧಿಸಿ ಮಗುವನ್ನು ಪತ್ತೆ ಹಚ್ಚಿದೆ. ಬಳಿಕ ಬುಧವಾರ ತಡರಾತ್ರಿ ಆಸ್ಪತ್ರೆಗೆ ಧಾವಿಸಿ, ತಾಯಿ ಮಡಿಲಿಗೆ ಮಗುವನ್ನು ಸೇರಿಸಿದೆ. ಈ ವೇಳೆ ಸಂತೋಷಗೊಂಡ ತಾಯಿ ಪೊಲೀಸರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಅಂದಹಾಗೆ, ಕಸ್ತೂರಿ ಎಂಬುವವರು ಸೋಮವಾರ (ನ.25) ನಸುಕಿನ ಜಾವ 4 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ತಾಯಿ ಮಗು ಆರೋಗ್ಯವಾಗೇ ಇದ್ದರು. ಈ ವೇಳೆ ನರ್ಸ್ ವೇಷದಲ್ಲಿ ಬಂದ ಮಹಿಳೆಯರು 'ರಕ್ತ ಪರೀಕ್ಷೆ ಮಾಡಬೇಕು, ಮಗು ಕರೆದುಕೊಂಡು ಬನ್ನಿ' ಎಂದು ಹೇಳಿದ್ದಾರೆ. ಹೀಗಾಗಿ, ಕಸ್ತೂರಿ ಅವರ ಸಂಬಂಧಿ ರಕ್ತ ತಪಾಸಣೆಗಾಗಿ ಮಗುವಿನೊಂದಿಗೆ ಹೋಗಿದ್ದರು. ಈ ವೇಳೆ ಮಹಿಳೆಯರು ಮಗುವನ್ನು ನಮಗೆ ಕೊಡಿ ಎಂದು ಹೇಳಿದ್ದಾರೆ. ಬಳಿಕ ಇಬ್ಬರು ಮಹಿಳೆಯರು ಮಗುವನ್ನು ಎತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದರು.

ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು