LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

`ನಾಗಮಂಗಲ ಘಟನೆ ವೇಳೆ ಪಾಕ್ ಪರ ಘೋಷಣೆ'

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ. ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ನಾಗಮಂಗಲ ಗಲಭೆಯಲ್ಲಿ ಕೇರಳ ಮೂಲದವರ ಮತ್ತು ನಿಷೇಧಿತ ಪಿಎಫ್‍ಐ ಸಂಘಟನೆ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿರುವ ಬೆನ್ನಲ್ಲೇ ಅಶೋಕ್ ಈ ಹೇಳಿಕೆ ನೀಡಿದ್ದಾರೆಈ ಸಂಬಂಧ ಟ್ವಿಟ್ ಮಾಡಿರುವ ಅವರು, ``ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗುತ್ತಿದೆ.

ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್‍ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ'' ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

``ಇಂತಹ ಘಟನೆಗಳು ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ.

ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ಎನ್‍ಐಎ ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ'' ಎಂದು ಅಶೋಕ್ ಉಲ್ಲೇಖಿಸಿದ್ದಾರೆ.ನಾಗಮಂಗಲ ಗಲಭೆ ಸಂಬಂಧ ದಾಖಲಾಗಿರುವ ಎಫ್‍ಐಆರ್‍ನಲ್ಲಿ ಕೇರಳ ಮೂಲದ ಇಬ್ಬರ ಹೆಸರು ಇರುವುದು ಭಾನುವಾರ ಬೆಳಕಿಗೆ ಬಂದಿತ್ತು. ಇದನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿರುವ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು