LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನಾಗವಲ್ಲಿ ಬಂಗಲೆ ಚಿತ್ರದ ಟೀಸರ್, ಪೋಸ್ಟರ್ ಬಿಡುಗಡೆ

ಕನ್ನಡದಲ್ಲಿ ಈಗ ಕಂಟೆಂಟ್ ಓರಿಯೆಂಟೆಡ್ ಚಿತ್ರಗಳದೇ ಕಾರುಬಾರು. ಅಂತಹ ವಿಭಿನ್ನ ಕಂಟೆಂಟ್ ಹೊಂದಿರುವ ಹಾರಾರ್ ಜಾನರ್ ಚಿತ್ರ "ನಾಗವಲ್ಲಿ ಬಂಗಲೆ". ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆಯಾಯಿತು. ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಟೀಸರ್ ಹಾಗೂ ಪೋಸ್ಟರ್ ಅನಾವರಣ ಮಾಡಿ ಚಿತ್ರಕ್ಕೆ ತಮ್ಮ  ಪ್ರೋತ್ಸಾಹದ ನುಡಿಗಳ ಮೂಲಕ ಶುಭ ಹಾರೈಸಿದರು. ಮಾಜಿ ಉಪ ಮಹಾಪೌರರಾದ ಪುಟ್ಟರಾಜು ಅವರು ಸಹ ಈ ಸಂದರ್ಭದಲ್ಲಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

"ನಾಗವಲ್ಲಿ ಬಂಗಲೆ" ಚಿತ್ರದಲ್ಲಿ ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ ಈ ಆರು ಗುಣಗಳನ್ನು ಪ್ರತಿನಿಧಿಸುವ ಆರು ಮುಖ್ಯಪಾತ್ರಗಳಿರುತ್ತದೆ. ಆರು ಜನ ಹುಡುಗಿಯರು ಈ ಆರು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಆರು ಪಾತ್ರಗಳು "ನಾಗವಲ್ಲಿ ಬಂಗಲೆ" ಪ್ರವೇಶಿಸಿದಾಗ ಏನೆಲ್ಲಾ ಆಗುತ್ತದೆ ಎಂಬುದೆ ಚಿತ್ರದ ಕಥಾ ಹಂದರ ಎಂದು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಜೆ.ಎಂ.ಪ್ರಹ್ಲಾದ್ ತಿಳಿಸಿದರು.

ನಮ್ಮ ಆಫೀಸ್ ನಲ್ಲಿ ನಾನು ಹಾಗೂ ಜೆ.ಎಂ.ಪ್ರಹ್ಲಾದ್ ಅವರಿದ್ದಾಗ ಅಲ್ಲಿಗೆ ಆಗಮಿಸಿದ ನಿರ್ಮಾಪಕ ನೆ.ಲ ಮಹೇಶ್ ಅವರು, ಜೆ.ಎಂ.ಪ್ರಹ್ಲಾದ್ ಅವರು ಹೇಳಿದ ಕಥೆ ಕೇಳಿ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದರು. ನಿರ್ಮಾಪಕರು ಕಥೆ ಕೇಳಿದ ಕೇವಲ ಐದೇ ದಿನಗಳಲ್ಲಿ ಚಿತ್ರೀಕರಣ ಆರಂಭವಾಯಿತು. ಇದು ಹಾರಾರ್ ಚಿತ್ರವಾದರೂ, ಕೊನೆಯಲ್ಲಿ ದೆವ್ವ ಭೂತಗಳು ಇಲ್ಲ. ಇದೆಲ್ಲಾ ನಮ್ಮ ಮನಸ್ಸಿನ ಭ್ರಮೆ ಎಂಬ ವಿಷಯವನ್ನು ಹೇಳಿದ್ದೇವೆ ಎಂದರು ನಿರ್ದೇಶಕ ಕವಿ ರಾಜೇಶ್. ಹಂಸ ವಿಷನ್ಸ್ ಲಾಂಛನದಲ್ಲಿ ನಾನು ಹಾಗೂ ನೇವಿ ಮಂಜು ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ನೆ.ಲ.ನರೇಂದ್ರ ಬಾಬು, ನೇವಿ ಮಂಜು ಹಾಗೂ ಅನೇಕ ನೂತನ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಫೆಬ್ರವರಿ 28 ರಂದು ಚಿತ್ರವನ್ನು ತೆರೆಗೆ ತರುತ್ತೇವೆ ಎಂದು ನಿರ್ಮಾಪಕ ನೆ.ಲ.ಮಹೇಶ್ ಹೇಳಿದರು.

ನಾಗವಲ್ಲಿ ಪಾತ್ರಧಾರಿ ತೇಜಸ್ವಿನಿ, ಚಿತ್ರದಲ್ಲಿ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಸಿಮ್ರಾನ್, ಮಾನಸ, ರೂಪಶ್ರೀ, ಸುಷ್ಮ, ರಂಜಿತ, ಶ್ವೇತ, ನಾಯಕ ಯಶ್ ಹಾಗೂ ನೃತ್ಯ ನಿರ್ದೇಶಕ ತ್ರಿಭುವನ್ ಮುಂತಾದವರು ಚಿತ್ರದ ಕುರಿತು ಮಾಹಿತಿ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು