LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Feature Article

ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ಗವಿ ಗಂಗಾಧರೇಶ್ವರ ದೇಗುಲದಲ್ಲಿ ಕೌತುಕಕ್ಕೆ ಕ್ಷಣಗಣನೆ

ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತಿದೆ. ವಿಶೇಷವಾಗಿ ಗವಿಪುರದಲ್ಲಿರುವ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ದೇವಾಲಯ ಇಂದು ವಿಸ್ಮಯಕ್ಕೆ ಸಾಕ್ಷಿಯಾಗಲಿದೆ.

ಗವಿಗಂಗಾಧರ ದೇವಸ್ಥಾನದ ಶಿವಲಿಂಗವನ್ನು ಸೂರ್ಯರಶ್ಮಿ ಸ್ಪರ್ಶಿಸಲಿದ್ದು, ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ.

ಸೂರ್ಯ ದಕ್ಷಿಣಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಸೂರ್ಯ ಕಿರಣವು ಶಿವ ಲಿಂಗವನ್ನು ಸ್ಪರ್ಶಿಸಲಿದೆ. ಹೀಗಾಗಿ ಇಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಬೆಳ್ಳಗ್ಗೆ 5 ಗಂಟೆಯಿಂದಲೇ ಗಂಗಾಧರನಿಗೆ ವಿಶೇಷ ಪೂಜೆ ಆರಂಭವಾಗಿದೆ. ಗಂಗಾಧರನಿಗೆ ಪಂಚಾಭೀಷೇಕ, ಪುಷ್ಪಾಭಿಷೇಕ, ಮಹಮಂಗಳಾರತಿ‌ ಮಾಡಿದ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

ವಿಶೇಷ ವಿದ್ಯಮಾನವನ್ನು ಕಣ್ತುಂಬಿಕೊಳ್ಳಲಿರುವ ಭಕ್ತರು ಕಾತರದಿಂದ ಇದ್ದು, ಸಾವಿರಾರು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಬರುವ ನಿರೀಕ್ಷೆ ಇದೆ. ಹಬ್ಬದ ಹಿನ್ನೆಲೆ ಮುಂಜಾನೆಯಿಂದಲೇ ದೇಗುಲಕ್ಕೆ ಭಕ್ತಸಾಗರ ಹರಿದುಬರುತ್ತಿದೆ.

ದೇಗುಲದಲ್ಲಿ ಮಧ್ಯಾಹ್ನ ಒಂದು ಗಂಟೆಯವರೆಗೂ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿದ್ದು. ಅದಾದ ನಂತರ ದೇವಾಲಯದಲ್ಲಿ ಶುದ್ದಿ ಕಾರ್ಯ ನಡೆಯಲಿದೆ. ಈ ಬಾರಿ ಸಂಜೆ 5.14 ರಿಂದ 5.17ರವರೆಗೆ ಅಂದರೆ 3 ನಿಮಿಷಗಳ ನಡುವೆ ಸೂರ್ಯ ರಶ್ಮಿ ಗವಿಗಂಗಾಧರೇಶ್ವರ ಸ್ವಾಮಿಯನ್ನು ಸ್ಪರ್ಶಿಸಲಿದೆ. ದಕ್ಷಿಣ ಪಥದಿಂದ ಉತ್ತರ ಪಥಕ್ಕೆ ಸಾಗುವ ಸೂರ್ಯ ದೇವ ಶಿವದರ್ಶನ ಪಡೆಯುವ ಸಮಯವಿದು. ಈ ವೇಳೆ ಶಿವನ ವಿಗ್ರಹಕ್ಕೆ ಎಳನೀರು ಮತ್ತು ಕ್ಷೀರದಿಂದ ಅಭಿಷೇಕ ಮಾಡಲಾಗುತ್ತದೆ.

ಭಕ್ತರು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಲ್ಲಿ ಎಲ್ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ. 2 ಎಲ್ಇಡಿ ಹಾಗೂ 5 ಟಿವಿಗಳ ವ್ಯವಸ್ಥೆ ಮಾಡಲಾಗಿದೆ. ದೇವರನ್ನು ಸೂರ್ಯರಶ್ಮಿ ಸ್ಪರ್ಶಿಸುವ ವೇಳೆ ಅರ್ಚಕರನ್ನು ಬಿಟ್ಟರೆ ಇನ್ನುಳಿದ ಯಾರಿಗೂ ದೇವಸ್ಥಾನ ಒಳ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ.

ಇನ್ನೂ.. ಈ ಮಕರ ಸಂಕ್ರಮಣ ಹಲವು ಅದ್ಬತಗಳಿಗೆ ಕಾರಣವಾಗುತ್ತದೆ. ಒಂದು ಕಡೆ ಗವಿಗಂಗಧಾರೇಶ್ವರ ದೇವಾಲಯದಲ್ಲಿ ಸೂರ್ಯನ ಕಿರಣವು ಶಿವನನ್ನ‌ ಸ್ಪರ್ಶಿಸಿದರೇ. ಮತ್ತೊಂದು ಕಡೆ ಶಬರಿಮಲೆ ಅಯ್ಯಪ್ಪನ ದೇಗುಲದಲ್ಲಿ ಮಕರ ಜ್ಯೋತಿ ಕಾಣಿಸಿಕೊಳ್ಳುತ್ತದೆ.

ಈಗಾಗಲೇ ಕಳೆದ ಎರಡು ದಿನದಿಂದಲೂ ಅಯ್ಯಪ್ಪ ದೇಗುಲದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿದೆ. ಪಂಪಾದಲ್ಲಿ ನಿನ್ನೆ ದೀಪೋತ್ಸವ ನಡೆದಿದ್ದು, ಇಂದು ಅಂದರೆ ಜನವರಿ 14ರಂದು ಸಂಜೆ 5ಕ್ಕೆ ತಿರುವಾಭರಣ ಘೋಷಯಾತ್ರೆ ಶರಂಗುತ್ತಿಗೆ ಆಗಮಿಸುತ್ತದೆ. ನಂತರ ಸಂಜೆ 6.30ಕ್ಕೆ ಅಯ್ಯಪ್ಪನಿಗೆ ಚಿನ್ನಾಭರಣ ತೊಡಿಸಿ ದೀಪಾರಾಧನೆ ಮಾಡಲಾಗುತ್ತದೆ. ಇದಾದ ಬಳಿಕ ಭಕ್ತರೆಲ್ಲರೂ ವರುಷ ಪೂರ್ತಿ ಕಾತುರದಿಂದ ಕಾಯುವ ಮಕರಜ್ಯೋತಿಯ ದರ್ಶನವಾಗುತ್ತದೆ. ವರ್ಷ ಒಮ್ಮೆ ಅಯ್ಯಪ್ಪ ಸ್ವಾಮಿಯೂ ಈ ರೀತಿ ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾರೆ ಎಂಬ ನಂಬಿಕೆ ಜನರಲ್ಲಿ ಇದೆ.

ಇದಲ್ಲದೆ, ಇತ್ತ, ಶ್ರೀರಂಗಪಟ್ಟಣ ದಕ್ಷಿಣ ಕಾವೇರಿ ನದಿ ತೀರದಲ್ಲಿರುವ ಏಕೈಕ ಶಿವನ ದೇವಾಲಯ ಪುರಾಣ ಪ್ರಸಿದ್ಧ ಕಾಶಿ ಚಂದ್ರಮೌಳೇಶ್ವರ ದೇವಾಲಯದ ಗರ್ಭಗುಡಿಯ ಲಿಂಗಕ್ಕೂ ಸೂರ್ಯಸ್ನಾನ ನಡೆಯಲಿದೆ. ಸೂರ್ಯನ‌ ಪ್ರಥಮ‌ ರಶ್ಮಿ ಕಿರಣಗಳು ಸ್ಪರ್ಶ ಮಾಡುವ ಈ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು