LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಾನು ಕೂಡ ಕುಮಾರಣ್ಣ ರೀತಿ ನಾನು ಜನರೊಂದಿಗೆ ಭಾವನಾತ್ಮಕವಾಗಿ ಅಂಟಿಕೊಂಡಿದ್ದೇನೆ: ನಿಖಿಲ್ ಕುಮಾರಸ್ವಾಮಿ

ರಾಮನಗರ: ನಾನು ಕೂಡ ಕುಮಾರಣ್ಣ ರೀತಿ ನಾನು ಜನರೊಂದಿಗೆ ಭಾವನಾತ್ಮಕವಾಗಿ ಅಂಟಿಕೊಂಡಿದ್ದೇನೆ. ನಾನು ಚುನಾವಣೆಯಲ್ಲಿ ಸೋತಿದ್ದೀನಿ ಅಷ್ಟೇ, ಸತ್ತಿಲ್ಲ ನಮ್ಮ ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ, ಈ ಸೋಲಿನಿಂದ ನಾನು ಎದೆಗುಂದುವುದಿಲ್ಲ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ತಾಲೂಕಿನ ಕೂಡ್ಲೂರು ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ  ಹಮ್ಮಿಕೊಂಡಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ನಾವು ಮುಂದಿನ ಸಾರ್ವತ್ರಿಕ ಚುನಾವಣೆಗೆ ಸಿದ್ಧರಾಗಬೇಕು. ನನಗೆ ಕೇವಲ 36 ವರ್ಷ ನನಗಿದು ಚಿಕ್ಕ ವಯಸ್ಸು, ದಯವಿಟ್ಟು ನನ್ನನ್ನು ಬಳಸಿಕೊಳ್ಳಿ, ನಾನು ಸುಮ್ಮನೆ ಕುಳಿತುಕೊಳ್ಳುವುದಿಲ್ಲ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ, ಎಂದು ತಿಳಿಸಿದರು. ನಮ್ಮ ಪಕ್ಷದ ಆಧಾರ ಸ್ತಂಭಗಳೇ ನಿಷ್ಠಾವಂತ ಕಾರ್ಯಕರ್ತರುಗಳು, ರಾಮನಗರ ಜಿಲ್ಲೆ ನಮಗೆ ರಾಜಕೀಯ ಜೀವನ ನೀಡಿದೆ. ನನ್ನ ಜೀವನವೇ ಹೋರಾಟ, ನಾನು ಸಮುದ್ರದ ಅಲೆಗಳ ವಿರುದ್ಧ ಈಜುವ ಅಭ್ಯಾಸವನ್ನು ಹೊಂದಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

2019ರಲ್ಲಿ ಏನಾಯಿತು ಎಂಬುದು ನಿಮಗೆಲ್ಲರಿಗೂ ಗೊತ್ತಿದೆ. ನನ್ನ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವವರ ಬಗ್ಗೆ ನಾನು ಎಂದಿಗೂ ಹಗುರವಾಗಿ ಮಾತನಾಡಿಲ್ಲ. ನಾನು ಯುವಕನಾಗಿದ್ದೇನೆ, ಯುವ ಸಮುದಾಯದ ಪೀಳಿಗೆಗೆ ನನ್ನದೇ ಆದ ಕೊಡುಗೆ ನೀಡಬೇಕು ಎನ್ನುವುದು ನನ್ನ ಆಶಯ ಎಂದರು. ರಾಮನಗರ ಜಿಲ್ಲೆಯು ಕೂಡ ನಮ್ಮ ಕುಟುಂಬಕ್ಕೆ ಎಂಟು ಬಾರಿ ಶಾಸಕ ಸ್ಥಾನ, ಮೂರು ಬಾರಿ ಕುಮಾರಣ್ಣ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿದೆ. ಚುನಾವಣೆಯಲ್ಲಿ ಏಳು ಬೀಳು ಸರ್ವೆ ಸಾಮಾನ್ಯ. ಮುಂದಿನ ಚುನಾವಣೆಯಲ್ಲಿ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಸಭೆಗೂ ಮುನ್ನ ತಂಬಾಕು ಬೆಳೆಯುವ ರೈತರ ಜತೆ ಸಭೆ ನಡೆಸಿದರು. "ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಹುಣಸೂರು ಹಾಗೂ ಪಿರಿಯಾಪಟ್ಟಣ ಕ್ಷೇತ್ರದ ತಂಬಾಕು ಬೆಳೆದ ರೈತರು ಬೆಳೆಗೆ ಸೂಕ್ತ ಬೆಂಬಲ ಬೆಲೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದೇವೆ. ನಮಗೆ ಸೂಕ್ತ ಬೆಂಬಲ ಕೊಡಿಸಿ" ಎಂದು ಕೇಂದ್ರ ಸಚಿವರು ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು