LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ನಾಯಕನಾಗಿ ಇಶಾನ್ ಕಿಶನ್ ರಿ ಎಂಟ್ರಿ

ಟೀಮ್ ಇಂಡಿಯಾ ದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್‍ಗೆ ಮರಳಲು ಸಜ್ಜಾಗಿದ್ದಾರೆ. ಅದು ಕೂಡ ದೇಶೀಯ ಅಂಗಳದಲ್ಲಿ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. ಇಶಾನ್ ಕಿಶನ್ ಮುಂಬರುವ ಬುಚಿ ಬಾಬು ಟೂರ್ನಿಯಲ್ಲಿ ಜಾರ್ಖಂಡ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ.

2023 ರಲ್ಲಿ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದ ಇಶಾನ್ ಕಿಶನ್ ಅವರಿಗೆ ರಣಜಿ ಟೂರ್ನಿ ಆಡುವಂತೆ ಬಿಸಿಸಿಐ ಸೂಚಿಸಿತ್ತು. ಬಿಸಿಸಿಐ ಸೂಚನೆಯನ್ನು ನಿರ್ಲಕ್ಷಿಸಿದ್ದರಿಂದ ಅವರನ್ನು ಕೇಂದ್ರೀಯ ಒಪ್ಪಂದದಿಂದ ಕೈ ಬಿಡಲಾಗಿತ್ತು. ಇದಾದ ಬಳಿಕ ಇಶಾನ್ ಕಿಶನ್ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿರಲಿಲ್ಲ.
ಅಷ್ಟೇ ಅಲ್ಲದೆ ಇತ್ತೀಚೆಗೆ ನಡೆದ ಝಿಂಬಾಬ್ವೆ ಹಾಗೂ ಶ್ರೀಲಂಕಾ ವಿರುದ್ಧದ ಸರಣಿಗೂ ಇಶಾನ್ ಕಿಶನ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿರಲಿಲ್ಲ.

ಇದರಿಂದ ಎಚ್ಚೆತ್ತುಕೊಂಡಿರುವ ಇಶಾನ್ ಕಿಶನ್ ಇದೀಗ ಬುಚಿ ಬಾಬು ಟೂರ್ನಿಯಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಅದರಂತೆ ಇದೀಗ ಬುಚಿ ಬಾಬು ಟೂರ್ನಿಯಲ್ಲಿ ಜಾರ್ಖಂಡ್ ಪರ ನಾಯಕನಾಗಿ ಕಣಕ್ಕಿಳಿಯಲು ಕಿಶನ್ ಸಜ್ಜಾಗಿದ್ದಾರೆ. ಈ ಮೂಲಕ ಮುಂಬರುವ ದುಲೀಪ್ ಟ್ರೋಫಿ ತಂಡಕ್ಕೆ ಆಯ್ಕೆಯಾಗುವ ವಿಶ್ವಾಸದಲ್ಲಿದ್ದಾರೆ ಯುವ ಎಡಗೈ ದಾಂಡಿಗ.

ಬುಚಿ ಬಾಬು ಟೂರ್ನಿಯು ಆಗಸ್ಟ್ 15 ರಿಂದ ಶುರುವಾಗಲಿದೆ. 12 ತಂಡಗಳ ನಡುವಣ ಈ ಕ್ರಿಕೆಟ್ ಕದನದ 2ನೇ ಸುತ್ತಿನ ಪಂದ್ಯಗಳು ಆಗಸ್ಟ್ 21 ರಿಂದ ಆರಂಭವಾಗಲಿದೆ. ಹಾಗೆಯೇ ಸೆಪ್ಟೆಂಬರ್ 2 ರಿಂದ ಸೆಮಿಫೈನಲ್ ಪಂದ್ಯಗಳು ಶುರುವಾಗಲಿದ್ದು, ಫೈನಲ್ ಪಂದ್ಯವು ಸೆಪ್ಟೆಂಬರ್ 8 ರಂದು ಆರಂಭವಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು