LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನಾಲ್ವರು ಅಂತರ ರಾಜ್ಯ ಕಳ್ಳರ ಬಂಧನ: 514 ಗ್ರಾಂ ಚಿನ್ನ, 3 ಕೆಜಿ ಬೆಳ್ಳಿ ವಶಕ್ಕೆ

ಹನೂರು: ಪಟ್ಟಣದ ಆಶ್ರಯ ಬಡಾವಣೆ ನಿವಾಸಿ ಸಾಬೀರ್ ಅಹಮದ್ ರವರ ಮನೆಯಲ್ಲಿ ಕಳ್ಳತನ ಮಾಡಿದ್ದ ಕುಖ್ಯಾತ ಅಂತರ ರಾಜ್ಯ ನಾಲ್ವರು ಕಳ್ಳರನ್ನು ಬಂಧನ ಮಾಡಿ 514 ಗ್ರಾಂ ಚಿನ್ನ 3 ಕೆಜಿ ಬೆಳ್ಳಿ ಆಭರಣವನ್ನು ವಶಕ್ಕೆ ಪಡೆಯುವಲ್ಲಿ ಚಾಮರಾಜನಗರ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ತಮಿಳುನಾಡು ಮೂಲದ ಕೊಡಂಗು ಸ್ವಾಮಿ (58) ಇಂದಿರರಾಜ್ @ ಇಂದ್ರರಾಜ್ (35) ಕೇರಳ ಮೂಲದ ಅಜಿತ್ (23)ಜೇಸುದಾಸ್ @ ಯೇಸುದಾಸ್ (39) ಬಂಧಿತ ಆರೋಪಿಗಳಾಗಿದ್ದಾರೆ.ಘಟನೆ ವಿವರ: ಹನೂರು ಪಟ್ಟಣದ ಆಶ್ರಯ ಬಡಾವಣೆ ನಿವಾಸಿ ಸಾಬೀರ್ ಅಹಮದ್ ರವರು ತಮ್ಮ ಸಂಬಂಧಿಕರ ಮದುವೆಗೆ ಹೋಗಿ ವಾಪಸ್ ಬಂದಾಗ ಮನೆಯಲ್ಲಿ 11 ಲಕ್ಷ ಮೌಲ್ಯದ ಬೆಲೆಬಾಳುವ ಚಿನ್ನ ಬೆಳ್ಳಿ 20 ಸಾವಿರ ನಗದು ಕಳ್ಳತನವಾಗಿರುವ ಬಗ್ಗೆ ಅಕ್ಟೋಬರ್ 23 ರಂದು ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಹನೂರು ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕವಿತಾ ಡಿ. ಟಿ ರವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಚಾಮರಾಜನಗರ ವಿಭಾಗದ ಡಿವೈಎಸ್ಪಿ ಲಕ್ಷ್ಮಯ್ಯರವರ ನೇತೃತ್ವದಲ್ಲಿ ಪ್ರಭಾರ ಇನ್ಸ್ಪೆಕ್ಟರ್ ಶಿವಮಾದಯ್ಯ, ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಪೇದೆಗಳಾದ ತಕೀವುಲ್ಲಾ, ರವಿ, ಬಿಳಿ ಗೌಡ ವೆಂಕಟೇಶ್, ಕಿಶೋರ್, ಶಿವಕುಮಾರ್ , ಲಿಯಾಕತ್ ಆಲಿಖಾನ್, ಚಂದ್ರು ರಾಮಕೃಷ್ಣ ವಿಶ್ವನಾಥ್, ರವರುಗಳನ್ನು ಒಳಗೊಂಡ ಎರಡು ತಂಡ ತಮಿಳುನಾಡು ಕರ್ನಾಟಕ ಕೇರಳ ರಾಜ್ಯದ ವಿವಿಧ ಭಾಗಗಳಲ್ಲಿ ತೆರಳಿ ಅಗತ್ಯ ಮಾಹಿತಿ ಸಂಗ್ರಹಿಸಿ ಆರೋಪಿಗಳು ಮತ್ತೆ ಕಳ್ಳತನ ಮಾಡಲು ಹಾಗೂ ಕಳವು ಮಾಲುಗಳನ್ನು ಮಾರಾಟ ಮಾಡಲು ಮಲೆ ಮಹದೇಶ್ವರ ಬೆಟ್ಟ, ಕೊಳ್ಳೇಗಾಲಕ್ಕೆ ಬಂದಿದ್ದ ವೇಳೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ನಂತರ ವಿಚಾರಣೆಗೆ ಒಳಪಡಿಸಲಾಗಿ ಹನೂರು ದೊಡ್ಡಿಂದುವಾಡಿ, ಗುಂಡೇಗಾಲ ಕೊಳ್ಳೇಗಾಲ ಪಟ್ಟಣ ಚಾಮರಾಜನಗರ ಪಟ್ಟಣ ಗುಂಡ್ಲುಪೇಟೆ ಮತ್ತು ಬೇಗೂರು ಕಡೆಗಳಲ್ಲಿ 13 ಕಡೆ ಕಳ್ಳತನ ಮಾಡಿರುವುದು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.

ಬಂಧಿತರಿಂದ 41,69,000 ಬೆಲೆ ಬಾಳುವ 514.16 ಗ್ರಾಂ ಚಿನ್ನಾಭರಣಗಳು, ಮೂರು ಕೆಜಿ ಬೆಳ್ಳಿ ಆಭರಣಗಳು, 4,400 ನಗದು ಹಣ, ಕೃತಕ್ಕೆ ಬಳಸಿದ್ದ ಮಹೇಂದ್ರ ಕಾರು, ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದಲ್ಲದೆ ಕೋಲಾರ ಜಿಲ್ಲೆಯಲ್ಲಿ ಒಂದು ಕಡೆ ಕಳ್ಳತನ ಮಾಡಿರುವುದನ್ನು ತನಿಖೆಯ ವೇಳೆ ಬಾಯಿಬಿಟ್ಟಿದ್ದಾರೆ.ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಹಾಗೂ ಪ್ರಕರಣ ಪತ್ತೆಯಲ್ಲಿ ಸಹಕರಿಸಿದ ಜಿಲ್ಲಾ ಪೊಲೀಸ್ ಕಚೇರಿಯ ತಾಂತ್ರಿಕ ವಿಭಾಗದ ಬೆರಳಚ್ಚು ವಿಭಾಗ ಮತ್ತು ನಿಸ್ತಂತ್ ವಿಭಾಗದವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು