LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನಾಳೆಯಿಂದ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ!

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ (ಬಿಎಂಆರ್'ಸಿಎಲ್) ಸಿಹಿ ಸುದ್ದಿಯೊಂದನ್ನು ನೀಡಿದೆ.

ಪ್ರತಿದಿನ ಬೆಳಗ್ಗೆ 5 ಗಂಟೆಗೆ ಆರಂಭವಾಗುತ್ತಿದ್ದ ನಮ್ಮ ಮೆಟ್ರೋ ಸೇವೆ ಜ.13ರಿಂದ ಅಂದರೆ ಸೋಮವಾರದಿಂದ ಮುಂಜಾನೆ 4:15 ಕ್ಕೆ ಮೆಟ್ರೋ ಸೇವೆ ಆರಂಭಿಸಲಿದೆ.

ಜನಸಂದಣಿ ಆಧರಿಸಿ ಬಿಎಂಆರ್'ಸಿಎಲ್ ಪ್ರತಿ ಸೋಮವಾರದಂದು ಮೆಟ್ರೋ ಸಮಯದಲ್ಲಿ ಬದಲಾವಣೆ ಮಾಡಿದೆ.

ನಗರಕ್ಕ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ ಸಂಪರ್ಕನ್ನು ಒದಗಿಸುವ ಸಲುವಾಗಿ ನಮ್ಮೆ ಮೆಟ್ರೋ ನಿಗಮವು ಪ್ರತಿ ಸೋಮವಾರದಂದು ಮಾತ್ರ ಮೆಟ್ರೋ ಸೇವೆಯನ್ನು ಜ.13ರಿಂದ ಜಾರಿಗೆ ಬರುವಂತೆ ಈಗಿರುವ ಮುಂಜಾನೆ 5 ಗಂಟೆಗೆ ಬದಲಾಗಿ 4.15ರಿಂದ ಪ್ರಾರಭಿಸಲಿದೆ.

ಮತ್ತೆಲ್ಲಾ ದಿನಗಳಂದು ಮೆಟ್ರೋ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸಾರ್ವಜನಿಕರು ತಮ್ಮ ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕೆಂದು ಮನವಿ ಮಾಡಿದೆ.

ಈ ನಡುವೆ ಬಿಎಂಆರ್'ಸಿಎಲ್'ನ ಈ ನಿರ್ಧಾರವನ್ನು ಹಲವರು ಸ್ವಾಗತಿಸಿದ್ದು, ಭಾನುವಾರದಂದು ಕೂಡ ಇದೇ ರೀತಿಯ ಕ್ರಮವನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು