LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Hassan

ನಾಳೆಯಿಂದ ಹಾಸನಾಂಬೆ ದರ್ಶನ ಆರಂಭ

ಹಾಸನ: ಹಾಸನಾಂಬ ದೇಗುಲದ ಬಾಗಿಲನ್ನು ನಾಳೆ ತೆರೆಯಲಾಗುತ್ತದೆ. ನವೆಂಬರ್ 3ರವರೆಗು ಮಾತ್ರ ದೇಗುಲದ ಬಾಗಿಲು ತೆರೆದಿರುತ್ತದೆ. ವರ್ಷದಿಂದ ವರ್ಷಕ್ಕೆ ಹಲವು ಆಕರ್ಷಣೆಗಳೊಂದಿಗೆ ಗಮನ ಸೆಳೆಯುತ್ತಿರುವ ಹಾಸನಾಂಬೆ ಉತ್ಸವದಲ್ಲಿ ಈ ವರ್ಷ ದಸರಾ ಮಾದರಿಯ ದೀಪಾಲಂಕಾರ, ಇದೇ ಮೊದಲಬಾರಿಗೆ ಫಲಪುಷ್ಪ ಪ್ರದರ್ಶನ, ಹಾಟ್ ಏರ್ ಬಲೂನ್, ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಅಕ್ಟೋಬರ್ 24ರ ಗುರುವಾರ ಮದ್ಯಾಹ್ನ 12 ಗಂಟೆಗೆ ದೇಗುಲದ ಗರ್ಭಗುಡಿ ಬಾಗಿಲು ತೆರೆಯುತ್ತದೆ. ಕಳೆದ ಬಾರಿ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಭಕ್ತರು ಬರುವ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದ್ದು, ಇದಕ್ಕಾಗಿ ಭರ್ಜರಿ ತಯಾರಿ ನಡೆಸಿದೆ.
ದೇಗುಲವನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿದ್ದು ದೇಗುಲದ ಆವರಣದಲ್ಲಿ ಭಕ್ತರ ದರ್ಶನಕ್ಕಾಗಿ ಸರತಿ ಸಾಲುಗಳ ಬ್ಯಾರಿಕೇಡ್, ಸಾಂಪ್ರದಾಯಿಕ ಮಾದರಿಯ ಮಾಡೆಲ್‍ಗಳು, ಮಳೆ, ಬಿಸಿಲಿನಿಂದ ರಕ್ಷಣೆಗಾಗಿ ಜರ್ಮನ್ ಟೆಂಟ್ ಮತ್ತು ದೊನ್ನೆ ಪ್ರಸಾದ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ.

ವರ್ಷದಿಂದ ವರ್ಷಕ್ಕೆ ಹಲವು ವಿಶೇಷತೆಗಳನ್ನು ಒಳಗೊಂಡು ನಡೆಯುತ್ತಿರುವ ಹಾಸನಾಂಬೆ ದೇವಿ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾಮಹೋತ್ಸವದಲ್ಲಿ ಈ ಬಾರಿ ನಗರದಲ್ಲಿ ಮೈಸೂರು ದಸರಾ ಮಾದರಿಯ ಚಿತ್ತಾಕರ್ಷಕ ಲೈಟಿಂಗ್ ಮಾಡಲಾಗಿದೆ. ಲೈಟಿಂಗ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್ ಇರಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು