LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಾಳೆ ಅಂತ್ಯಕ್ರಿಯೆ ದೇಶದ ಆರ್ಥಿಕ ತಜ್ಞ ಮಾಜಿ ಪ್ರಧಾನಿಗೆ ಗಣ್ಯರ ನಮನ

ನವದೆಹಲಿ: ನಿನ್ನೆ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ನಾಳೆ ದೆಹಲಿ ರಾಜ್‍ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.

ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ನಿನ್ನೆ ರಾತ್ರಿಯೇ ಅವರ ನಿವಾಸಕ್ಕೆ ತರಲಾಗಿದೆ. ಇಂದು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿದೆ.ಏತನ್ಮಧ್ಯೆ, ಮನಮೋಹನ್ ಸಿಂಗ್ ನಿಧನದ ನಂತರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗಿದೆ. ಕೇಂದ್ರ ಸರ್ಕಾರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ ಮತ್ತು 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ನಾಳೆ ಬೆಳಿಗ್ಗೆ 8 ಗಂಟೆ ವೇಳೆಗೆ ಸಿಂಗ್ ಅವರ ಪಾರ್ಥೀವ ಶರೀರವನ್ನು ಎಐಸಿಸಿ ಕಚೇರಿಗೆ ತರಲಾಗುವುದು. ನಂತರ ಅಲ್ಲಿಯೂ ಪಕ್ಷದ ಮುಖಂಡರು ಕಾರ್ಯಕರ್ತರ ದರ್ಶನಕ್ಕೆ 10 ಗಂಟೆವರೆಗೂ ಅವಕಾಶ ಕಲ್ಪಿಸಲಾಗಿದೆ.ಎಐಸಿಸಿ ಕಚೇರಿಯಿಂದಲೇ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆ ಆರಂಭಗೊಳ್ಳಲಿದ್ದು, ರಾಜ್‍ಘಾಟ್ ಬಳಿ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ದೇಶದ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮನಮೋಹನ್ ಅವರ ಮಗಳು ವಿದೇಶದಿಂದ ಬರಬೇಕಿದ್ದು, ಇಂದು ರಾತ್ರಿ ಒಂದು ಘಂಟೆ ವೇಳೆಗೆ ದೇಹಲಿ ತಲುಪಲಿದ್ದಾರೆ. ಆ ನಂತರವೇ ಎಲ್ಲದರ ಬಗ್ಗೆಯೂ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.2004 ರಿಂದ 2014 ರವರೆಗೆ ಭಾರತದ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್, ಅನಾರೋಗ್ಯದಿಂದಾಗಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು. ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು