LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಾಳೆ ಪರಮೇಶ್ವರ್‍ರಿಂದ ಡಿನ್ನರ್

ಬೆಂಗಳೂರು: ಇತ್ತೀಚೆಗೆ ಸಚಿವ ಜಾರಕಿಹೊಳಿಯವರ ನಿವಾಸದಲ್ಲಿ ನಡೆದ ಕಾಂಗ್ರೆಸ್ ಸಚಿವ, ಶಾಸಕರ ಔತಣಕೂಟದ ಬೆನ್ನಲ್ಲೇ ಇದೀಗ ನಾಳೆ ಗೃಹಸಚಿವ ಡಾ.ಜಿ. ಪರಮೇಶ್ವರ್ ತಮ್ಮ ಸಮುದಾಯದ ಸಚಿವ, ಶಾಸಕ, ಮಾಜಿ ಶಾಸಕರಿಗೆ ಡಿನ್ನರ್ ಏರ್ಪಡಿಸಿದ್ದಾರೆ.

ಸತೀಶ್ ಜಾರಕಿಹೊಳಿ ಏರ್ಪಡಿಸಿದ್ದ ಔತಣಕೂಟ ಸಾಕಷ್ಟು ಚರ್ಚೆಗೆ ಗ್ರಾಸವಾದ ಬೆನ್ನಲ್ಲೆ ಇದೀಗ ಪರಮೇಶ್ವರ್ ಅವರ ಡಿನ್ನರ್ ಏರ್ಪಾಟು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ನಾಳೆ ನಾನು ಡಿನ್ನರ್ ಮಾತ್ರ ಕೊಡ್ತಿದ್ದೇನೆ, ಡಿನ್ನರ್ ಪಾರ್ಟಿ ಅಲ್ಲ ಎಂದು ಸ್ವತಃ ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.ಮುಂದೆ ನಾವು ಎಸ್‍ಸಿ, ಎಸ್ಟಿಸಮಾವೇಶ ಮಾಡಬೇಕು ಅನ್ಕೊಂಡಿದ್ದೀವಿ. ಅದಕ್ಕಾಗಿ ಎಲ್ಲಾ ಎಸ್ಸಿ-ಎಸ್ಟಿ ಸಮುದಾಯದ ಸಚಿವರು, ಶಾಸಕರನ್ನ ಕರೆದಿದ್ದೇವೆ ಪಕ್ಷದ ವ್ಯಾಪ್ತಿಯಲ್ಲಿಯೇ ಅನುಮತಿ ಪಡೆದು ಸಭೆ ನಡೆಸ್ತೇವೆ.

ನಾಳೆ ಸಂಜೆ ಏಳು ಗಂಟೆಗೆ ಕರೆದಿದ್ದೇವೆ.ಎಸ್ಸಿ, ಎಸ್ಟಿ ಬಿಟ್ಟು ಬೇರೆಯವರಿಗೆ ಆಹ್ವಾನ ಇಲ್ಲ, ಬರಬಾರದು ಅಂತ ಇಲ್ಲ. ಈ ಹಿಂದೆ ಚಿತ್ರದುರ್ಗದಲ್ಲಿ ಎಸ್ಸಿ ಎಸ್ಟಿ ಸಮಾವೇಶ ಆಯ್ತು, ಆ ಸಮಾವೇಶದಲ್ಲಿ ಕೆಲವು ರೆಸೊಲ್ಯುಷನ್ಸ್ ತಗೊಂಡಿದ್ವಿ, ಅದರ ಬಗ್ಗೆಯೂ ನಾಳೆ ಚರ್ಚೆ ಮಾಡ್ತೇವೆ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು