LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ನಾಳೆ ಹುಬ್ಬಳ್ಳಿ-ಧಾರವಾಡ ಬಂದ್: ಪೊಲೀಸ್ ಅಲರ್ಟ್

ಹುಬ್ಬಳ್ಳಿ: ಕೇಂದ್ರ ಸಚಿವ ಅಮಿತ್ ಶಾ ಅಂಬೇಡ್ಕರ್ ವಿರುದ್ಧ ಆಡಿರು ಮಾತಿಗೆ ಕರ್ನಾಟಕದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಇದು ದಿನದಿಂದ ದಿನಕ್ಕೆ ರಾಜಕೀಯ ತಿರುವು ಕೂಡ ಪಡೆದುಕೊಳ್ಳುತ್ತಿವೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್​ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ. ಇನ್ನೂ ನಾಳೆ ಹುಬ್ಬಳ್ಳಿ-ಧಾರವಾಡ ಬಂದ್​ಗೆ ದಲಿತ ಸಂಘಟನೆಗಳು ಕರೆ ನೀಡಲಾಗಿದ್ದು, ಅವಳಿ ನಗರದ ಪೊಲೀಸರು ಫುಲ್​​  ಅಲರ್ಟ್ ಆಗಿದ್ದಾರೆ.

ಹೀಗಾಗಿ ಗುಲಾಬಿ ಹೂ ಕೊಟ್ಟು ಬಂದ್‌ಗೆ ಸಹಕರಿಸುವಂತೆ ಹುಬ್ಬಳ್ಳಿಯ ಜನತಾ ಬಜಾರ್ ಮಾರುಕಟ್ಟೆಯಲ್ಲಿ ಸಂಘಟನೆಗಳಿಂದ ಮನವಿ ಮಾಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು, ಕಿರಾಣಿ ಅಂಗಡಿಗಳ ಮಾಲೀಕರಿಗೂ ಮನವಿ ಮಾಡಲಾಗಿದೆ.

ನಾಳೆಯ ಬಂದ್‌ಗೆ ಹೋಟೆಲ್ ಮಾಲೀಕರ ಸಂಘ ಬೆಂಬಲ ನೀಡಿಲ್ಲ. ಈ ಬಗ್ಗೆ ಹೋಟೆಲ್‌ ಮಾಲೀಕರ ಸಂಘದಿಂದ ಯಾವುದೇ ನಿರ್ಧಾರ ಮಾಡಿಲ್ಲ. ಟಿವಿ9ಗೆ ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಸುಕುಮಾರ್ ಶೆಟ್ಟಿ ಪ್ರತಿಕ್ರಿಯಿಸಿದ್ದು, ಹೋಟೆಲ್‌ ಮುಚ್ಚುವ ಬಗ್ಗೆ ಆಯಾ ಮಾಲೀಕರ ನಿರ್ಧಾರಕ್ಕೆ ಬಿಟ್ಟಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ನಾಳೆ ದಲಿತ ಪರ ಸಂಘಟನೆಗಳ ಹುಬ್ಬಳ್ಳಿ-ಧಾರವಾಡ ಬಂದ್​​ ಕರೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಹೀಗಾಗಿ ಇದು ಸದ್ಯ ರಾಜಕೀಯ ತಿರುವುಪಡೆದುಕೊಂಡ ಹಿನ್ನೆಲೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಲರ್ಟ್ ಆಗಿದ್ದಾರೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪೊಲೀಸರಿಂದ ರೋಲ್​ಕಾಲ್ ಮಾಡಲಾಗಿದೆ.

ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಂಘಟನಾಕಾರರು ಎಚ್ಚರ ವಹಿಸಬೇಕು. ಬಂದ್ ಎನ್ನುವುದು ಇಲ್ಲ. ‌ಬಲವಂತವಾಗಿ ಬಂದ್ ಮಾಡಿಸುವ ಹಾಗಿಲ್ಲ. ಸಂಘಟನಾಕಾರರು ಶಾಂತಿಯುತವಾಗಿ ತಮ್ಮ ಹೋರಾಟ ನಡೆಸಬಹುದು. ಬಲವಂತವಾಗಿ ಬಂದ್ ಮಾಡಿಸಿದರೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. 1500 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಮ್ಮ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಒಂದು ಕಡ ನಾಳೆ ಬಂದ್​ ಮಾಡಲಾಗುತ್ತಿದ್ದು, ಮತ್ತೊಂದು ಕಡೆ ಸಂವಿಧಾನ ಬದಲಿಸಿದ್ದು ಯಾರೂ ಪುಸ್ತಕ ಬಿಡುಗಡೆ ಕುರಿತಾಗಿ ಹುಬ್ಬಳ್ಳಿಯ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಪೂರ್ವ ಭಾವಿ ಸಭೆ ಮಾಡಲಾಗಿದೆ. ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಸಭೆ ಮಾಡಲಾಗಿದ್ದು, ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಇದೇ 13 ರಂದು ಸಂವಿಧಾನ ಬದಲಿಸಿದ್ದು ಯಾರೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಛಲವಾದಿ ನಾರಾಯಣ ಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು