LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನಾಳೆ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ರಾಜ್ಯಮಟ್ಟದ ನಾಟಿ ಕೋಳಿ ಸಾರು, ರಾಗಿ ಮುದ್ದೆ ಉಣ್ಣುವ ಸ್ಪರ್ಧೆ

ಬೊಮ್ಮನಹಳ್ಳಿ: ನಗರದ ಹೆಚ್‌ಎಸ್‌ಆರ್ ಬಡಾವಣೆಯ ಪರಂಗಿಪಾಳ್ಯ ಹತ್ತಿರ ನವೆಂಬರ್ ೧೦ ರ ಭಾನುವಾರದಂದು ಮದ್ಯಾಹ್ನ ೧೨ ರಿಂದ ೧೨:೪೫ ರವರೆಗೆ ಕರ್ನಾಟಕ ಸುವರ್ಣ ಸಂಭ್ರಮ ೫೦ರ ಪ್ರಯುಕ್ತವಾಗಿ ಇದೇ ಮೊದಲ ಬಾರಿಗೆ ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ರಾಜ್ಯಮಟ್ಟದ ನಾಟಿ ಕೋಳಿ ಸಾರು ಮತ್ತು ರಾಗಿ ಮುದ್ದೆ ಉಣ್ಣುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ ಎಂದು ಆಯೋಜಕರಾದ ಅನಿಲ್ ರೆಡ್ಡಿ ರವರು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೇ ಪ್ರಥಮ ಬಾರಿಗೆ ಕರ್ನಾಟಕ ಸುವರ್ಣ ಸಂಭ್ರಮ ೫೦ರ ಪ್ರಯುಕ್ತವಾಗಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಪುರುಷರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ ಟಗರು, ದ್ವಿತೀಯ ಬಹುಮಾನವಾಗಿ ಕುರಿ ಪಟ್ಲಿ, ಮೂರನೇ ಬಹುಮಾನವಾಗಿ ಎರಡು ನಾಟಿ ಕೋಳಿ ವಿತರಣೆ ಹಾಗೂ ಮಹಿಳೆಯರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ ೩೨ ಇಂಚಿನ ಟಿವಿ, ದ್ವಿತೀಯ ಬಹುಮಾನವಾಗಿ ಮಿಕ್ಸರ್ ಗ್ರೈಂಡರ್‌ , ತೃತೀಯ ಬಹುಮಾನವಾಗಿ ಕಿಚನ್ ಸೆಟ್ ನೀಡಲಾಗುವುದು.
ಪ್ರವೇಶ ಸಂಪೂರ್ಣವಾಗಿ ಉಚಿತವಾಗಿದ್ದು ಮೊದಲು ಹೆಸರು ನೋಂದಾವಣೆ ಮಾಡುವ ೧೨೫ ಜನರಿಗೆ ಆದ್ಯತೆ ನೀಡಲಾಗುತ್ತದೆ. ೪೫ ನಿಮಿಷಗಳ ಕಾಲ ಮಿತಿಯನ್ನು ನೀಡಲಿದ್ದು ಮಧ್ಯಪಾನ ಮಾಡಿದವರಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅನುಮತಿ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ೯೯೧೬೫೦೬೮೩೭ಗೆ ಸಂಪರ್ಕಿಸಬಹುದಾಗಿದೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಉದ್ಘಾಟನೆ ಮಾಡಲಿದ್ದು, ಸಚಿವರಾದ ರಾಮಲಿಂಗಾರೆಡ್ಡಿ ಬಹುಮಾನ ವಿತರಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಚಿತ್ರ ನಿರ್ಮಾಪಕ ಉಮಾಪತಿಗೌಡ,ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ್‌ಗೌಡ, ಭಾರತೀಯ ಸೇವಾ ಸಮಿತಿ ರಾಷ್ಟಿçÃಯ ಅಧ್ಯಕ್ಷ ಡಾ.ಹೆಚ್.ಎಂ.ರಾಮಚಂದ್ರ, ಚಿತ್ರ ನಿರ್ಮಾಪಕ ಕೆ.ಮಂಜು ಆಗಮಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟಿ.ವಾಸುದೇವರೆಡ್ಡಿಯವರು ವಹಿಸಿಕೊಳ್ಳಲಿದ್ದಾರೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು