LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಿಜ್ಜರ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು

ನವದೆಹಲಿ: ಖಲಿಸ್ತಾನ್ ಪರ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಕೆನಡಾ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 11ರಂದು ನಡೆಯಲಿದೆ. ವಿಚಾರಣೆಗೆ ತಡೆಯಾಜ್ಞೆ ನೀಡಿ ನಾಲ್ವರು ಆರೋಪಿಗಳಿಗೂ ಜಾಮೀನು ನೀಡಲಾಗಿದೆ.

ಈ ನಾಲ್ವರು ಭಾರತೀಯರನ್ನು ಕರಣ್ ಬ್ರಾರ್, ಅಮನ್‌ದೀಪ್ ಸಿಂಗ್, ಕಮಲ್‌ಪ್ರೀತ್ ಸಿಂಗ್ ಮತ್ತು ಕರಣ್‌ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ 2024ರ ನವೆಂಬರ್ ನಲ್ಲಿ ಆರೋಪಪಟ್ಟಿ ಸಲ್ಲಿಸಲಾಯಿತು. ಹತ್ಯೆ ಆರೋಪ ಹೊತ್ತಿದ್ದವರು ಕೆನಡಾದ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಿದ್ದರು.

ಹರ್ದೀಪ್ ಸಿಂಗ್ ನಿಜ್ಜರ್ ನನ್ನು 2023ರ ಜೂನ್ ನಲ್ಲಿ ಕೆನಡಾದ ಸರ್ರೆಯಲ್ಲಿ ಕೊಲೆ ಮಾಡಲಾಗಿತು. ಕೊಲೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿತು. ಈ ಕೊಲೆಗೆ ಸಂಬಂಧಿಸಿದಂತೆ, ಆಗಿನ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಭಾರತ ಸರ್ಕಾರದ ಏಜೆಂಟರ ಮೇಲೆ ಆರೋಪ ಹೊರಿಸಿದ್ದರು. ಭಾರತ ಸರ್ಕಾರ ಈ ಆರೋಪವನ್ನು ಆಧಾರರಹಿತ ಎಂದು ಕರೆದಿತ್ತು. ಟ್ರುಡೊ ಅವರ ಈ ಹೇಳಿಕೆಯ ನಂತರ, ಕೆನಡಾ ಮತ್ತು ಭಾರತದ ನಡುವಿನ ಸಂಬಂಧಗಳು ಸಾಕಷ್ಟು ಹದಗೆಟ್ಟಿತ್ತು.

ಪರಿಸ್ಥಿತಿ ಜಟಿಲವಾಗುತ್ತಿದ್ದಂತೆ ಜಸ್ಟಿನ್ ಟ್ರುಡೋ ವಿರುದ್ಧ ಪಕ್ಷದಲ್ಲೇ ಅಸಮಾಧಾನ ಭುಗಿಲೆದ್ದಿತ್ತು. ಹೀಗಾಗಿ ಮೊನ್ನೆಯಷ್ಟೇ ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು