LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನಿರಂಜನ್ ಅಭಿನಯ `31 DAYS' ಹಾಡು ಬಿಡುಗಡೆ ಇದು ಜನಪ್ರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಅವರ ಸಂಗೀತ ಸಂಯೋಜನೆಯ 150ನೇ ಚಿತ್ರ

"ಜಾಲಿಡೇಸ್" ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ `31 DAYS' ಚಿತ್ರಕ್ಕಾಗಿ ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿ, ನಿರಂಜನ್ ಶೆಟ್ಟಿ ಅವರೊಂದಿಗೆ ನಟಿಸಿರುವ ಒಪೇರ ಶೈಲಿಯ ಗೀತೆ ಡಿಸೆಂಬರ್ 31 ನೇ ತಾರೀಖು ಬಿಡುಗಡೆಯಾಯಿತು. ಇದು ವಿ.ಮನೋಹರ್ ಅವರು ಸಂಗೀತ ಸಂಯೋಜಿಸಿರುವ 150ನೇ ಚಿತ್ರ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮೊದಲು ಮಾತನಾಡಿದ ಸಂಗೀತ ನಿರ್ದೇಶಕ ವಿ.ಮನೋಹರ್, ಇಂದು ಬಿಡುಗಡೆಯಾಗಿರುವ ಒಪೇರ(ಕಥನಾ ಗೀತೆ) ಶೈಲಿಯ ಹಾಡು ಕನ್ನಡದಲ್ಲಿ ಇದೇ ಮೊದಲು ಎನ್ನುವುದು ನನ್ನ ಅಭಿಪ್ರಾಯ. ನಿರಂಜನ್ ಅವರ ಒತ್ತಾಯಕ್ಕೆ ಮಣಿದು ಈ ಹಾಡಿನಲ್ಲಿ ಅಭಿನಯ ಕೂಡ ಮಾಡಿದ್ದೇನೆ. ಒಟ್ಟಾರೆ ಈ ಚಿತ್ರದಲ್ಲಿ ಹತ್ತು ಹಾಡುಗಳಿದೆ. ಎಂ.ಡಿ.ಪಲ್ಲವಿ, ರವೀಂದ್ರ ಸೊರಗಾವಿ ಸೇರಿದಂತೆ ನಾಡಿನ ಅನೇಕ ಜನಪ್ರಿಯ ಗಾಯಕರು ಹಾಡುಗಳನ್ನು ಹಾಡಿದ್ದಾರೆ ಎಂದರು.

"ಜಾಲಿಡೇಸ್" ನಿಂದ ಶುರುವಾದ ನನ್ನ ಸಿನಿಜರ್ನಿಗೆ ಈಗ ಹದಿನೈದು ವರ್ಷಗಳಾಗಿದೆ. ಈಗ NSTARಎಂಬ ಸಂಸ್ಥೆ ಮೂಲಕ ನಾವೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ. ನನ್ನ ಪತ್ನಿ ನಾಗವೇಣಿ ಇದರ ನಿರ್ಮಾಪಕರು. ಇದೊಂದು 31 ದಿನಗಳಲ್ಲಿ ನಡೆಯುವ ಈಗಿನ ಕಾಲಘಟ್ಟದ ಪ್ರೇಮಕಥೆ. ಹಾಗಾಗಿ `31 DAYS' ಎಂದು ಹೆಸರಿಟ್ಟಿದ್ದೇವೆ. ಮಧ್ಯಂತರಕ್ಕೂ ಮುನ್ನ ಹದಿನೈದು ದಿನಗಳು ಹಾಗೂ ನಂತರ ಹದಿನೈದು ದಿನಗಳ ಕಥೆ ಸಾಗುತ್ತದೆ.

ಕೊನೆಯ ದಿನವನ್ನು ಕ್ಲೈಮ್ಯಾಕ್ಸ್ ಗೆ ಮೀಸಲಿಡಲಾಗಿದೆ. ಯಾರು ಊಹಿಸದ ಕ್ಲೈಮ್ಯಾಕ್ಸ್ ಚಿತ್ರದಲ್ಲಿದೆ. ಇನ್ನೂ ಇಂದು ಬಿಡುಗಡೆಯಾಗಿರುವ ಹಾಡಿನ ಬಗ್ಗೆ ಹೇಳುವುದಾದರೆ, ಎರಡೂವರೆ ನಿಮಿಷಗಳ ಈ ಹಾಡನ್ನು ಚಿತ್ರದಲ್ಲಿ ಒಂದು ನಿಮಿಷ ಬಳಸಿಕೊಳ್ಳಲಾಗಿದೆ. ನನ್ನ ಗುರುಗಳು ಹಾಗೂ ಅನ್ನದಾತರಾದ ವಿ.ಮನೋಹರ್ ಅವರು ಸಂಗೀತ ಸಂಯೋಜನೆಯ 150 ನೇ ಚಿತ್ರ ನನಗೆ ದೊರಕಿದ್ದು ನನ್ನ ಪುಣ್ಯ. ಸೆನ್ಸಾರ್ ಅಂಗಳದಲ್ಲಿರುವ ಈ ಚಿತ್ರವನ್ನು ಫೆಬ್ರವರಿ ಯಲ್ಲಿ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು ನಾಯಕ ನಿರಂಜನ್ ಶೆಟ್ಟಿ.
ಮೊದಲ ನಿರ್ಮಾಣದ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹ ಬೇಕು ಎಂದು ನಿರ್ಮಾಪಕಿ ನಾಗವೇಣಿ ಎನ್ ಶೆಟ್ಟಿ ಮನವಿ ಮಾಡಿದರು.

ಸಾಕಷ್ಟು ಚಿತ್ರಗಳಿಗೆ ಸಹ ನಿರ್ದೇಶಕನಾಗಿದ್ದ ನನ್ನನ್ನು ನಿರಂಜನ್ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮಾಡಿದ್ದಾರೆ.ವಿ.ಮನೋಹರ್ ಸಂಗೀತ ನಿರ್ದೇಶನದ 150 ನೇ ಚಿತ್ರ, ನನ್ನ ಮೊದಲ ನಿರ್ದೇಶನದ ಚಿತ್ರವಾಗಿರುವಿದು ಖುಷಿಯಾಗಿದೆ. ಇದೊಂದು ಹೈ ವೋಲ್ಟೇಜ್ ಲವ್ ಸ್ಟೋರಿಯಾಗಿದೆ ಎಂದರು ನಿರ್ದೇಶಕ ರಾಜ ರವಿಕುಮಾರ್.ಚಿತ್ರದ ನಾಯಕಿ ಪ್ರಜ್ವಲಿ ಸುವರ್ಣ, ಕಲಾವಿದರಾದ ಅನೇಕಲ್ ಮುನಿಯಪ್ಪ, ಗೋವಿಂದಸ್ವಾಮಿ, ವೇದ್ಯಾಸ್ ಸಂಸ್ಥೆಯ ರವಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸುರೇಶ್ ಚಿಕ್ಕಣ್ಣ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.ವಿನುತ್. ಛಾಯಾಗ್ರಹಣ, ತ್ರಿಭುವನ್, ಧನು ಕುಮಾರ್ ರವರ ನೃತ್ಯ ನಿರ್ದೇಶನ ಹಾಗೂ ರವಿತೇಜ್ ಸಿ. ಎಚ್. ,ನಿತೀಶ್ ಪೂಜಾರಿ, ಸನತ್ ರವರ ಸಂಕಲನ ಲಕ್ಕಿ ನಾಗೇಶ್ ರವರ ನಿರ್ವಹಣೆ ಸುಧೀಂದ್ರ ವೆಂಕಟೇಶ್ ರವರ ಪ್ರಚಾರ ಸೋಹಿಲ್ ವಿನ್ಯಾಸ ಇರುವ ಈ ಚಿತ್ರಕ್ಕೆ ಹೈ ವೋಲ್ಟೇಜ್ ಲವ್ ಸ್ಟೋರಿ ಎಂಬ ಅಡಿಬರಹವಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು