LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನಿರ್ವಾಹಕನ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಉಗ್ರ ಕ್ರಮಕ್ಕೆ ಕರವೇ ಆಗ್ರಹ

ಬೆಂಗಳೂರು: ಕನ್ನಡದಲ್ಲಿ ಮಾತನಾಡಿದ್ದಕ್ಕೆ, ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹದೇವ ಎಂಬ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿ ಪೊಲೀಸರು ಮಹದೇವ ಅವರ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬನನ್ನೂ ಬಂಧಿಸಿ ಜೈಲಿಗೆ ಕಳುಹಿಸಬೇಕು. ಇಲ್ಲವಾದಲ್ಲಿ ಇದರ ಪರಿಣಾಮ ಭೀಕರವಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಸಿದ್ದಾರೆ.

ಕನ್ನಡಿಗರು ಸೌಹಾರ್ದಪ್ರಿಯರು, ಶಾಂತಿಪ್ರಿಯರು. ಹಾಗಂದ ಮಾತ್ರಕ್ಕೆ ನಮ್ಮ ಮೇಲೆ ವಿನಾಕಾರಣ ಹಲ್ಲೆ ನಡೆಸುವ ಭಾಷಾಂಧರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಕಿತ್ತುಕೊಳ್ಳಲು ನಡೆಸಿದ ಪ್ರಯತ್ನಗಳೆಲ್ಲ ವಿಫಲವಾದ ಮೇಲೆ ಹತಾಶರಾಗಿರುವ ಭಾಷಾಂಧ ಮರಾಠಿಪುಂಡರು ಈಗ ಕನ್ನಡಿಗರ ಮೇಲೆ ಕೈಮಾಡುವ ನೀಚ ಕೃತ್ಯಕ್ಕೆ ಇಳಿದಿದ್ದಾರೆ. ಪೊಲೀಸರು ಇವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಕನ್ನಡಿಗರ ಸಿಟ್ಟು ರಟ್ಟೆಗೆ ಬರುತ್ತದೆ. ಅಂಥ ಸಂಘರ್ಷಕ್ಕೆ ಎಡೆ ಮಾಡಿಕೊಡದೇ ಪುಂಡರನ್ನು ಮೊದಲು ಬಂಧಿಸಲಿ'' ಎಂದು ಆಗ್ರಹಿಸಿದ್ದಾರೆ.
``ಹಲ್ಲೆಗೊಳಗಾದ ಮಹದೇವ ಅವರು ಬೇಗ ಗುಣಮುಖರಾಗಲಿ, ಅವರೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಇರುತ್ತದೆ.

ಈಗಾಗಲೇ ನಮ್ಕ ಕರವೇ ಬೆಳಗಾವಿ ಜಿಲ್ಲಾಧ್ಯಕ್ಷರಾದ ದೀಪಕ್ ಗುಡಗನಟ್ಟಿ ಸೇರಿದಂತೆ ನಮ್ಮ ಪದಾಧಿಕಾರಿಗಳು ಮಹದೇವ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ, ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕೆಎಸ್ ಆರ್ ಟಿಸಿ ಚಾಲಕರು, ನಿರ್ವಾಹಕರು ಈ ಘಟನೆಯಿಂದ ಧೃತಿಗೆಡುವ ಅವಶ್ಯಕತೆ ಇಲ್ಲ. ಇಂಥ ಹೇಡಿಗಳಿಗೆ ಬೆದರುವ ಅಗತ್ಯವೂ ಇಲ್ಲ'' ಎಂದಿದ್ದಾರೆ.
``ಕರ್ನಾಟಕದ ನೆಲದಲ್ಲಿ ಬದುಕುವವರು ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು. ಅದನ್ನು ಹೊರತುಪಡಿಸಿ ತಮ್ಮ ಭಾಷೆ ಕಲಿಯಿರಿ ಎಂದು ತಾಕೀತು ಮಾಡಿ ದೌರ್ಜನ್ಯ ನಡೆಸಲು ಹೊರಟರೆ ಅಂಥವರಿಗೆ ಕರ್ನಾಟಕ ರಕ್ಷಣಾ ವೇದಿಕೆ ತಕ್ಕ ಪಾಠ ಕಲಿಸಲಿದೆ. ಇದು ನನ್ನ ನೇರವಾದ ಎಚ್ಚರಿಕೆ'' ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು