LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ನೀರಿನಲ್ಲೇ ಗ್ರಾಮಸ್ಥರಿಂದ ಶವ ಸಾಗಾಟ: ಸೇತುವೆ ನಿರ್ಮಾಣಕ್ಕೆ ಹಣ ನೀಡಿದ ಜಿಲ್ಲಾಧಿಕಾರಿ!

ಕಡಲೂರು: 92 ವರ್ಷದ ಮೃತ ವ್ಯಕ್ತಿಯ ಅಂತ್ಯಸಂಸ್ಕಾರಕ್ಕಾಗಿ ತಮಿಳುನಾಡು ಗ್ರಾಮಸ್ಥರು ಕುತ್ತಿಗೆ ವರೆಗೆ ನೀರು ಹರಿಯುತ್ತಿರುವ ಕಾಲುವೆ ದಾಟುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಿಲ್ಲಾಧಿಕಾರಿ ಕಾಲುವೆ ಮೇಲೆ ಸೇತುವೆ ನಿರ್ಮಾಣಕ್ಕೆ ಹಣಕಾಸಿನ ನೆರವಿಗೆ ಮುಂದಾಗಿದ್ದಾರೆ.

ತಮಿಳುನಾಡಿನ ಕಡಲೂರು ಜಿಲ್ಲೆಯ ಕಟ್ಟುಮನ್‌ನಾರ್‌ಕೋಯಿಲ್‌ ಬಳಿಯ ವೀರಸೋಜಪುರಂ ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿ ಗ್ರಾಮದಿಂದ ಆಚೆ ಇರುವ ಕಾಲುವೆ ಬಳಿಕ ಸ್ಮಶಾನವಿದೆ.

ಹೀಗಾಗಿ ಗ್ರಾಮದಲ್ಲಿ ಯಾರೇ ಮರಣಹೊಂದಿದರೂ ಅವರ ದೇಹವನ್ನು ಈ ಕಾಲುವೆ ದಾಟಿಯೇ ಸ್ಮಶಾನಕ್ಕೆ ಸಾಗಿಸಬೇಕಾದ ಪರಿಸ್ಥಿತಿ ಇದೆ. ಇದೇ ರೀತಿ 92 ವರ್ಷದ ವೃದ್ಧರ ಮೃತದೇಹವನ್ನು ತುಂಬಿ ಹರಿಯುತ್ತಿರುವ ಕಾಲುವೆಯಲ್ಲಿಯೇ ಗ್ರಾಮಸ್ಥರು ಸಾಗಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದರು. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿತ್ತು.

ಈ ಗ್ರಾಮದಲ್ಲಿ 100ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. 'ಉತ್ತರ ರಾಜನ್‌ ನಾಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದರೆ, ಈಜು ಬಲ್ಲವರು ಮಾತ್ರ ಮೃತದೇಹಗಳನ್ನು ಕೊಳ್ಳಿಡಾಂ ನದಿ ಪಾತ್ರದ ಸಮಾಧಿ ಸ್ಥಳಕ್ಕೆ ಕೊಂಡೊಯ್ಯಬಹುದು, ಇಲ್ಲಿ ಸೇತುವೆ ನಿರ್ಮಿಸುವಂತೆ ಹಲವು ವರ್ಷಗಳಿಂದ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದೇವೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕಡಲೂರು ಜಿಲ್ಲಾಧಿಕಾರಿ ಸಿಬಿ ಆದಿತ್ಯ ಸೆಂಥಿಲ್ ಕುಮಾರ್ ಅವರು ರಾಜನ್ ಕಾಲುವೆಗೆ ಪಾದಚಾರಿ ಸೇತುವೆ ನಿರ್ಮಿಸಲು 20 ಲಕ್ಷ ರೂ ಆರ್ಥಿಕ ನೆರವು ನೀಡಿದ್ದು, ಪ್ರಸ್ತುತ ಮುಂಗಾರು ಮಳೆಯಿಂದಾಗಿ ತಕ್ಷಣದ ಪರಿಹಾರವಾಗಿ ಈ ಪ್ರದೇಶದಲ್ಲಿ ತಾತ್ಕಾಲಿಕ ಸೇತುವೆಯನ್ನು ಶೀಘ್ರದಲ್ಲಿ ಅಳವಡಿಸಲಾಗುವುದು ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು