LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. ಚಾಮರಾಜಪೇಟೆಯ ನಂದಿನಿ (32) ಆತ್ಮಹತ್ಯೆ ಮಾಡಿಕೊಂಡವರು, ಮಹಿಳೆಯು ಫೆ.23ರ ರಾತ್ರಿ 9:30ರ ವೇಳೆ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು ಮೃತದೇಹ ಕೆಳಗೆ ಇಳಿಸಿದ್ದಾರೆ.

ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಂದಿನಿ, 8 ವರ್ಷಗಳ ಹಿಂದೆ ಸೂರ್ಯ ಎಂಬುವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಗು ಇದೆ. ನಂದಿನಿಗೆ ವ್ಯಕ್ತಿಯೊಬ್ಬ ಆಗಾಗ್ಗೆ ಫೋನ್ ಮಾಡಿ ಕಿರಿಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

ಇದರಿಂದಾಗಿ ಪತಿ-ಪತ್ನಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ವ್ಯಕ್ತಿಯ ನಿರಂತರ ಕಿರುಕುಳದಿಂದ ಮನ ನೊಂದಿದ್ದ ನಂದಿನಿ ಆತ್ಮಹತ್ಯೆ ಮಾಡಿಕೊಂದಿದ್ದಾರೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST