LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನೇತಾಜಿ ಅಪ್ರತಿಮ ದೇಶಭಕ್ತ: ಸಿಎಂ

ಬೆಂಗಳೂರು: ಭಾರತವನ್ನು ಬ್ರಿಟೀಷರ ಆಳ್ವಿಕೆ ಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನ. ದೇಶದ ಬಗ್ಗೆ ಅಪಾರ ಗೌರವಾಭಿಮಾನ ಹೊಂದಿದ್ದ ಮಹಾನ್ ದೇಶಭಕ್ತ. ಈಗಿನ ಐಎಎಸ್ ನಂತೆ ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ತಮ್ಮ ಉಜ್ವಲ ಭವಿಷ್ಯವನ್ನು ತ್ಯಾಗ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಮೀಸಲಾಗಿಟ್ಟರು. ಎರಡು ಬಾರಿ ಕಾಂಗ್ರೆಸ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮಹಾತ್ಮಾ ಗಾಂಧಿಯವರು ಪ್ರತಿಪಾದಿಸುತ್ತಿದ್ದ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ನಡೆದು ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟಸಾಧ್ಯ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು.

ಆದ್ದರಿಂದ ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್‍ಎ (ಇಂಡಿಯನ್ ನ್ಯಾಷನಲ್ ಆರ್ಮಿ)ಯನ್ನು ಸ್ಥಾಪಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ರ ಜನ್ಮದಿಂದು ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ. ಈ ದಿಸೆಯಲ್ಲಿ ಸರ್ಕಾರ ಈ ಮಹಾನ್ ನಾಯಕನಿಗೆ ಗೌರವ ಸಲ್ಲಿಸಿದೆ ಎಂದರು.

ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಕೊಳ್ಳ ಬೇಕಾಗಿರುವುದರಿಂದ 2025 ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.ಕಾರ್ಪೊರೇಶನ್ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಯರವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು