LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪಂಚಮಸಾಲಿಗರಿಗೆ ಬಿಜೆಪಿಯಿಂದ ಟೋಪಿ: ಸಿಎಂ

ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ, ಆದರೆ ಬಿಜೆಪಿಯವರು ಪಂಚಮಸಾಲಿಗರಿಗೆ ಟೋಪಿ ಹಾಕಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಪ್ರತಿಭಟನೆಗೆ ಲಿಂಗಾಯತ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ವಿಚಾರವಾಗಿ, ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ. ಬಿಜೆಪಿಯವರು ಪಂಚಮಸಾಲಿಗರಿಗೆ ಟೋಪಿ ಹಾಕಿ ಹೋಗಿದೆ. ಇವರು 2ಎ ಕೇಳಿದ್ದರೆ, ಅವರು 2ಡಿ ಮಾಡಿದ್ದಾರೆ ಎಂದರು.

ಸಂವಿಧಾನ ಪರವಾಗಿ ಹೋರಾಟ ಇರಬೇಕು. ಹೈಕೋರ್ಟ್‍ಗೆ ಅಪಡೇಟ್ ಹಾಕಿದವರು ಯಾರು? ಇದೆಲ್ಲ ಮಾಡಿದ್ದು ಬಿಜೆಪಿ ಸರ್ಕಾರದವರು. ಇದೇ ಸ್ವಾಮೀಜಿಗಳು ಇದ್ದರಲ್ಲ, ರಸೂಲ್ ಎಂಬಾತ ಸುಪ್ರೀಂ ಕೋರ್ಟ್‍ಗೆ ಹೋದರು. ಆಗಿನ ಅಡ್ವಕೇಟ್ ಜನರಲ್ ಇದರಲ್ಲಿ ಬದಲಾವಣೆ ಮಾಡಲ್ಲ ಎಂದಿದ್ದರು.
ಟ್ರ್ಯಾಕ್ಟರ್ ತೆಗೆದುಕೊಂಡು ಹೋರಾಟ ಮಾಡುತ್ತೀವಿ ಎಂದರು. ಆಗ ಕೋರ್ಟ್ ಶಾಂತಿಯುತವಾಗಿ ಮಾಡುವುದಕ್ಕೆ ಹೇಳಿತ್ತು. ಆದರೂ ಕಾನೂನು ಕೈಗೆ ತೆಗೆದುಕೊಂಡರು. ನಾನು ಮೂರು ಜನ ಮಂತ್ರಿಗಳನ್ನು ಕಳಿಸಿದ್ದೆ.

ಮಂತ್ರಿಗಳು ಕರೆದಾಗ ಅವರು ಸಿಎಂಗೆ ಮಾತಾಡಿಸುತ್ತೇವೆ ಎಂದರು. ಆದರೆ ನಾನು ಎಲ್ಲ ಕಡೆಗೂ ಹೋಗುವುದಕ್ಕೆ ಆಗುವುದಿಲ್ಲ. ಆದರೂ ನಾನು ಅವರನ್ನು ಮಾತನಾಡಿಸಲು ಕರೆದರೂ ಅವರು ಬರಲಿಲ್ಲ. ಆಗ ಸುವರ್ಣಸೌಧಕ್ಕೆ ನುಗ್ಗಲು ಯತ್ನ ಮಾಡಿದರು. ಕಲ್ಲು ತೂರಾಟ ಮಾಡಿದರು, ಪೊಲೀಸರು ಗಾಯಗೊಂಡಿದ್ದಾರೆ. ನಮ್ಮ ಬಳಿ ಪುರಾವೆ ಇವೆ, ಪೋಟೋ ಬೇಕಾದರೂ ತೋರಿಸುತ್ತೇನೆ. ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಸುಮ್ಮನಿರಲ್ಲ. ಶಾಂತಿಯುತವಾಗಿ ಹೋರಾಟ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

ಸಿಎಂ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಎಂದು ಸ್ವಾಮೀಜಿ ಆರೋಪ ವಿಚಾರವಾಗಿ ಮಾತನಾಡಿ, ಸ್ವಾಮೀಜಿ ಬಗ್ಗೆ ಮಾತನಾಡಲ್ಲ, ಸ್ವಾಮೀಜಿ ಮಾತನಾಡಿರುವುದರ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು