LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಟಾಕಿ ಅವಘಡ ೨೫ ಮಂದಿಗೆ ಗಾಯ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸುವಾಗ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಪಾಲಿಸಲು ಸಾಕಷ್ಟು ಜಾಗೃತಿ ಮೂಡಿಸಿದರೂ, ಕಣ್ಣಿಗೆ ಗಾಯ ಮಾಡಿಕೊಳ್ಳುವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ.

ನಗರದಲ್ಲಿ ಸಿಡಿಸಿದ ಪಟಾಕಿ ೨೫ಕ್ಕೂ ಅಧಿಕ ಜನರು ಕಣ್ಣುಗಳಿಗೆ ಹಾನಿಮಾಡಿಕೊಂಡರೆ ೨೦ ಕ್ಕೂ ಹೆಚ್ಚು ಮಂದಿಯು ಮೈ ಕೈ ಸುಟ್ಟುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಗಾಯಗೊಂಡವರಲ್ಲಿ ಬಹುತೇಕರು ೧೮ ವರ್ಷದ ಒಳಗಿನವರಾಗಿದ್ದಾರೆ. ಎಂಟು ವರ್ಷದ ಬಾಲಕನೊಬ್ಬ ಪಟಾಕಿ ಸಿಡಿಸುವಾಗ ಕಿಡಿಯೊಂದು ತಗುಲಿ ಕಣ್ಣಿಗೆ ಗಂಭೀರ ಗಾಯವಾಗಿದ್ದು, ದೃಷ್ಟಿ ಕಳೆದುಕೊಳ್ಳುವ ಆತಂಕವಿದೆ. ಚಿಕಿತ್ಸೆ ನೀಡಲಾಗುತ್ತಿದೆ,'' ಎಂದು ಶಂಕರ್ ಕಣ್ಣಿನ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಪಟಾಕಿ ಸಿಡಿಸುತ್ತಿರುವುದನ್ನು ನೋಡುತ್ತಿದ್ದ ೩ ವರ್ಷದ ಹೆಣ್ಣು ಮಗುವಿಗೆ ಬೆಂಕಿಯ ಕಿಡಿ ತಗುಲಿ, ಕಣ್ಣಿನ ಕಾರ್ನಿಯಾಗೆ ಹಾನಿಯಾಗಿದೆ.

ಇನ್ನೊಂದೆಡೆ ೧೦ ವರ್ಷದ ಬಾಲಕನೊಬ್ಬ ಸಿಡಿಯದ ಪಟಾಕಿಯನ್ನು ಪರಿಶೀಲಿಸಲು ಮುಂದಾದ ವೇಳೆ ಸ್ಫೋಟಗೊಂಡು ಕಣ್ಣಿಗೆ ಗಾಯವಾಗಿದೆ.

ಮಿಂಟೊ ಆಸ್ಪತ್ರೆಯಲ್ಲಿ ಇಂದು ಕಣ್ಣಿಗೆ ಹಾನಿ ಮಾಡಿಕೊಂಡ ಮೂರು ಪ್ರಕರಣಗಳು ವರದಿಯಾಗಿವೆ. ಇಬ್ಬರು ಬಾಲಕರು ಮತ್ತು ೫ ವರ್ಷದ ಮಗುವಿಗೆ ಚಿಕಿತ್ಸೆ ನೀಡಲಾಗಿದೆ.

ಇಲ್ಲಿಯವರೆಗೆ ಮಿಂಟೋ ಆಸ್ಪತ್ರೆಯಲ್ಲಿ ೧೪ ಮಂದಿ ಕಣ್ಣಿಗೆ ಹಾನಿ ಮಾಡಿಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಬ್ಬ ಬಾಲಕ ಪಟಾಕಿ ಹಚ್ಚುವಾಗ ಮತ್ತು ಇನ್ನಿಬ್ಬರು ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದಾಗ ಕಣ್ಣಿಗೆ ಬೆಂಕಿಯ ಕಿಡಿ ತಾಗಿದೆ.

ನಾರಾಯಣ ನೇತ್ರಾಲಯದಲ್ಲಿ ೩ ಮಕ್ಕಳಿಗೆ ಹೊರ ರೋಗಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗಿದೆ.

ಇನ್ನೂ ಮೈಕೈ ಸುಟ್ಟ ಗಾಯಗೊಂಡವರು ವಿಕ್ಟೋರಿಯಾ ಹಾಗೂ ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಮಿAಟೋ ಆಸ್ಪತ್ರೆಯಲ್ಲಿ ಪಟಾಕಿ ಸಿಡಿತದಿಂದ ಐದು ಮಕ್ಕಳು ಸೇರಿದಂತೆ ಒಟ್ಟು ಒಂಬತ್ತು ಮಂದಿಗೆ ಚಿಕಿತ್ಸೆ ನೀಡಲಾಗಿದೆ.

ಮಿಂಟೋ ಆಸ್ಪತ್ರೆ ವೈದ್ಯೆ ಡಾ. ಶಿಲ್ಪ ನೇತೃತ್ವದಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ಮಾಹಿತಿ ನೀಡಿದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು