LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪತ್ನಿಯ ಕೊಂದವನಿಗೆ ಜೀವಾವಧಿ ಶಿಕ್ಷೆ

ಮಧುಗಿರಿ: ಶೀಲ ಶಂಕಿಸಿ ಪತ್ನಿಯನ್ನು ಭೀಕರವಾಗಿ ಕೊಲೆಗೈದ ಆರೋಪಿ ಪತಿಗೆ ಇಲ್ಲಿನ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಯಾದವ.ಕೆ ರವರು ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ.ದಂಡ ವಿಧಿಸಿದ್ದಾರೆ.

ತಾಲ್ಲೂಕಿನ ಬಡವನಹಳ್ಳಿ ವ್ಯಾಪ್ತಿಯ ಉಮಾನಹಳ್ಳಿಯ ಜಮೀನಿನಲ್ಲಿದ್ದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಆರೋಪಿ ಬಸವರಾಜ, ಹೆಂಡತಿ ಸಾವಿತ್ರಮ್ಮ, ಮಕ್ಕಳು ಆಗಾಗ ಬಂದು ಪೂಜೆ ಮಾಡಿಸಿಕೊಂಡು ರಾತ್ರಿ ದೇವಸ್ಥಾನದಲ್ಲಿ ಉಳಿದುಕೊಂಡು ಹೋಗುತ್ತಿದ್ದರು. 2020 ಮಾರ್ಚ್ 23 ರಂದು ಬಸವರಾಜು ಮತ್ತು ಸಾವಿತ್ರಮ್ಮ ಹಾಗೂ ಮಗಳು ದೇವಸ್ಥಾನಕ್ಕೆ ಮಾ.24ರಂದು ಕರೊನಾ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ವಾಹನ ಸಂಚಾರ ಇಲ್ಲದ್ದರಿಂದ ದೇವಸ್ಥಾನದಲ್ಲಿ ಉಳಿದುಕೊಂಡಿದ್ದ. ಇದಕ್ಕೂ ಮೊದಲು ಪತ್ನಿಯ ಶೀಲ ಶಂಕಿಸಿ ಜಗಳ ಮಾಡುತ್ತಿದ್ದ.

ಅಂತೆಯೇ ಅಂದು ಕೂಡ ಜಗಳ ಮಾಡಿದ್ದ. ಹಾಗೆಯೇ ಮಾ.31ರ ರಾತ್ರಿ ದೇವಸ್ಥಾನದ ಪಕ್ಕದಲ್ಲಿನ ಹೊಂಗೆ ಮರದ ಕೆಳಗೆ ಅಡುಗೆ ಮಾಡುತ್ತಿದ್ದ ಪತ್ನಿ ಸಾವಿತ್ರಮ್ಮ ಜತೆ ಜಗಳ ತೆಗೆದು ಅಲ್ಲೆ ಇದ್ದ ಕಲ್ಲನ್ನು ಆಕೆಯ ತಲೆ ಮೇಲೆ ಎತ್ತಿ ಹಾಕಿ ಕೊಲೆ ಮಾಡಿದ್ದ. ಅಂದಿನ ಪೊಲೀಸ್ ಇನ್‍ಸ್ಪೆಕ್ಟರ್ ಕೆ.ಪ್ರಭಾಕರ್ ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ - ಸಾಬೀತಾದ ಹಿನ್ನೆಲೆಯಲ್ಲಿ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು - ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಬಿ.ಎಂ.ನಿರಂಜನಮೂರ್ತಿ ವಾದ ಮಂಡಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು