LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯಿಂದಾಗಿ ಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಮತ್ತೊಂದು ಘಟನೆ ನಗರದ ಮಹಾಲಕ್ಷ್ಮೀ ಲೇಔಟ್​ನ ಮನೆಯಲ್ಲಿ ನಡೆದಿದೆ. ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಲಾರಿ ಮಾಲೀಕ 45 ವರ್ಷದ ಸ್ವಾಮಿ ಮೃತ ಪತಿ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮೃತನ ಸಂಬಂಧಿ ನಾಗರಾಜ್ ಎಂಬುವವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮೃತ ಸ್ವಾಮಿ ಒಳ್ಳೆಯ ಮನುಷ್ಯ. ಮದುವೆ, ಮನೆ, ಮಕ್ಕಳು ಅಂತ ಇದ್ದವರು. ಆತನ ಪತ್ನಿ ಕಳೆದ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿದ್ದರು.

ಆಗ ಅಲ್ಲಿ ಮೈಲಾರಾಪ್ಪ ಎಂಬುವವರು ಇದ್ದರು. ಆಗ ಅವರು ಯುನಿವರ್ಸಿಟಿ ರಿಜಿಸ್ಟರ್ ಆಗಿದ್ದರು. ಈಗ ನಿವೃತ್ತಿ ಹೊಂದಿದ್ದಾರೆ. ಅವರೊಂದಿಗೆ ಸಂಪರ್ಕ ಆಗಿದೆ. ಆ ಮೇಲೆ ಅವರ ಸಂಸಾರ ಹಾಳಾಗಿತ್ತು. ಈ ವಿಚಾರ ಮೈಲಾರಾಪ್ಪ ಪತ್ನಿಗೂ ಗೊತ್ತಿದ್ದು, ಅವರು ಸ್ವಾಮಿ ಮನೆಗೆ ಬಂದು ಬುದ್ಧಿ ಹೇಳಿದ್ದರು. ಆದರೆ ಸ್ವಾಮಿ ಪತ್ನಿ ಬಿಟ್ಟಿರಲಿಲ್ಲ.

ಇದಕ್ಕೆಲ್ಲಾ ಮನನೊಂದು ಸ್ವಾಮಿ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ ಮೂರು ಪುಟಗಳ ಡೆತ್ ನೋಟ್​​ ಬರೆದು ಇಟ್ಟಿದ್ದಾರಂತೆ. ಅದು ನಮಗೆ ಸಿಕ್ಕಿಲ್ಲ. ಪೊಲೀಸರು ಮಹಜರು ಮಾಡಿದಾಗ ನೋಡಬೇಕು ಎಂದು ಹೇಳಿದ್ದಾರೆ.

ಇತ್ತೀಚೆಗೆ ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಕೇಸ್‌ನ ತನಿಖೆ ಚುರುಕುಗೊಳಿಸಿರೋ ಬೆಂಗಳೂರಿನ ಮಾರತ್‌ಹಳ್ಳಿ ಪೊಲೀಸ್ರು ಕೊನೆಗೂ ಆರೋಪಿಗಳ ಹೆಡೆಮುರಿ ಕಟ್ಟಿದ್ದರು. ಟೆಕ್ಕಿ ಅತುಲ್​ ಘಟನೆ ಮಾಸುವ ಮುನ್ನವೆ ಹೆಂಡತಿ ಕಾಟಕ್ಕೆ ಬೈಯ್ಯಪ್ಪನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟು ಕಾನ್ ​ಸ್ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ಕೂಡ ಸಾಕಷ್ಟು ಚರ್ಚೆ ಆಗಿತ್ತು.

ಇನ್ನು ನೆಲಮಂಗಲದಲ್ಲಿ ಕೂಡ ಇಂತಹದೊಂದು ಘಟನೆ ನಡೆದಿತ್ತು. ಪತ್ನಿ ಹಾಗೂ ಆಕೆ ಪೋಷಕರ ಕಿರುಕುಳಕ್ಕೆ ಮನನೊಂದು ಕ್ರಿಕೆಟ್ ಆಟಗಾರ ಬಾಲರಾಜ್​ ಡೆತ್​ನೋಟ್ ಬರೆದಿಟ್ಟು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು