LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Hassan

 ಪತ್ನಿ ಕೊಂದು ನದಿಗೆ ಬಿಸಾಕಿದ ಪತಿ

ಹಾಸನ: ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ‌ ಪತ್ನಿಯನ್ನು ಬರ್ಬರವಾಗಿ ಪತಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ರಾಧಾ(40ವ) ಮೃತ ದುರ್ದೈವಿಯಾಗಿದ್ದು, ಶವವನ್ನು ಪತಿ ನದಿಗೆ ಎಸೆದಿದ್ದ. ಜನವರಿ 10ರರಂದು ರಾತ್ರಿ ಈ ಘಟನೆ ನಡೆದಿದೆ.

22 ವರ್ಷಗಳ ಹಿಂದೆ ಕುಮಾರ ಜೊತೆ ರಾಧಾ ವಿವಾಹವಾಗಿತ್ತು. ಆದರೆ ಪತ್ನಿ ಮೇಲೆ ಕುಮಾರ್ ಗೆ ಅನುಮಾನವಿತ್ತು. ಕಳೆದ 8 ವರ್ಷಗಳಿಂದ ಪತಿಯಿಂದ ರಾಧಾ ಬೇರೆಯಾಗಿ ವಾಸಿಸುತ್ತಿದ್ದರು. ಮೊನ್ನೆ ಜನವರಿ ಮೊದಲ ವಾರ ಕುಮಾರ್​​ ಶಬರಿಮಲೆಗೆ ತೆರಳಿದ್ದ. ಇರುಮುಡಿ ಕಟ್ಟುವಾಗ ಪತ್ನಿ ಸ್ಥಾನದಲ್ಲಿ ಬೇರೆ ಮಹಿಳೆಯಿಂದ ಪೂಜೆ ನಡೆದಿರುವ ಕಾರಣ ಈ ವಿಚಾರವನ್ನು ಪ್ರಶ್ನಿಸಲು ತಾನು ವಾಸವಿದ್ದ ಹಾಸನದ ಆಡುವಳ್ಳಿಯಿಂದ ಯಡೂರು ಗ್ರಾಮಕ್ಕೆ ರಾಧಾ ಬಂದಿದ್ದರು.

ಇದೇ ವಿಚಾರವಾಗಿ ಜನವರಿ 10ರ ರಾತ್ರಿ 10.30ರ ಸಮಯದಲ್ಲಿ ಕುಮಾರ ಮತ್ತು ರಾಧಾ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಪತ್ನಿ ರಾಧಾ ಕಪಾಳಕ್ಕೆ ಕುಮಾರ ಹೊಡೆದಿದ್ದ ಕಾರಣ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಳು.

ಘಟನೆ ಬಳಿಕ ಮಧ್ಯರಾತ್ರಿ 12 ಗಂಟೆ ಸಮಯದಲ್ಲಿ ರಾಧಾ ಶವಕ್ಕೆ ಬಟ್ಟೆ ಸುತ್ತಿ ಅದನ್ನು ಬೈಕ್‌ನಲ್ಲಿ ತೆಗೆದುಕೊಂಡು ಹೋಗಿ ಹಾಸನ ಹೊರವಲಯದ ಕಂದಲಿ ಬಳಿ ಹರಿಯುವ ಯಗಚಿ ನದಿಗೆ ಎಸೆದು ಬಂದಿದ್ದಾನೆ. ಬಳಿಕ ಘಟನೆ ಬಗ್ಗೆ ಪೊಲೀಸರಿಗೆ ನಿನ್ನೆ ಆರೋಪಿ ಮಾಹಿತಿ ನೀಡಿದ್ದಾನೆ, ಇಂದು ಯಗಚಿ ನದಿಯಿಂದ ರಾಧಾ ಶವವನ್ನು ಪೊಲೀಸರು ಹೊರತೆಗೆದಿದ್ದಾರೆ.

ಪ್ರಕರಣ ಸಂಬಂಧ ಸದ್ಯ ಆರೋಪಿ ಕುಮಾರ್​ನನ್ನು ಆಲೂರು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು