LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪತ್ರಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಸೂಕ್ತ ಕ್ರಮದ ಭರವಸೆ ನೀಡಿದ ಗೃಹ ಸಚಿವ

ಬೆಂಗಳೂರು: ಮಾಧ್ಯಮದವರ ಮೇಲೆ ಪೊಲೀಸ್ ದೌರ್ಜನ್ಯವಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಕೂಡಲೇ ನಿರ್ದೇಶನ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಭರವಸೆ ನೀಡಿದ್ದಾರೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಶುಕ್ರವಾರ ವಿಧಾನಸೌಧದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿ, ಮೈಸೂರಿನಲ್ಲಿ ದಸರಾ ಸಂದರ್ಭದಲ್ಲಿ ಕರ್ತವ್ಯನಿರತ ಪೋಟೋಗ್ರಾರ್ಸ್‍ಗಳ ಮೇಲೆ ಪೊಲೀಸರು ಮಾಡಿರುವ ದೌರ್ಜನ್ಯ ಮತ್ತು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಪತ್ರಕರ್ತರ ಮೇಲೆ ನಡೆದ ದೌರ್ಜನ್ಯದ ಘಟನೆಗಳನ್ನು ಗೃಹ ಸಚಿವರ ಗಮನಕ್ಕೆ ತಂದರು.

ಕರ್ತವ್ಯ ನಿರತ ಪತ್ರಕರ್ತರು, ಪೋಟೋಗ್ರಾರ್ಸ್, ವಿಡಿಯೋ ಜರ್ನಲಿಸ್ಟ್‍ಗಳ ಮೇಲೆ, ಆಗಿಂದಾಗ್ಗೆ ದೌರ್ಜನ್ಯ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಕೆಯುಡಬ್ಲೂಜೆ ಒತ್ತಾಯಿಸಿತು.ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಸಚಿವರು, ಮಾಧ್ಯಮದವರು ಮೇಲೆ ಈ ರೀತಿಯ ಘಟನೆಗಳು ಆಗಬಾರದು. ಹಿರಿಯ ಅಧಿಕಾರಿಗಳ ಹಂತದಲ್ಲಿ ಈ ರೀತಿಯ ಘಟನೆಗಳು ಆಗುವುದಿಲ್ಲ. ಆದರೆ, ತಳ ಹಂತದಲ್ಲಿ ಒಮ್ಮೊಮ್ಮೆ ಘಟನೆಗಳು ನಡೆದಿರುವುದು ನನ್ನ ಗಮನಕ್ಕೆ ಬಂದಿದೆ ಎಂದರು.

ಮೈಸೂರಿನಲ್ಲಿ ಪೋಟೋಗ್ರಾರ್ಸ್ ಮೇಲೆ ನಡೆದಿರುವ ಘಟನೆಯ ಬಗ್ಗೆ ಮೈಸೂರು ಪೊಲೀಸ್ ಆಯುಕ್ತರ ಜೊತೆ ಮಾತನಾಡುತ್ತೇನೆ. ತೀರ್ಥಹಳ್ಳಿ ಘಟನೆ ಬಗ್ಗೆಯೂ ಪರಿಶೀಲಿಸುತ್ತೇನೆ. ಎರಡೂ ಘಟನೆಗಳ ಬಗ್ಗೆ ಸೂಕ್ತ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು